ಕನ್ನಡಪ್ರಭ ವಾರ್ತೆ ಮಾಲೂರು
ಅವರು ಇಲ್ಲಿನ ಹೊಸಕೋಟೆ ರಸ್ತೆಯ ಚೊಕ್ಕಂಡಹಳ್ಳಿ ಗೇಟ್ ನಲ್ಲಿರುವ ಎಸ್‌ಜೆಪಿ ಕಚೇರಿಯಲ್ಲಿ ಸ್ವಾಭಿಮಾನಿ ಜನತಾ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜೆಲ್ಲೆಯ ಶ್ರೀನಿವಾಸಪುರ ದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಕೋಲಾರ ಹಾಗೂ ಮುಳಬಾಗಿಲಿನಲ್ಲಿ ಜೆಡಿಎಸ್‌ಗೆ ಟಿಕೆಟ್ ನೀಡಲಿದ್ದಾರೆ. ಮಾಲೂರು ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಠರು ಮಾತು ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಬಹಳ ಮುಖ್ಯ ಎಂದರು.
ತಾಲೂಕಿನಲ್ಲಿ ಕಳೆದ 1 ತಿಂಗಳಿಂದ ರಾಜಕೀಯವಾಗಿ ಬಹಳ ಚರ್ಚೆಗಳು ನಡೆಯುತ್ತಿವೆ. ಜೆಡಿಎಸ್ ಸೇರ್ಪಡೆಯಾಗುವ ವಿಚಾರದಲ್ಲಿ ನಮ್ಮ ಸ್ವಾಭಿಮಾನಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯಪಡೆಯವ ನಿಟ್ಟಿನಲ್ಲಿ ಈ ಸಭೆಯನ್ನು ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಭಾಗವಹಿಸಿ ತಮಗೆ ಬೆಂಬಲ ನೀಡುತ್ತಿರುವುದು ಒಳ್ಳೇಯ ಬೆಳವಣಿಗೆಯಾಗಿದೆ. ಈ ಹಿಂದೆ ಬಿಜೆಪಿ ಪಕ್ಷದಲ್ಲಿ ಗುರ್ತಿಸಿಕೊಂಡು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಹಕಾರದಿಂದ ತಾಲೂಕಿನಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಲಾಗಿತ್ತು.ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ. ಚುನಾವಣೆಯ ಕೊನೆಯ ಹಂತದಲ್ಲಿ ಪಕ್ಷದ ವರಿಷ್ಠರು ನನಗೆ ಟಿಕೆಟ್ ತಪ್ಪಿಸಿ ಬೇರೆಯವರಿಗೆ ನೀಡಿದ ಹಿನ್ನೆಲೆಯಲ್ಲಿ ನಮ್ಮ ಮುಖಂಡರ ತೀರ್ಮಾನದಂತೆ ಸ್ವಾಭಿಮಾನಿ ಜನತಾ ಪಕ್ಷದ ಪಕ್ಷೇತೆರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಕಡಿಮೆ ಅವಧಿಯಲ್ಲಿ ತಾಲೂಕಿನ ಜನತೆ ತಮಗೆ 50 ಸಾವಿರ ಮತಗಳನ್ನು ನೀಡಿದ್ದರು. ನಾನು ಚುನಾವಣೆಯಲ್ಲಿ ಸೋತಿರಬಹುದು. ಆದರೆ, ಜನರ ಮನಸ್ಸಿನಲ್ಲಿ ಗೆಲ್ಲಿಸಿದ್ದಾರೆ. ಚುನಾವಣೆಯಲ್ಲಿ ಬೇರೆಯವರು ಗೆದ್ದಿರಬಹುದು, ಆದರೆ, ಜನರ ಮನಸ್ಸಿನಲ್ಲಿ ನಾನು ಗೆದ್ದಿದ್ದೇನೆ ಎಂದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದು, ಶ್ರೀನಿವಾಸಪುರದಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಕೋಲಾರ ಹಾಗೂ ಮುಳಬಾಗಿಲಿನಲ್ಲಿ ಜೆಡಿಎಸ್‌ಗೆ ನೀಡಲಿದ್ದಾರೆ. ಮಾಲೂರು ತಾಲೂಕಿನಲ್ಲಿ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವ ಬಗ್ಗೆ ಮಾತು ಕೊಟ್ಟಿದ್ದಾರೆ. ನಾವೇಲ್ಲರೂ ಬೆಂಗಳೂರಿಗೆ ಹೋಗಿ ಕುಮಾರಸ್ವಮಿ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗೋಣ. ಗ್ರಾಮಗಳಲ್ಲಿ ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಿರುವವರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಸ್ವಾಭಿಮಾನಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.