ನನ್ನನ್ನು ಗೆಲ್ಲಿಸಿ ಅಭಿವೃದ್ಧಿ ಪರ್ವ ಸೃಷ್ಟಿಸುವೆ

KannadaprabhaNewsNetwork |  
Published : Mar 28, 2024, 12:48 AM IST
ಫೋಟೋ: 27 ಹೆಚ್‌ಎಸ್‌ಕೆ 4ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಾತನಾಡಿದರು. | Kannada Prabha

ಸಾರಾಂಶ

ಹೊಸಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ 15ನೇ ಸ್ಥಾನದಲ್ಲಿದ್ದ ಭಾರತವನ್ನು ೫ನೇ ಸ್ಥಾನಕ್ಕೆ ತಂದಿದ್ದು, ಮುಂದಿನ 5 ವರ್ಷಗಳಲ್ಲಿ 3ನೇ ಸ್ಥಾನಕ್ಕೆ ತರುವುದು ನಿಶ್ಚಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು

ಹೊಸಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಆರ್ಥಿಕ ವ್ಯವಸ್ಥೆಯಲ್ಲಿ 15ನೇ ಸ್ಥಾನದಲ್ಲಿದ್ದ ಭಾರತವನ್ನು ೫ನೇ ಸ್ಥಾನಕ್ಕೆ ತಂದಿದ್ದು, ಮುಂದಿನ 5 ವರ್ಷಗಳಲ್ಲಿ 3ನೇ ಸ್ಥಾನಕ್ಕೆ ತರುವುದು ನಿಶ್ಚಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ತಿಳಿಸಿದರು.

ಬಿಜೆಪಿ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾನು ಆರೋಗ್ಯ ಸಚಿವನಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದೇನೆ. ನನ್ನ ಆಡಳಿತದ ಅವಧಿಯಲ್ಲಿ ಏನಾದರೂ ಲೋಪ ಆಗಿದ್ದರೆ ಅವುಗಳನ್ನು ಬದಿಗಿಟ್ಟು ನನ್ನ ಗೆಲುವಿಗೆ ಶ್ರಮಿಸಬೇಕು. ನಿಮ್ಮ ಋಣ ತೀರಿಸುತ್ತೇನೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಮಾದರಿಯನ್ನಾಗಿ ಮಾಡುತ್ತೇನೆ. ಮೋದಿಯವರ ಅವಧಿಯಲ್ಲಿ ಸಂಸದನಾಗಿ ಅಭಿವೃದ್ಧಿ ಪರ್ವವನ್ನೆ ಸೃಷ್ಟಿಸುತ್ತೇನೆ ಎಂದರು.

ನಾನು ಆರೋಗ್ಯ ಸಚಿವನಾಗಿದ್ದ ಸಂದರ್ಭದಲ್ಲಿ ಆಹಾರ ಕಿಟ್ ನೀಡಲು, ಚಿಕ್ಕಬಳ್ಳಾಪುರ ಹಾಗೂ ಹೊಸಕೋಟೆ, ದೇವನಹಳ್ಳಿ ಕೆರೆಗಳಿಗೆ ನೀರು ಹರಿಸಲು, ಸಿಸಿ ರಸ್ತೆಗಳ ನಿರ್ಮಾಣಕ್ಕೆ ಶ್ರಮಿಸಿದ್ದೇನೆ. ಆದರೆ ಜನ ಮತ ನೀಡುವಾಗ ನನ್ನ ಜಾತಿ ನೋಡಿದರು. ದಯವಿಟ್ಟು ಮತ ನೀಡುವಾಗ ಜಾತಿ ನೋಡದೆ ಅಭಿವೃದ್ಧಿಗೆ ಬೆಲೆ ಕೊಡಿ ಎಂದು ಡಾ.ಕೆ.ಸುಧಾಕರ್ ಹೇಳಿದರು.

ಮಾಜಿ ಸಚಿವ ಎಂಟಿಬಿ ನಾಗರಾಜ್ ಮಾತನಾಡಿ, ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗುತ್ತಿರುವ ಏಕೈಕ ವ್ಯಕ್ತಿ ನರೇಂದ್ರ ಮೋದಿಯವರಾಗಿದ್ದಾರೆ. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಿ. ಕೇಂದ್ರದ ಜನಪರ ಯೋಜನೆಗಳನ್ನು ಮತದಾರರಿಗೆ ತಿಳಿಸಿ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಹುಲ್ಲೂರು ಕೆ.ಸತೀಶ್, ಟೌನ್ ಅಧ್ಯಕ್ಷ ಡಾ.ಸಿ.ಜಯರಾಜ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅನುರೆಡ್ಡಿ, ನೆಲಮಂಗಲ ಮಾಜಿ ಶಾಸಕ ನಾಗರಾಜ್, ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಬಾಕ್ಸ್‌.............

ಟಿಕೆಟ್ ಸಿಗಲು ಎಂಟಿಬಿ ಕಾರಣ

ನಾನು ಚಿಕ್ಕಬಳ್ಳಾಪುರ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಸಿಗಲು ಮಾಜಿ ಸಚಿವ ಎಂಟಿಬಿ ನಾಗರಾಜ್ ಅವರ ಶ್ರಮ ಹೆಚ್ಚಾಗಿದೆ. ಆದ್ದರಿಂದ ನಾನು ಸಂಸದನಾಗಿ ಆಯ್ಕೆಯಾದ ನಂತರ ಅವರ ಸಲಹೆ ಸೂಚನೆ, ಮಾರ್ಗದರ್ಶನ ಪಡೆಯುವದರ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್‌ ಹೇಳಿದರು.ಬಾಕ್ಸ್ ...........

ಕಾಂಗ್ರೆಸ್‌ನಲ್ಲಿ ರಾಜಿನಾಮೆ ಡ್ರಾಮ ಪ್ರಾರಂಭ: ಎಂಟಿಬಿ

ಕೋಲಾರ ಲೋಕಸಭೆ ಟಿಕೆಟ್‌ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಅಳಿಯನಿಗೆ ಕೊಡುವ ವಿಚಾರವಾಗಿ ಕೋಲಾರ ಜಿಲ್ಲೆಯ ೫ ಶಾಸಕರು ವಿರೋಧ ವ್ಯಕ್ತಪಡಿಸಿ ಶಾಸಕ ಸ್ಥಾನದ ರಾಜೀನಾಮೆ ಪತ್ರಗಳನ್ನು ಹಿಡಿದು ಸಭಾಪತಿಗಳನ್ನು ಭೇಟಿ ಮಾಡಲು ತೆರಳಿದ್ದರು. ಆದ್ದರಿಂದ ಕಾಂಗ್ರೆಸ್ ಪಕ್ಷದಲ್ಲಿ ರಾಜಿನಾಮೆ ಡ್ರಾಮ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಇನ್ನು ಏನೇನು ಆಗುತ್ತೋ ಕಾದು ನೋಡಬೇಕು ಎಂದು ಮಾಜಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.ಫೋಟೋ: 27 ಹೆಚ್‌ಎಸ್‌ಕೆ 4

ಹೊಸಕೋಟೆಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!