
ಕನ್ನಡಪ್ರಭ ವಾರ್ತೆ ತುಮಕೂರು
2023-24, 2024-25 ಮತ್ತು 2025-26 ನೇ ಸಾಲಿನ ಯೋಜನೆಗಳು ಹಾಗೂ ಹಾಗೂ ಇನ್ನಿತರ ಸೌಲಭ್ಯಗಳ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು.ಬಹುತೇಕ ನಿಗಮಗಳು ತಮ್ಮ ವಾರ್ಷಿಗ ಗುರಿ ಸಾಧಿಸಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಕೊಳವೆಬಾವಿ ಕೊರೆಯುವುದರಲ್ಲಿ ಆಸಕ್ತಿ ತೋರಿಸಿಲ್ಲ. ಈಗಾಗಲೇ ಕೊರೆದಿರುವ ಪ್ರಕರಣಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸದೆ ನಿರ್ಲಕ್ಷ ಮಾಡಿರುವುದನ್ನು ಗಮನಿಸಿದ ಶಾಸಕರು, ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿಲ್ಲ ಏಕೆ? ಎಂದು ಶಾಸಕ ಸುರೇಶ್‌ಗೌಡ ಖಾರವಾಗಿ ಪ್ರಶ್ನಿಸಿದರು. ಶಾಸಕರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡುವಲ್ಲಿ ಅಧಿಕಾರಿಗಳು ವಿಫಲರಾದರು. ಸರ್ಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ತೀವ್ರ ನಿರ್ಲಕ್ಷ, ನಿರಾಸಕ್ತಿ ವಹಿಸಿದ್ದೀರಿ ಎಂದು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಸಾರಥಿ ಪಲಾನುಭವಿಗಳಿಗೆ ನೇರಸಾಲ, ಗಂಗಾಕಲ್ಯಾಣ ಯೋಜನೆ, ಸ್ವಾವಲಂಬಿ ಯೋಜನೆ, ಮುಂತಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಫಲಾನುಭವಿಗಳಿಂದ, ರೈತರಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೌಲಭ್ಯಗಳನ್ನು ತಲುಪಿಸಬೇಕು. ಲಂಚ ಪಡೆದು ಸವಲತ್ತು ನೀಡಿದರೆ ಸಹಿಸುವುದಿಲ್ಲ ಎಂದು ಶಾಸಕರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀನಾರಾಯಣಸ್ವಾಮಿ, ಸಹಾಯಕ ನಿರ್ದೇಶಕ ಮಂಜುನಾಥ್, ತಾಲ್ಲೂಕು ಪಂಚಾಯ್ತಿ ಯೋಜನಾಧಿಕಾರಿ ಲೋಕೇಶ್, ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಪಕರಾದ ವೆಂಕಟರಾಜು ಸೇರಿದಂತೆ ವಿವಿಧ ನಿಗಮಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.