ದೇಶದ ಅಭಿವೃದ್ದಿಗೆ ಬಿಜೆಪಿ ಗೆಲ್ಲಿಸಿ

KannadaprabhaNewsNetwork |  
Published : Apr 22, 2024, 02:00 AM IST
ಪೋಟೋ 1 : ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮನೆಮನೆ ಪ್ರಚಾರ ಕಾರ್ಯದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮತಯಾಚಿಸಿದರು. | Kannada Prabha

ಸಾರಾಂಶ

ದಾಬಸ್‌ಪೇಟೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹರ್ಷದ ಕೂಳು, ಬಿಜೆಪಿ ಪಕ್ಷದ ಗ್ಯಾರಂಟಿಗಳು ವರ್ಷದ ಕೂಳು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿಗಳಿಗೆ ಆಸೆ ಪಡದೇ ಸಮರ್ಥವಾಗಿ ಹತ್ತು ವರ್ಷ ದೇಶ ಅಭಿವೃದ್ಧಿಪಡಿಸಿದ ಪ್ರಧಾನ ಮಂತ್ರಿ ನರೇಂದ್ರಮೋದಿಗೆ ಮತ ನೀಡುವಂತೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮನವಿ ಮಾಡಿದರು.

ದಾಬಸ್‌ಪೇಟೆ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಹರ್ಷದ ಕೂಳು, ಬಿಜೆಪಿ ಪಕ್ಷದ ಗ್ಯಾರಂಟಿಗಳು ವರ್ಷದ ಕೂಳು, ವಿಶೇಷವಾಗಿ ಮಹಿಳೆಯರು ಕಾಂಗ್ರೆಸ್ ಗ್ಯಾರಂಟಿಗಳಿಗೆ ಆಸೆ ಪಡದೇ ಸಮರ್ಥವಾಗಿ ಹತ್ತು ವರ್ಷ ದೇಶ ಅಭಿವೃದ್ಧಿಪಡಿಸಿದ ಪ್ರಧಾನ ಮಂತ್ರಿ ನರೇಂದ್ರಮೋದಿಗೆ ಮತ ನೀಡುವಂತೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮನವಿ ಮಾಡಿದರು.

ಸೋಂಪುರ ಹೋಬಳಿಯ ಹೊನ್ನೇನಹಳ್ಳಿಯಲ್ಲಿ ಮನೆಮನೆ ಪ್ರಚಾರದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿಗಳ ಮೂಲಕ ಸುಳ್ಳು ಪ್ರಚಾರ ಮಾಡುತ್ತಿದ್ದು, ಲೋಕಸಭಾ ಚುನಾವಣೆಯಾದ ನಂತರ ಗ್ಯಾರಂಟಿಗಳನ್ನು ನಿಲ್ಲಿಸಲಿದೆ. ಕ್ಷೇತ್ರದ ಅಭ್ಯರ್ಥಿ ಡಾ.ಸುಧಾಕರ್‌ಗೆ ಮತ ನೀಡಬೇಕು ಎಂದರು.

ರೈತ ಮೋರ್ಚಾ ತಾಲೂಕು ಉಪಾಧ್ಯಕ್ಷ ರುದ್ರಣ್ಣ ಮಾತನಾಡಿ, ಬಿಜೆಪಿಗೆ ಮತ ನೀಡಿದರೆ ದೇಶದ ಅಭಿವೃದ್ಧಿಗೆ ಮತ ನೀಡಿದಂತೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಆನೆ ಬಲ ಬಂದಂತೆ ನಮ್ಮ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದರು.

ಸೋಂಪುರ ಹೋಬಳಿ ಅಧ್ಯಕ್ಷ ಮುರಳೀಧರ್ ಮಾತನಾಡಿ, ನಮ್ಮ ಹೋಬಳಿಯಲ್ಲಿ ಬಿಜೆಪಿ ಪಕ್ಷಕ್ಕೆ ಈ ಹಿಂದಿನಿಂದಲೂ ಬಹಳಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರಿದ್ದಾರೆ. ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮ ಹೋಬಳಿಯಲ್ಲಿ ಬಿಜೆಪಿ ಪಕ್ಷ ಹೆಚ್ಚು ಲೀಡ್ ನೀಡಿತ್ತು. ಈ ಬಾರಿಯೂ ಹೆಚ್ಚು ಲೀಡ್ ನೀಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಉಮೇಶ್, ಗ್ರಾ.ಪಂ.ಸದಸ್ಯ ಶಿವಕುಮಾರ್, ಮುಖಂಡರಾದ ರೇಣುಕಪ್ಪ, ಚಂದ್ರಶೇಖರ್, ಈಶ್ವರಯ್ಯ, ಸತೀಶ್, ನಾಗರಾಜು, ಸಿದ್ದಲಿಂಗಪ್ಪ, ಸಿದ್ದಲಿಂಗಮೂರ್ತಿ, ಶಿವು, ರುದ್ರೇಶ್ ಮತ್ತಿತರರಿದ್ದರು.

(ಫೋಟೋ ಕ್ಯಾಪ್ಷನ್‌)ಸೋಂಪುರ ಹೋಬಳಿಯ ಹೊನ್ನೇನಹಳ್ಳಿಯಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌಧರಿ ಮತ್ತು ಮುಖಂಡರು ಡಾ. ಸುಧಾಕರ್‌ ಪರ ಮನೆಮನೆ ಮತಪ್ರಚಾರ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ