ಕನ್ನಡಪ್ರಭವಾರ್ತೆ, ಸಕಲೇಶಪುರ
ಸಕಲೇಶಪುರ, ಆಲೂರು ಮತ್ತು ಬೇಲೂರು ತಾಲೂಕುಗಳಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ರೈತರು ಮತ್ತು ಕಾರ್ಮಿಕರು ನಿತ್ಯ ಭಯದ ನೆರಳಿನಲ್ಲಿ ಬದುಕುವಂತಾಗಿದೆ. ಜೀವಹಾನಿ ಮತ್ತು ಬೆಳೆಹಾನಿ ತಡೆಗಟ್ಟಲು ಶ್ರೀಲಂಕಾ ಮಾದರಿಯಲ್ಲಿ ವೈಜ್ಞಾನಿಕ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ವಿಶ್ವನಾಥ್ ಅವರ ಮನವಿಗೆ ಪೂರಕವಾಗಿ ಸ್ಪಂದಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಶೀಘ್ರ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರನ್ನು ಕಾಡಾನೆ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಕರೆತಂದು ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲೂಕುಗಳಲ್ಲಿ ತೀವ್ರವಾಗಿರುವ ಆನೆ ಹಾವಳಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದೇನೆ. ಆನೆಗಳನ್ನು ನಿಯಂತ್ರಿಸಲು ಶ್ರೀಲಂಕಾದಲ್ಲಿ ಯಶಸ್ವಿಯಾಗಿರುವ ಬಲಿಷ್ಠ ವಿದ್ಯುತ್ ಬೇಲಿ ಮತ್ತು ಸಮುದಾಯ ಆಧಾರಿತ ನಿರ್ವಹಣಾ ಪದ್ಧತಿ ನಮ್ಮಲ್ಲೂ ಅಳವಡಿಸಿದರೆ ಸಮಸ್ಯೆ ಬಗೆಹರಿಯುವ ನೀರಿಕ್ಷೆ ಇದೆ ಎಂದು ಹೇಳಿದರು.