ಕಾಡಾನೆ ದಾಳಿ: ಮಹಿಳೆಗೆ ಗಾಯ

KannadaprabhaNewsNetwork |  
Published : Jun 09, 2024, 01:38 AM IST
ಚಿತ್ರ.೨: ಕಾಡಾನೆ ದಾಳಿಗೆ ಸಿಲುಕಿರುವ ಮಹಿಳೆಯನ್ನು ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುನಿತಾ ಎಂಬಾಕೆಯನ್ನು ಚಿಕಿತ್ಸೆಗಾಗಿ ಕರೆ ತಂದಿರುವುದು. | Kannada Prabha

ಸಾರಾಂಶ

ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ನಡೆದಿದೆ. ಮತ್ತಿಕಾಡುವಿನ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿತಾ ಎಂಬಾಕೆ ಮೇಲೆ ಕಾಡಾನೆ ದಾಳಿ ನಡೆಸಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಮತ್ತಿಕಾಡುವಿನ ಕಾಫಿ ತೋಟವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸುನಿತಾ ಎಂಬಾಕೆ ಮೇಲೆ ಕಾಡಾನೆ ದಾಳಿ ನಡೆಸಿದ್ದು ಗಾಯಗೊಂಡ ಘಟನೆ ನಡೆದಿದೆ.

ಶನಿವಾರ ಬೆಳಗ್ಗೆ 10.30 ರ ಸಂದರ್ಭದಲ್ಲಿ ಮತ್ತಿಕಾಡುವಿನ ಮುನ್ಸಿಪ್ ತೋಟದಲ್ಲಿ 5 ಜನ ಕಾರ್ಮಿಕರು ಎಂದಿನಂತೆ ತೋಟದ ಕೆಲಸದಲ್ಲಿ ನಿರತರಾಗಿದ್ದರು. ಈ ಸಂದರ್ಭ ಏಕಾಏಕಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಇದರಿಂದ ಗಾಬರಿಗೊಂಡ 4 ಮಂದಿ ಕಾರ್ಮಿಕರು ಓಡಿ ತಪ್ಪಿಸಿಕೊಂಡಿದ್ದಾರೆ. ಅನತಿ ದೂರದಲ್ಲಿದ್ದ ಸುನಿತಾ (32) ಎಂಬಾಕೆ ಮೇಲೆ ದಾಳಿ ನಡೆಸಿದ್ದು ಪ್ರಾಣಾಪಾಯದಿಂದ ಪಾರಗಿದ್ದಾರೆ. ಗಾಯಗೊಂಡ ಮಹಿಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಸಾಗಿಸಿದೆ.

ಘಟನೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅರಣ್ಯಾಧಿಕಾರಿಗಳು ಹಾಗೂ ಆರ್‌ಆರ್ ಟಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ.ಅಧ್ಯಕ್ಷ ಪಿ.ಆರ್.ಸುನಿಲ್‌ ಕುಮಾರ್, ದಾದಿಯರು, ಡಿ ಗ್ರೂಫ್, ಆಶಾ ಕಾರ್ಯಕರ್ತೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ
ಮಂಗ್ಳೂರಿಗೆ 2 ಲಕ್ಷ ಟನ್‌ ಕಚ್ಚಾ ತೈಲ ಹಡಗು ಆಗಮನ