ಶಿವಮೊಗ್ಗ: ಪುರದಾಳು ಗ್ರಾಮದಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದು, ರೈತರ ತೋಟಗಳ ಮೇಲೆ ದಾಳಿ ನಡೆಸಿ ಅಡಕೆ ಮರಗಳನ್ನು ನಾಶ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಪದೇ ಪದೇ ಕಾಡಾನೆಗಳು ದಾಳಿ ನಡೆಸುತ್ತಿದ್ದು ರೈತರ ಬೆಳೆ ಕೈ ತಪ್ಪುತ್ತಿದ್ದರೂ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆಯ ವಿರುದ್ಧ ರೈತರು ಹಿಡಿ ಶಾಪ ಹಾಕುತ್ತಿದ್ದಾರೆ.
ಕಾಡಾನೆ ಹಾವಳಿ ತಪ್ಪಿಸಿ ರೈತರ ಬೆಳೆ ರಕ್ಷಿಸುವಂತೆ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದ್ದರೂ ಕಾಡಾನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದ್ದು, ಈ ಕೂಡಲೇ ಆನೆ ದಾಳಿ ತಡೆಯಲು ಸೋಲಾರ್ ಫೆನ್ಸಿಂಗ್ ಅಳವಡಿಸುವುದರ ಜೊತೆಗೆ ರೈತರಿಗೆ ಪರಿಹಾರ ನೀಡಬೇಕೆಂದು ಪುರದಾಳು ಗ್ರಾಮ ಪಂಚಾಯಿತಿ ಸದಸ್ಯ ಪ್ರದೀಪ್ ಎಸ್ ಹೆಬ್ಬೂರ್ ಅಗ್ರಹಿಸಿದ್ದಾರೆ.