ಗ್ರಾಮೀಣ ಪ್ರದೇಶ ಅಭಿವೃದ್ಧಿಗೆ ಒತ್ತು: ಮಂಜುನಾಥ್‌

KannadaprabhaNewsNetwork |  
Published : Jun 22, 2026, 01:45 AM IST
ಗ್ರಾಮಾಂತರ ಪ್ರದೇಶದ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಹೆಚ್ಚಿನ ಒತ್ತು | Kannada Prabha

ಸಾರಾಂಶ

ಗ್ರಾಮಾಂತರ ಪ್ರದೇಶದ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ಹೇಳಿದರು.

ಮಿಣ್ಯಂ, ಹೂಗ್ಯಂ ಗ್ರಾಪಂ ವ್ಯಾಪ್ತಿಯಲ್ಲಿ ₹1.40 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಿಂದ ಚಾಲನೆ

ಕನ್ನಡಪ್ರಭ ವಾರ್ತೆ ಹನೂರು

ಗ್ರಾಮಾಂತರ ಪ್ರದೇಶದ ಗ್ರಾಮಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ಹೇಳಿದರು.ಹನೂರು ತಾಲೂಕಿನ ಮಿಣ್ಯಂ ಹಾಗೂ ಹೂಗ್ಯಂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚರಂಡಿ ಹಾಗೂ ರಸ್ತೆ ಅಭಿವೃದ್ಧಿಗೆ 1. 40 ಕೋಟಿ ರು. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.ತಾಲೂಕಿನ ಗಡಿ ಹಂಚಿನ ಗುಡ್ಡಗಾಡು ಪ್ರದೇಶದ ವಿವಿಧ ಗ್ರಾಮಗಳಲ್ಲಿ ಹಲವಾರು ವರ್ಷಗಳಿಂದ ಸಿಸಿ ರಸ್ತೆ ಚರಂಡಿ ನಿರ್ಮಾಣಕ್ಕೆ ಗ್ರಾಮಸ್ಥರು ಹೆಚ್ಚಿನ ಒತ್ತು ನೀಡುವಂತೆ ಮನವಿ ಮಾಡಿದ್ದರು. ಅದರಂತೆ ವಿವಿಧ ಗ್ರಾಮಗಳಲ್ಲಿ ಗ್ರಾಮಂತರ ಪ್ರದೇಶದ ವಿವಿಧ ಗ್ರಾಮಗಳಲ್ಲಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.ಮಿಣ್ಯಂ ಗ್ರಾಮದಲ್ಲಿ ಟಿಎಸ್ಪಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿಗೆ ಮತ್ತು ತಾಲೂಕಿನ ಕೊಪ್ಪ ಭಾಗದಲ್ಲಿ 3.5 ಕಿ.ಮೀ. ಹಾಗೂ ಹೂಗ್ಯಂನಲ್ಲಿ 4 ಕಿ.ಮೀ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಹೀಗಾಗಿ ಕಾಮಗಾರಿ ನಡೆಸುವ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಯನ್ನು ನಿರ್ಮಿಸಲು ಗ್ರಾಮಸ್ಥರ ಸಹಕಾರದೊಂದಿಗೆ ಲೋಪದೋಷ ಬಾರದಂತೆ ಕಾಮಗಾರಿ ನಿರ್ವಹಣೆ ಮಾಡುವಂತೆ ಸೂಚನೆ ನೀಡಿದರು.

ಏತ ನೀರಾವರಿಗೆ ಪ್ರಸ್ತಾವನೆ ಸಲ್ಲಿಕೆ:ತಾಲೂಕಿನ ಗಡಿಯಂಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನೀರಾವರಿ ಯೋಜನೆಗಳಿಗೆ ಪಾಲಾರ್‌ ನದಿಯಿಂದ ಏತ ನೀರಾವರಿ ಮೂಲಕ ಗ್ರಾಮಗಳಿಗೆ ನೀರಾವರಿ ಕಲ್ಪಿಸುವ ಯೋಜನೆಗೆ ಸರ್ಕಾರಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ತಾಲೂಕಿನ ರಾಮಪುರ ವ್ಯಾಪ್ತಿಯ ನೀರಾವರಿ ಯೋಜನೆಗೆ ಸರ್ಕಾರ 490 ಕೋಟಿ ರು. ಅನುದಾನ ನೀಡಿದೆ. ಉಳಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಮುಂದಿನ ದಿನಗಳಲ್ಲಿ ಈ ಭಾಗದ ರೈತರ ಅನುಕೂಲಕ್ಕಾಗಿ ನೀರಾವರಿ ಯೋಜನೆ ಕಲ್ಪಿಸಲು ಶ್ರಮಿಸುವುದಾಗಿ ತಿಳಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಮುಖಂಡರುಗಳು ಉಪಸ್ಥಿತರಿದ್ದರು.

---

21ಸಿಎಚ್ಎನ್‌14

ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಚರಂಡಿ ಹಾಗೂ ರಸ್ತೆ ಅಭಿವೃದ್ಧಿಗೆ ಶಾಸಕ ಎಂ.ಆರ್‌. ಮಂಜುನಾಥ್ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಎಚ್ಚರಿಕೆ ಅಗತ್ಯ
ಯೋಗದಿಂದ ಆರೋಗ್ಯಕರ ಜೀವನ ಸಾಧ್ಯ ಎಂದ ಸಂಸದ