ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ: ಶಾಸಕ ಎಂ.ಕೃಷ್ಣಪ್ಪ

KannadaprabhaNewsNetwork | Published : May 26, 2024 1:36 AM

ಸಾರಾಂಶ

ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡರನ್ನು ಗೆಲ್ಲಿಸಿ ಎಂದು ಶಾಸಕ ಕೃಷ್ಣಪ್ಪ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಬೆಂಗಳೂರಿನ ಗೋವಿಂದರಾಜನಗರ-ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ/ಮುಖಂಡರ ಸಭೆಯಲ್ಲಿ ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಅವರು ಅತ್ಯಂತ ಸೂಕ್ತ ಮತ್ತು ಕ್ರಿಯಾಶೀಲ ಅಭ್ಯರ್ಥಿಯಾಗಿದ್ದಾರೆ. ಅವರನ್ನು ಗೆಲ್ಲಿಸಲು ಕ್ಷೇತ್ರದ ಕಾರ್ಯಕರ್ತರು ಮತ್ತು ಮುಖಂಡರು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಶಾಸಕ ಎಂ.ಕೃಷ್ಣಪ್ಪ ಕರೆ ನೀಡಿದರು. ಪ್ರಸ್ತುತ ಚುನಾವಣೆಯಲ್ಲಿ ರಾಮೋಜಿಗೌಡ ಅವರನ್ನು ಗೆಲ್ಲಿಸಲು ಯಾವ ರೀತಿಯ ಕಾರ್ಯತಂತ್ರಗಳನ್ನು ಅನುಸರಿಸಬೇಕೆಂಬ ಕುರಿತು ತಿಳಿಸಿದರು ಹಾಗೂ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಮಾತನಾಡಿ, ಸಾಮಾನ್ಯ ಕುಟುಂಬದಿಂದ ಬಂದಿರುವ ನಾನು 14 ವರ್ಷಗಳು ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದೇನೆ. ಕಳೆದ 2 ಚುನಾವಣೆಯಲ್ಲಿ ಅತ್ಯಂತ ಕಡಿಮೆ ಅಂತರದಿಂದ ಪರಾಭವಗೊಂಡರೂ ಈ ಕ್ಷೇತ್ರದ ಮತದಾರರ ಪ್ರೀತಿ ಅಪಾರವಾದ ಶಿಕ್ಷಕರ ಸಂಘಟನೆಗಳ ಬೆಂಬಲದೊಂದಿಗೆ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ದೊರೆತಿದೆ. ನೀವೆಲ್ಲಾ ಆಶೀರ್ವದಿಸಬೇಕೆಂದು ವಿನಂತಿಸಿದರು.

ಈಗಾಗಲೇ ಹಲವಾರು ಉದ್ಯೋಗ ಮೇಳಗಳ ಮೂಲಕ 15000ಕ್ಕೂ ಹೆಚ್ಚು ನನ್ನ ನೆಕ್ಟ್ಸ್‌ ಪ್ಲೇಸ್‌ ಇನ್ಫೋ ಸಂಸ್ಥೆಯ ಮೂಲಕ ಉದ್ಯೋಗ ಕೊಡಿಸಿದ್ದೇನೆ. ನಿರುದ್ಯೋಗಿಗಳ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವನ್ನು ಹೊಂದಿದ್ದು, ಅವರ ಕೌಶ್ಯಲ್ಯ ಅಭಿವೃದ್ಧಿಗಾಗಿ ತರಬೇತಿಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ. ಭವಿಷ್ಯದಲ್ಲಿ ತಮ್ಮೆಲ್ಲರ ಸಹಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳಗಳು, ಕಡಿಮೆ ದರದಲ್ಲಿ ನಿವೇಶನಗಳನ್ನು ಕೊಡಿಸುವ ಯೋಜನೆ ಇದೆ. ತಾವು ನೀಡುವ ಮತವನ್ನು, ನಿಮ್ಮ ನಂಬಿಕೆಯನ್ನು ನಿಮ್ಮ ಕುಟುಂಬದ ಸದಸ್ಯನಾಗಿ ಉಳಿಸಿಕೊಳ್ಳುವೆ. ನಿಮ್ಮ ನೋವು-ನಲಿವುಗಳಲ್ಲಿ ನಾನು ಕೂಡ ಭಾಗಿಯಾಗುವೆನೆಂದು ತಿಳಿಸುತ್ತಾ ತಮ್ಮೆಲ್ಲರ ಬೆಂಬಲ ಆಶೀರ್ವಾದ ನೀಡಬೇಕೆಂದು ಕೇಳಿಕೊಂಡರು.

ಸಭೆಯಲ್ಲಿ ಹಲವಾರು ಕಾಂಗ್ರೆಸ್ ಮುಖಂಡರು ಮಾತನಾಡಿ, ರಾಮೋಜಿಗೌಡ ಅವರನ್ನು ಗೆಲ್ಲಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ವಾರ್ಡ್ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.

Share this article