ತುಳು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಮತ್ತೊಮ್ಮೆ ಸಂಸತ್ತಿನಲ್ಲಿ ಪ್ರಸ್ತಾಪ: ಹೆಗ್ಗಡೆ

KannadaprabhaNewsNetwork |  
Published : Dec 24, 2025, 03:15 AM IST
ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಕಡಬ ತಾಲೂಕಿನ ಕೇಪು ಗ್ರಾಮದ ಶ್ರೀ ಮಹಾಗಣಪತಿ ಲಕ್ಷ್ಮೀ ಜನಾರ್ದನ ಆಂಜನೇಯ ದೇವಸ್ಥಾನದ ವಠಾರದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ

ಉಪ್ಪಿನಂಗಡಿ: ತುಳು ಭಾಷೆ ತನ್ನದೆ ಆದ ನೆಲೆಗಟ್ಟಿನಲ್ಲಿ ಸಮೃದ್ಧಿಯಿಂದ ಬೆಳೆಯುತ್ತಿದೆ. ತುಳು ಎಲ್ಲಾ ಜಾತಿಯವರು ವ್ಯಾವಹಾರಿಕವಾಗಿ ಬಳಕೆ ಮಾಡುವ ಭಾಷೆಯಾಗಿದೆ. ಹೀಗಾಗಿ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಪಾರ್ಲಿಮೆಂಟ್‌ನಲ್ಲಿ ಈ ಹಿಂದೆಯೇ ಪ್ರಸ್ತಾಪ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉಜಿರೆಗೆ ಆಗಮಿಸಿದ ಸಂದರ್ಭದಲ್ಲೂ ಮನವಿ ಮಾಡಲಾಗಿತ್ತು. ಈ ನಿಟ್ಟಿನಲ್ಲಿ ಮತ್ತೊಮ್ಮೆ ಪಾರ್ಲಿಮೆಂಟ್‌ನಲ್ಲಿ ಪ್ರಸ್ತಾಪ ಮಾಡುವುದಾಗಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ ಹಾಗೂ ತೆಗ್‌ರ್ ತುಳುಕೂಟ ನೂಜಿಬಾಳ್ತಿಲ ಆಶ್ರಯದಲ್ಲಿ ಕಡಬ ತಾಲೂಕಿನ ಕೇಪು ಗ್ರಾಮದ ಶ್ರೀ ಮಹಾಗಣಪತಿ ಲಕ್ಷ್ಮೀ ಜನಾರ್ದನ ಆಂಜನೇಯ ದೇವಸ್ಥಾನದ ವಠಾರದಲ್ಲಿ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ಸಭಾಂಗಣದ ಡಾ.ವೆಂಕಟರಾಜ ಪುಣಂಚಿತ್ತಾಯ ಚಾವಡಿಯಲ್ಲಿ ನಡೆದ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನವನ್ನು ತೆಂಗಿನ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಶಯ ಭಾಷಣ ಮಾಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು, ತುಳು ಸಾಹಿತ್ಯದ ಆಳ, ವಿಸ್ತಾರವನ್ನು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಅಕಾಡೆಮಿ ವಿವಿಧ ಕಾರ್ಯಕ್ರಮ ಆಯೋಜಿಸಿದೆ. 45 ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಕಲಿಸಲಾಗುತ್ತಿದೆ ಎಂದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆರ್ಶೀವಚನ ನೀಡಿದರು. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ, ಕುಟ್ರುಪ್ಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮನ ಶುಭಹಾರೈಸಿದರು.

ಸಮ್ಮೇಳನಾಧ್ಯಕ್ಷರಾದ ಕೆ.ಸೇಸ್ಪಪ ರೈ ರಾಮಕುಂಜ ಅಧ್ಯಕ್ಷತೆ ವಹಿಸಿದ್ದರು. ಯಶೋಧರ ಯಾನೆ ತಮ್ಮಯ್ಯ ಬಳ್ಳಾಲ್ ರೆಂಜಿಲಾಡಿಬೂಡು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ದುರ್ಗಾ ಪ್ರಸಾದ್ ರೈ ಕುಂಬ್ರ, ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ, ಕಡಬ ಸ್ಪಂದನಾ ಸಮುದಾಯ ಸಹಕಾರ ಸಂಘದ ಅಧ್ಯಕ್ಷ ಕೇಶವ ಅಮೈ ಕಲಾಯಿಗುತ್ತು, ಕೇಪು ಶ್ರೀ ಲಕ್ಷ್ಮೀ ಜನಾರ್ದನ ಯುವಕ ಮಂಡಲದ ಅಧ್ಯಕ್ಷ ಶರತ್ ನಂದುಗುರಿ, ಉಪ್ಪಿನಂಗಡಿಯ ವೈದ್ಯರಾದ ಡಾ.ರಾಜಾರಾಮ್, ಡಾ. ನಿರಂಜನ್ ರೈ, ಕಾಣಿಯೂರು ಪ್ರಗತಿ ವಿದ್ಯಾಲಯದ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು, ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಕರುಣಾಕರ ಗೋಗಟೆ ವಾಳ್ಯ, ಟಿ.ನಾರಾಯಣ ಭಟ್ ರಾಮಕುಂಜ, ಸತೀಶ್ ಭಟ್ ಬಿಳಿನೆಲೆ ಮತ್ತಿತರರು ಉಪಸ್ಥಿತರಿದ್ದರು.ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನದ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ ಪ್ರಸ್ತಾವಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ನಿರೂಪಿಸಿದರು.

ಕುಟ್ರುಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಸುಮನ ಅವರು ರಾಷ್ಟ್ರಧ್ವಜ, ಸವಣೂರು ಸೀತಾರಾಮ ರೈ ಅವರು ನಾಡಧ್ವಜ ಹಾಗೂ ಕೆ.ಸೇಸಪ್ಪ ರೈ ರಾಮಕುಂಜ ಅವರು ತುಳುಧ್ವಜ ಆರೋಹಣ ಮಾಡಿದರು. ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಶಿಕ್ಷಕರು ರಾಷ್ಟ್ರಗೀತೆ ಹಾಡಿದರು. ಚಿದಾನಂದ ಕೊಯಕ್ಕುರಿ ಸ್ವಾಗತಿಸಿ, ಮೋಹನ್ ಕೆರೆಕೋಡಿ ವಂದಿಸಿದರು. ಕಿಟ್ಟು ಕಲ್ಲುಗುಡ್ಡೆ ನಿರೂಪಿಸಿದರು. ಬಳಿಕ ಸಭಾಂಗಣ, ಪುಸ್ತಕ ಪ್ರದರ್ಶನ, ಅಟಿಲ್‌ದ ಅದೆ, ತೂಪರಿಕೆದ ಅದೆ, ಗೊಬ್ಬುಲೆ ಅದೆ, ಪುಲಮರ್ದ್ದ ಅದೆ, ಕುಲಕಸುಬುದ ಅದೆ, ಚಾವಡಿ ಉದ್ಘಾಟನೆ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಗೋಷ್ಠಿ, ಕಥಾಗೋಷ್ಠಿ ಡಾ.ವೆಂಕಟರಾಜು ಪುಣಂಚಿತ್ತಾಯ ವೇದಿಕೆಯಲ್ಲಿ ಸಂಜೆ ತನಕ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೃಷಿಯಲ್ಲಿ ಹೊರ ದೇಶಗಳೊಂದಿಗೆ ಪೈಪೋಟಿ ನಡೆಸಿ
ಕ್ರೀಡಾ ಸಾಧಕಿ ಶಗುನ್‌ಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಸನ್ಮಾನ