ಕನ್ನಡಪ್ರಭ ವಾರ್ತೆ ಕೋಲಾರ
ನಗರದ ವಿವಿಧ ಶಾಲಾ- ಕಾಲೇಜುಗಳಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಪರವಾಗಿ ಚುನಾವಣಾ ಪೂರ್ವಭಾವಿ ಸಭೆಗಳಲ್ಲಿ ಭಾಗವಹಿಸಿ ಮಾತನಾಡಿ, ದೇಶವು ಅಭಿವೃದ್ಧಿಯಾಗಲು ಶಿಕ್ಷಣ, ಆರೋಗ್ಯ ಮತ್ತು ರೈತರಿಗೆ ಮೊದಲ ಆಧ್ಯತೆ ನೀಡಬೇಕಾಗಿದೆ, ಕಾಂಗ್ರೆಸ್ ಪಕ್ಷವು ಸಾಮಾನ್ಯ ಜನರ ಅಭಿವೃದ್ಧಿಯ ದೃಷ್ಟಿಯಿಂದ ಬಹಳಷ್ಟು ಕೊಡುಗೆಗಳನ್ನು ನೀಡಿದೆ. ಸಿದ್ದರಾಮಯ್ಯನವರು ಯಾವುದೇ ಧರ್ಮ, ಜಾತಿಗೆ ಸೀಮಿತವಾಗದೆ ಎಲ್ಲಾ ವರ್ಗದ ಜನರಿಗೂ ಯೋಜನೆಗಳನ್ನು ರೂಪಿಸಿದ್ದಾರೆ. ಹೀಗಾಗಿ ಡಿ.ಟಿ.ಶ್ರೀನಿವಾಸ್‌ರನ್ನು ಗೆಲ್ಲಿಸಿ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರ ಕೈ ಬಲಪಡಿಸಬೇಕು ಎಂದರು.
ಶಿಕ್ಷಕರ ಬೇಡಿಕೆಯಂತೆ ಒಪಿಎಸ್ ಜಾರಿ ಮಾಡಲು ಮತ್ತು ೭ನೇ ವೇತನ ಆಯೋಗದ ಸಿದ್ಧತೆಯೂ ಕಾಂಗ್ರೆಸ್ ಸರ್ಕಾರದ ಚಿಂತನೆಯಾಗಿದೆ. ಸಮಾಜದ ಸಮಗ್ರ ಬೆಳವಣಿಗೆಗೆ ಶಿಕ್ಷಣ ಕ್ಷೇತ್ರವು ಅಭಿವೃದ್ಧಿಯಾಗಬೇಕಿದೆ. ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಬೆಂಬಲಿಸಿ ಅವರನ್ನು ವಿಧಾನ ಪರಿಷತ್ತಿಗೆ ಕಳಸಿಕೊಡಿ ಎಂದು ಮನವಿ ಮಾಡಿದರು.ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಶಿಕ್ಷಕರ ಮತ್ತು ಶಿಕ್ಷಣ ಸಂಸ್ಥೆಗಳ ಸಮಸ್ಯೆಗಳನ್ನು ಬಲ್ಲವರಾಗಿದ್ದಾರೆ. ಸಮಸ್ಯೆಗಳನ್ನು ಹೇಗೆ ಪರಿಹಾರ ಮಾಡಬೇಕು ಎಂಬುದು ಅವರಿಗೆ ತಿಳಿದಿದೆ ಇಂತಹವರು ವಿಧಾನಪರಿಷತ್‌ಗೆ ಆಯ್ಕೆಯಾಗಿ ಬಂದರೆ, ಶಿಕ್ಷಣ ಕ್ಷೇತ್ರದ ಜಲ್ವಂತ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ, ಮುಂದಿನ ದಿನಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ರನ್ನು ಜಿಲ್ಲೆಗೆ ಕರೆತಂದು ಶೈಕ್ಷಣಿಕ ಅಭಿವೃದ್ಧಿಗೆ ಗಮನ ಹರಿಸಲಾಗುತ್ತದೆ ಎಂದರು.
ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಹೂಹಳ್ಳಿ ಎಕ್ಸ್ ಲೆಂಟ್ ರಂಗಪ್ಪ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಯೂಸುಫ್ ಷರೀಫ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ವೈ.ಶಿವಕುಮಾರ್, ಛತ್ರಕೋಡಿಹಳ್ಳಿ ಮಂಜುನಾಥ್ ಇದ್ದರು.