ಕೊನೆ ಉಸಿರು ಇರೋವರೆಗೂ ಹೋರಾಡುವೆ

KannadaprabhaNewsNetwork |  
Published : Dec 02, 2024, 01:15 AM IST
1ಕೆಆರ್ ಎಂಎನ್ 9.ಜೆಪಿಜಿತಂಬಾಕು ಬೆಳೆಗಾರರೊಂದಿಗೆ ನಿಖಿಲ್ ರವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಮನಗರ: ನಮ್ಮ ಪಕ್ಷದ ಆಧಾರ ಸ್ತಂಭಗಳೇ ನಿಷ್ಠಾವಂತ ಕಾರ್ಯಕರ್ತರು. ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸ ಹೊಂದಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ರಾಮನಗರ: ನಮ್ಮ ಪಕ್ಷದ ಆಧಾರ ಸ್ತಂಭಗಳೇ ನಿಷ್ಠಾವಂತ ಕಾರ್ಯಕರ್ತರು. ರಾಮನಗರ ಜಿಲ್ಲೆ ನಮಗೆ ರಾಜಕೀಯ ಜೀವನ ನೀಡಿದೆ. ನನ್ನ ಜೀವನವೇ ಹೋರಾಟ, ನಾನು ಸಮುದ್ರದ ಅಲೆಗಳ ವಿರುದ್ಧ ಈಜುವ ಅಭ್ಯಾಸ ಹೊಂದಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬಿಡದಿ ಬಳಿಯ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ಆಯೋಜಿಸಿದ್ದ ಜೆಡಿಎಸ್‌ ಸಭೆಯಲ್ಲಿ ಮಾತನಾಡಿದ ಅವರು, 2019ರಲ್ಲಿ ಏನಾಯಿತು ಎಂಬುದು ನಿಮಗೆಲ್ಲರಿಗೂ ಗೊತ್ತಿದೆ. ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವವರ ಬಗ್ಗೆ ನಾನು ಎಂದಿಗೂ ಹಗುರವಾಗಿ ಮಾತನಾಡಿಲ್ಲ. ನಾನು ಯುವ ಸಮುದಾಯದ ಪೀಳಿಗೆಗೆ ನನ್ನದೇ ಆದ ಕೊಡುಗೆ ನೀಡಬೇಕೆನ್ನುವುದು ನನ್ನ ಆಶಯ ಎಂದರು.

ಸೋತಿದೀನಿ ಅಷ್ಟೇ, ಸತ್ತಿಲ್ಲ:

ನಾನು ಭಾವನಾತ್ಮಕ ಮನುಷ್ಯ. ಕುಮಾರಣ್ಣ ರೀತಿ ನಾನು ಜನರೊಂದಿಗೆ ಭಾವನಾತ್ಮಕವಾಗಿ ಅಂಟಿಕೊಂಡಿದ್ದೇನೆ. ನಾವು ಮುಂದಿನ ಸಾರ್ವತ್ರಿಕ ಚುನಾವಣೆಗೆ ಸಿದ್ಧರಾಗಬೇಕು. ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ತಿಳಿಸಿದರು.

ರಾಮನಗರ ಜಿಲ್ಲೆ ಕೂಡ ನಮ್ಮ ಕುಟುಂಬಕ್ಕೆ ಎಂಟು ಬಾರಿ ಶಾಸಕ ಸ್ಥಾನ, ಮೂರು ಬಾರಿ ಕುಮಾರಣ್ಣ ಅವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದೀರಾ, ಚುನಾವಣೆಯಲ್ಲಿ ಏಳು ಬೀಳು ಸರ್ವೆ ಸಾಮಾನ್ಯ. ಮುಂದಿನ ಚುನಾವಣೆಯಲ್ಲಿ

ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ:

ನಾನು ಶಾಸಕನಾಗುವುದೇ ನನ್ನ ಧ್ಯೇಯವಲ್ಲ, ಕನ್ನಡಿಗರ ಅಸ್ಮಿತೆಗಾಗಿ ಈ ಪಕ್ಷ ಉಳಿಯಬೇಕಿದೆ. ಆದ್ದರಿಂದ ನನ್ನ ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಹೋರಾಟವನ್ನು ರಕ್ತಗತವಾಗಿ ಮೈಗೂಡಿಸಿಕೊಂಡಿದ್ದೇನೆ. ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಅನಿರೀಕ್ಷಿತ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ. ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪ್ರಾದೇಶಿಕ ಪಕ್ಷ ಜೆಡಿಎಸ್‌. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ. ನಿಮ್ಮೆಲ್ಲರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು‌.

ಬಾಕ್ಸ್‌.........

ತಂಬಾಕು ಬೆಳೆಗೆ ಬೆಂಬಲ ಬೆಳೆ ಕೊಡಿಸಲು ಎಚ್ಡಿಕೆಗೆ ಮನವಿ

ತಂಬಾಕು ಬೆಳೆಗಾರರ ಸಭೆಯಲ್ಲಿ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ತಂಬಾಕು ಬೆಳೆದ ರೈತರು ಬೆಳೆಗೆ ಸೂಕ್ತ ಬೆಂಬಲ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮಗೆ ಸೂಕ್ತ ಬೆಂಬಲ ಕೊಡಿಸಿ ಎಂದು ರೈತರೊಂದಿಗೆ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.ಬೆಳೆಗಾರರಿಗೆ ಭರವಸೆ:

ತಂಬಾಕು ಬೆಳೆಗಾರರು ಕಡಿಮೆ ದರ್ಜೆಯ ತಂಬಾಕಿಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗ್ತಿಲ್ಲ ಮತ್ತು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದಕ್ಷಿಣ ಕರ್ನಾಟಕದ ಅದರಲ್ಲೂ ಹಳೆ ಮೈಸೂರು ಭಾಗದ ಬಹುತೇಕ ತಂಬಾಕು ಬೆಳೆದ ರೈತರು ಹೆಚ್ಚಿನ ಪ್ರಾಮಾಣದಲ್ಲಿ ಇದಾರೆ, ಕೇಂದ್ರ ಸಚಿವರು ಕುಮಾರಣ್ಣ ಅವರಿಗೆ ಭರವಸೆ ನೀಡಿದ್ದಾರೆ ಎಂದು ನಿಖಿಲ್ ತಿಳಿಸಿದರು.

1ಕೆಆರ್ ಎಂಎನ್ 9.ಜೆಪಿಜಿ

ಬಿಡದಿ ಬಳಿಯ ಕೇತಿಗಾನಹಳ್ಳಿಯ ತೋಟ ಮನೆಯಲ್ಲಿ ತಂಬಾಕು ಬೆಳೆಗಾರರೊಂದಿಗೆ ನಿಖಿಲ್, ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ