ಅಂಬೇಡ್ಕರ್‌ ಸೋಲಿಗೆ ಸಾವರ್ಕರ್ ಕಾರಣ ಸಾಬೀತು ಪಡಿಸಿದರೆ ರಾಜೀನಾಮೆ: ಛಲವಾದಿ ನಾರಾಯಣಸ್ವಾಮಿ

KannadaprabhaNewsNetwork |  
Published : Apr 16, 2025, 12:37 AM IST

ಸಾರಾಂಶ

ಸಚಿವ ಪ್ರಿಯಾಂಕ್ ಖರ್ಗೆ ಅಂತಹವರ ಹೇಳಿಕೆ ಸಮರ್ಥಿಸಿ ಸಿಎಂ ಸಿದ್ದರಾಮಯ್ಯ ಮಾತನಾಡುವುದು ಬಹಳ ವಿಪರ್ಯಾಸದ ಸಂಗತಿ.

ಹುಬ್ಬಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಸೋಲಿಗೆ ವೀರ ಸಾವರ್ಕರ್ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಇದನ್ನು ಅವರು ಸಾಬೀತು ಮಾಡಿದರೆ ನಾನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಒಂದು ವೇಳೆ ಸಾಬೀತು ಮಾಡಲು ವಿಫಲವಾದರೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ, ರಾಜಕೀಯ ಸನ್ಯಾಸತ್ವ ಸ್ವೀಕಾರ ಮಾಡಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸವಾಲು ಹಾಕಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅಂತಹವರ ಹೇಳಿಕೆ ಸಮರ್ಥಿಸಿ ಸಿಎಂ ಸಿದ್ದರಾಮಯ್ಯ ಮಾತನಾಡುವುದು ಬಹಳ ವಿಪರ್ಯಾಸದ ಸಂಗತಿ. ಇಂತಹ ಹಗುರವಾದ ಹೇಳಿಕೆಗಳನ್ನು ಸಿದ್ದರಾಮಯ್ಯ ಕೊಡಬಾರದಿತ್ತು, ಇದು ಅವರ ವ್ಯಕ್ತಿತ್ವಕ್ಕೆ ಗೌರವ ತರುವುದಿಲ್ಲ, ಸಿದ್ದರಾಮಯ್ಯ ನಾವು ಹಾಕಿದ ಸವಾಲನ್ನು ಸ್ವೀಕಾರ ಮಾಡಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಅವರು ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೂರ್ತಿ ಹಿಡಿದುಕೊಳ್ಳದೆ ಕೆಳಗೆ ಕೆಡವಿದ್ದಾರೆ. ಅಂಬೇಡ್ಕರ್ ಬಗ್ಗೆ ಸಿಎಂಗೆ ಶ್ರದ್ಧೆ ಇಲ್ಲ. ಅಂಬೇಡ್ಕರ್ ದೊಡ್ಡ ದೊಡ್ಡ ಮೂರ್ತಿ ಮಾಡಿದ್ದು, ಗೌರವ ನೀಡಿದ್ದು ಬಿಜೆಪಿ. ಅಂಬೇಡ್ಕರ್ ಅವರ ಐದು ಕ್ಷೇತ್ರಗಳನ್ನು ಅಂತಾರಾಷ್ಟ್ರೀಯ ಸ್ಮಾರಕ ಮಾಡಿದ್ದು ಬಿಜೆಪಿ. ಅಷ್ಟೇ ಅಲ್ಲ ರಾಜ್ಯದಲ್ಲಿ ಅಂಬೇಡ್ಕರ್ ಭೇಟಿ ನೀಡಿದ ಧಾರವಾಡ, ಹಾಸನ, ಕೋಲಾರ, ಬೆಳಗಾವಿ ಸೇರಿದಂತೆ 7 ಜಿಲ್ಲೆಗಳಲ್ಲಿಯೂ ಸ್ಮಾರಕ ಮಾಡಲು ಪ್ರೇರಣೆ ನೀಡಿದ್ದು ಬಿಜೆಪಿ. ಆದರೂ, ಕಾಂಗ್ರೆಸ್ಸಿನವರು ಸುಳ್ಳು ಸೃಷ್ಟಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜನಾಕ್ರೋಶ:

ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಜನಾಕ್ರೋಶ ಯಾತ್ರೆ ಆರಂಭಿಸಲಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಆಡಳಿತ ಸರ್ಕಾರ ಕೇವಲ ಗ್ಯಾರಂಟಿ ಮೂಲಕ ಐದು ವರ್ಷ ಪೂರೈಸಿದರೆ ಸಾಕು ಎಂಬ ಚಿಂತನೆಯಲ್ಲಿದೆ ಎಂದರು.

ಜನ ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ. ಅದು ಕೇಂದ್ರ ಸರ್ಕಾರಕ್ಕೆ ಮಾತ್ರವಿದೆ. ಆದರೆ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ರಾಜಕೀಯ ಪರಿಸ್ಥಿತಿ ಬಗ್ಗೆ ಅವಲೋಕಿಸಲು ಜಾತಿ ಗಣತಿ ಮಾಡಬೇಕು. ಆದರೆ, ಇದನ್ನೇ ಆಧಾರವಾಗಿಟ್ಟುಕೊಂಡು ಮೀಸಲಾತಿ ಕೊಡಲು ಮತ್ತು ಹೆಚ್ಚಿಸಲು ಸಾಧ್ಯವಿಲ್ಲ. ಇದು 10 ವರ್ಷದ ಹಿಂದಿನ ವರದಿಯಾಗಿದ್ದು, ಇದರಲ್ಲಿ ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿಯಲ್ಲಿಯೂ ವಿಂಗಡಣೆ ಮಾಡಿದ್ದಾರೆ. ಇದರಿಂದ ಗೊಂದಲ ಸೃಷ್ಟಿಸಿ ಕಾಂಗ್ರೆಸ್‌ ತನ್ನ ವೋಟ್ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಹೊರಟಿಸಿದೆಯೇ ಹೊರತು, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದರು.

ಮುಸ್ಲಿಂ ಸಮುದಾಯದಲ್ಲಿ ಅನೇಕ ಜಾತಿಗಳಿವೆ. ಅವರಲ್ಲಿ ಎಲ್ಲರನ್ನೂ ಒಂದು ಮಾಡಿ ಮುಸ್ಲಿಂರನ್ನು ಅತೀ ಹೆಚ್ಚು ಅಂತ ಬಿಂಬಿಸಿದ್ದೀರಿ. ಇಷ್ಟು ದಿನ ಯಾರು ಅಲ್ಪಸಂಖ್ಯಾತರು ಇದ್ದರು, ಈಗ ಅವರು ಬಹುಸಂಖ್ಯಾತರಾಗಿದ್ದಾರೆ. ಹಾಗಿದ್ದರೆ ಅವರಿಗೆ ಅಲ್ಪಸಂಖ್ಯಾತ ಸೌಲಭ್ಯ ಯಾಕೆ? ಕಾಂಗ್ರೆಸ್ಸಿನಿಂದ ಮುಸ್ಲಿಮರಿಗೆ ಯಾವುದು ಉಪಯೋಗವಾಗುತ್ತಿಲ್ಲ. ಮುಸ್ಲಿಂರನ್ನು ಅತೀ ಹೆಚ್ಚು ಅಂತ ತೋರಿಸಿ ಅವರನ್ನು ಇತರರ ಕೆಂಗಣ್ಣಿಗೆ ಗುರಿ ಮಾಡಿದ್ದೀರಿ ಎಂದು ಕಿಡಿ ಕಾರಿದರು.

ವಕ್ಫ್‌ ಆಸ್ತಿಬಾಸ್ತಿ ಲೂಟಿ:

ವಕ್ಪ್ ತಿದ್ದುಪಡಿ ಮಸೂದೆಯನ್ನು ನಾವು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂಬ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರ ಸದನದಲ್ಲಿ ಸುದೀರ್ಘ ಚರ್ಚೆ ಮಾಡಿ ವಕ್ಪ್ ತಿದ್ದುಪಡಿ ಮಸೂದೆಯನ್ನು ಪಾಸ್ ಮಾಡಿದೆ. ವಕ್ಪ್ ಆಸ್ತಿಯನ್ನ ಲೂಟಿ ಮಾಡಲಾಗುತ್ತಿದೆ. ಇದನ್ನು ತಡೆಯಲು ಕೇಂದ್ರದ ನಿರ್ಧಾರವನ್ನು ರಾಜ್ಯಗಳು ಪಾಲನೆ ಮಾಡಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ