ಕೊಡಗಿನಲ್ಲಿ ಕಾಡಾನೆ ದಾಳಿ: ನಿವೃತ್ತ ಐಜಿಪಿ ಪತ್ನಿ ಬಲಿ

KannadaprabhaNewsNetwork |  
Published : Jun 06, 2026, 02:30 AM IST
ಚಿತ್ರ : 5ಎಂಡಿಕೆ3 : ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಪೊನ್ನಣ್ಣ. | Kannada Prabha

ಸಾರಾಂಶ

ಕಾಡಾನೆ ದಾಳಿಯಿಂದ ನಿವೃತ್ತ ಐಜಿಪಿಯೊಬ್ಬರ ಪತ್ನಿ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೋಣನಕಟ್ಟೆಯಲ್ಲಿ ಶುಕ್ರವಾರ ನಡೆದಿದೆ.

ಪೊನ್ನಂಪೇಟೆ: ಕಾಡಾನೆ ದಾಳಿಯಿಂದ ನಿವೃತ್ತ ಐಜಿಪಿಯೊಬ್ಬರ ಪತ್ನಿ ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕಿನ ತಿತಿಮತಿ ಸಮೀಪದ ಕೋಣನಕಟ್ಟೆಯಲ್ಲಿ ಶುಕ್ರವಾರ ನಡೆದಿದೆ.

ನಿವೃತ್ತ ಐಜಿಪಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ (61) ಮೃತಪಟ್ಟಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಕಾಫಿ ತೋಟ ವೀಕ್ಷಿಸಲು ಹೋದ ಸಂದರ್ಭ ಕಾಡಾನೆ ಏಕಾ ಏಕಿ ದಾಳಿ ನಡೆಸಿದೆ. ದಾಳಿಗೊಳಗಾದ ಸಂಧ್ಯಾ ಅವರನ್ನು ಚಿಕಿತ್ಸೆಗಾಗಿ ಗೋಣಿಕೊಪ್ಪಲು ಲೋಪಾಮುದ್ರಾ ಆಸ್ಪತ್ರೆಗೆ ರವಾನೆ ವೇಳೆ ಸಂಧ್ಯಾ ಮೃತಪಟ್ಟಿದ್ದಾರೆ.

ಆನೆ ದಾಳಿಯಿಂದ ಓಡಿ ಹೋಗಿ ಇಬ್ಬರು ಕಾಫಿ ತೋಟದ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ. ಗಾಯಾಳು ಕಾರ್ಮಿಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಾರ್ವಜನಿಕರ ಆಕ್ರೋಶ: ಕೊಡಗು ಜಿಲ್ಲೆಯಲ್ಲಿ ಆನೆ ಹಾವಳಿ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಸಾರ್ವಜನಿಕರು ತಮ್ಮ ಆಕ್ರೋಶ ಹೊರ ಹಾಕಿದರು. ಗೋಣಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಶವಾಗಾರದ ಬಳಿ ಜಮಾಯಿಸಿದ ಸಾರ್ವಜನಿಕರು ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಜಿಲ್ಲೆಯಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿಯಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಆದರೂ ಅರಣ್ಯ ಇಲಾಖೆ ಹಾಗೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಪರಿಹಾರ ನೀಡಿ ಕೈತೊಳೆದುಕೊಳ್ಳುತ್ತಿದೆ. ಆದರೆ ಶಾಶ್ವತ ಕ್ರಮ ವಹಿಸಲು ಸಾಧ್ಯವಾಗಿಲ್ಲ ಎಂದರು.

ಆರೋಗ್ಯ ವಿಚಾರಿಸಿದ ಪೊನ್ನಣ್ಣ: ತಿತಿಮತಿ ಬಳಿಯ ಕೋಣನಕಟ್ಟೆಯಲ್ಲಿರುವ ತಮ್ಮ ಕಾಫಿ ತೋಟ ವೀಕ್ಷಿಸಲು ಹೋಗಿದ್ದಾಗ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರ ಪತ್ನಿ ಸಂಧ್ಯಾ ಎಂಬವರ ಮೇಲೆ ಹಾಗೂ ಇತರ ನಾಲ್ಕು ಮಂದಿಯ ಮೇಲೆ ಕಾಡಾನೆ ದಾಳಿ ನಡೆಸಿದೆ. ಆನೆ ದಾಳಿಗೊಳಗಾಗಿ ಗಾಯಗೊಂಡವರನ್ನು ಲೋಪಮುದ್ರ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಸಂಧ್ಯಾ ಅವರು ಮೃತಪಟ್ಟರು.

ಆಸ್ಪತ್ರೆಯಲ್ಲಿದ್ದ ಅರಣ್ಯ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಶಾಸಕ ಎ.ಎಸ್. ಪೊನ್ನಣ್ಣ ಅವರು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಮಿದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ಪ್ರಮುಖರಾದ ಸೂರಜ್ ಹೊಸೂರು, ರಾಜು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉತ್ಪಾದನೆಯ ಶೇ.70ಕ್ಕೂ ಅಧಿಕ ಕಾಫಿ ರಫ್ತು: ಬಸವರಾಜ್‌
ಕಾಂಗ್ರೆಸ್ ನಾಯಕರ ಹೇಳಿಕೆಗಳು ಹಾಸ್ಯಾಸ್ಪದ: ನವೀನ್ ನಾಯಕ್