ಕೇಂದ್ರದ ವಿರುದ್ಧ ರಾಜ್ಯ ಮತ್ತೆ ಸುಪ್ರೀಂಗೆ?

KannadaprabhaNewsNetwork |  
Published : Mar 10, 2026, 02:45 AM IST
ಸಿದ್ದರಾಮಯ್ಯ | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ. ಹೀಗಾಗಿ ನಮಗೆ ಬರಬೇಕಿರುವ ಅನುದಾನವನ್ನು ಪಡೆಯಲು ಕಾನೂನು ಹೋರಾಟ ಮಾಡುವ ಚಿಂತನೆಯಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೋರುತ್ತಿದೆ. ಹೀಗಾಗಿ ನಮಗೆ ಬರಬೇಕಿರುವ ಅನುದಾನವನ್ನು ಪಡೆಯಲು ಕಾನೂನು ಹೋರಾಟ ಮಾಡುವ ಚಿಂತನೆಯಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಆಯವ್ಯಯ, ರಾಜಸ್ವಗಳ ಸಂಗ್ರಹಣೆ, ಅನುದಾನಗಳ ವರ್ಗೀಕರಣ ಹಾಗೂ ಆಯವ್ಯಯ ಅನುದಾನಗಳ ಬಳಕೆ ಮತ್ತು ನಿರ್ವಹಣೆ ಕುರಿತು ಶಾಸಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಶಾಸಕರು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಕೇಂದ್ರ ಸರ್ಕಾರ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿರುವುದು ಸತ್ಯವಿದೆ. 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 5,495 ಕೋಟಿ ರು. ವಿಶೇಷ ಅನುದಾನ ನೀಡಬೇಕು ಎಂದು ಹೇಳಲಾಗಿತ್ತು. ಅದರ ಜತೆಗೆ ಪೆರಿಫೆರಲ್‌ ರಿಂಗ್‌ ರಸ್ತೆಗೆ 3 ಸಾವಿರ ಕೋಟಿ ರು., ಕೆರೆಗಳ ಅಭಿವೃದ್ಧಿಗೆ 3 ಸಾವಿರ ಕೋಟಿ ರು. ಸೇರಿದಂತೆ ಒಟ್ಟಾರೆ ₹11,495 ಕೋಟಿ ಘೋಷಿತ ಅನುದಾನ ಬರಬೇಕಿದೆ. ಭದ್ರಾ ಮೇಲ್ದಂಡೆ ಯೋಜನೆಗಾಗಿಯೇ ₹5,300 ಕೋಟಿ ಕೊಡಬೇಕು. ಇವೆಲ್ಲವನ್ನು ಗಮನಿಸಿದರೆ ಅನುದಾನ ಪಡೆಯಲು ಕಾನೂನು ಹೋರಾಟಕ್ಕೆ ಯೋಚಿಸುತ್ತಿದ್ದೇವೆ. ಅದನ್ನು ಪರಿಶೀಲಿಸಿ ನಿರ್ಧರಿಸುತ್ತೇವೆ ಎಂದರು.

ನಮಗೆ ಬರಬೇಕಿರುವ ನ್ಯಾಯಯುತ ಅನುದಾನ ಪಡೆಯಲು ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗದೆ ಬೇರೆ ದಾರಿಯಿಲ್ಲ. ಅದರಲ್ಲೂ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಬಿಜೆಪಿ ಸರ್ಕಾರವಿರುವ ರಾಜ್ಯಗಳೇ ಹೆಚ್ಚಿರುವ ಕಾರಣ, ನಮ್ಮ ವಾದ ಏನೇ ಮಾಡಿದರೂ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ನ್ಯಾಯ ಸಿಗುವುದಿಲ್ಲ. ಹೀಗಾಗಿ ನ್ಯಾಯಾಲಯಕ್ಕೆ ಹೋಗುವುದೇ ನಮಗಿರುವ ದಾರಿ. ಈ ಹಿಂದೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ಬರ ಪರಿಹಾರವನ್ನು ನಮಗೆ ನೀಡಿದರು. ಈಗಲೂ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಬೇಕೆ ಎಂಬ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

1 ಅಪಘಾತಕ್ಕೆ 4 ಪ್ರಮಾಣ ಪತ್ರ: ಕೋರ್ಟ್‌ ದಿಗ್ಭ್ರಮೆ
ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಮುಂಚೂಣಿಗೆ: ಮಂಜುನಾಥ್