ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

KannadaprabhaNewsNetwork | Updated : Mar 21 2025, 12:09 PM IST

ಸಾರಾಂಶ

ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ. 2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ.

 ಮಳವಳ್ಳಿ : ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದು ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ತಾಲೂಕಿನ ಅಮೃತೇಶ್ವರನಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಯುವಕರ ಅಭಿಮಾನಿಗಳ ಸಂಘವನ್ನು ಗುರುವಾರ ಉದ್ಘಾಟಿಸಿ ಮಾತನಾಡಿ, ಜೆಡಿಎಸ್ ಪ್ರಾಮಾಣಿಕ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನನ್ನ ಹೃದಯದಲ್ಲಿದ್ದಾರೆ. ನನ್ನ ಹೆಸರಿನಲ್ಲಿ ಅಭಿಮಾನಿಗಳ ಸಂಘ ಕಟ್ಟಿ ಪಕ್ಷ ಸಂಘಟನೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದರು.

ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್‌ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ ಎಂದರು.2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ನೀವೆಲ್ಲರೂ ಅಪೇಕ್ಷೆಪಟ್ಟರೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಜ್ಯದ 31 ಜಿಲ್ಲೆಗಳ ಲಕ್ಷಾಂತರ ಕಾರ್ಯಕರ್ತರು ಕಟ್ಟಿ ಬೆಳೆಸಿದ ಪ್ರಾದೇಶಿಕ ಪಕ್ಷಕ್ಕೆ ಭದ್ರ ಬುನಾದಿ ಹಾಕುವ ದೃಷ್ಟಿಯಿಂದ ನಾನು ಸದ್ಯದ ಮಟ್ಟಿಗೆ ಚುನಾವಣೆ ಬೇಡ ಎನ್ನುವ ತೀರ್ಮಾನಕ್ಕೆ ಬರಬೇಕಾಯಿತು ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡಿ ಪ್ರಪಂಡ ಗೆಲುವು ಸಾಧಿಸಿ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ನಿಮ್ಮೆಲ್ಲರ ಬಯಕೆಯಂತೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ತರಲು ಶ್ರಮಿಸಲಾಗುವುದು ಎಂದರು.

ನನ್ನ ಹೆಸರಿನಲ್ಲಿ ಅಭಿಮಾನಿಗಳ ಸಂಘ ಕಟ್ಟಿ ಪಕ್ಷದ ಸಂಘಟನೆಗೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಮುಂದುವರಿಯಲಿ. ಇದಕ್ಕೆ ತಾವು ಸದಾ ಕೈ ಜೋಡಿಸುವುದಾಗಿ ಭರವಸೆ ನೀಡಿದರು.

ಅಭಿಮಾನಿಗಳ ಸಂಘವನ್ನು ಉದ್ಘಾಟಿಸಲು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮುಖಂಡರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಅನ್ನದಾನಿ, ಜೆಡಿಎಸ್ ಯುವ ಘಟಕದ ಜಿಲ್ಲಾ ಅಧ್ಯಕ್ಷ ಬಿ.ರವಿ ಕಂಸಾಗರ, ಪುರಸಭೆ ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ಟಿ.ನಂದಕುಮಾರ್, ಸಿದ್ದರಾಜು, ಗ್ರಾಪಂ ಅಧ್ಯಕ್ಷ ಮರಿಸ್ವಾಮಿ, ಉಪಾಧ್ಯಕ್ಷೆ ಸುಧಾ, ಸದಸ್ಯ ಪುಟ್ಟರಾಜು, ಪಿಎಲ್ಡಿ ಬ್ಯಾಂಕ್ ನಿರ್ದೇಶಕರಾದ ದೊಡ್ಡಮಾದೇಗೌಡ, ಹನುಮಂತು, ಜವರೇಗೌಡ, ಮುಖಂಡರಾದ ರೇವಣ್ಣ, ಕುಮಾರ್, ಶಂಕರೇಗೌಡ,

Share this article