ಬ್ಯಾಡಗಿ: ಶಾಲಾ ಅಭಿವೃದ್ಧಿ ಸವಾಲಿನದ್ದಾಗಿರಬಹುದು. ಆದರೆ ಶೈಕ್ಷಣಿಕ ಬದಲಾವಣೆಗೆ ಯಶಸ್ವಿ ಕಾರ್ಯಕ್ರಮಗಳನ್ನು ಕೈಗೊಳ್ಳಲೇಬೇಕಾಗಿದೆ. ಇದರಿಂದ ಮಾತ್ರ ಪರಿಣಾಮಕಾರಿ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಗುಣಮಟ್ಟ ಕಾಯ್ದುಕೊಳ್ಳಿ: ಸದರಿ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ ಅವರು, ಕಳಪೆಯಾಗದಂತೆ ನೋಡಿಕೊಳ್ಳಬೇಕಾಗಿದೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶಿಕ್ಷಣ ಎಂಬುದು ಬಹಳ ಅತ್ಯಮೂಲ್ಯವಾದ ವಸ್ತುವಾಗಿದೆ, ಅವರನ್ನು ಮಾನಸಿಕವಾಗಿ ಸದೃಢಗೊಳಿಸುವ ಮೂಲಕ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ವಿಶ್ವಾಸರ್ಹತೆ ಮೂಡಿಸಬೇಕಾಗಿದೆ. ತನ್ಮೂಲಕ ಮಕ್ಕಳಿಗೆ ಶಿಕ್ಷಣದಲ್ಲಿ ಭವಿಷ್ಯವನ್ನು ಕಂಡುಕೊಳ್ಳುವಂತಹ ವಿದ್ಯಾಭ್ಯಾಸ ನೀಡಲು ಶಿಕ್ಷಕರು ಸಹ ದೃಢ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದರು.
ನನ್ನ ಶಾಲೆ ನನ್ನ ಜವಾಬ್ದಾರಿ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ಕೋಟಿ ಮಾತನಾಡಿ, ನಮ್ಮ ಕಾರ್ಯಾಲಯದಿಂದ ನನ್ನ ಶಾಲೆ ನನ್ನ ಕೊಡುಗೆ ಎಂಬ ಕಾರ್ಯಕ್ರಮವನ್ನು ಆರಂಭಿಸಿತ್ತು ತಾಲೂಕಿನ ಕದರಮಂಡಲಗಿ ಗ್ರಾಮದ ಮಾಜಿ ವಿದ್ಯಾರ್ಥಿಗಳು ರು.80 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡವನ್ನೇ ನಿರ್ಮಿಸಿದ್ದಾರೆ, ಇದರಿಂದ ಪ್ರೇರಣೆಗೊಂಡ ರಾಜ್ಯ ಶಿಕ್ಷಣ ಇಲಾಖೆ "ನನ್ನ ಶಾಲೆ ನನ್ನ ಜವಾಬ್ದಾರಿ " ಎಂಬ ಅಭಿಯಾನ ಆರಂಭಿಸಿದ್ದು ರಾಜ್ಯದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ, ಹಿರೇಹಳ್ಳಿಯಲ್ಲಿಯೂ ಮಾಜಿ ವಿದ್ಯಾರ್ಥಿಗಳು ಕಲಿತ ಶಾಲೆಗೆ ತಮ್ಮದೇ ಆದ ಕೊಡುಗೆ ನೀಡುವಂತೆ ಕರೆ ನೀಡಿದರು.