ಹರಪನಹಳ್ಳಿ: ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಆದರೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿರುವುದು ಸಂತೋಷ ತಂದಿದೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.ಪಟ್ಟಣದ ತೆಲುಗರ ಓಣಿಯಲ್ಲಿರುವ ರಾಮದೇವರ ದೇವಸ್ಥಾನದ ಸಭಾ ಭವನದಲ್ಲಿ ಗುರುವಾರ ನಡೆದ ಬಿಜೆಪಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕರ್ತರು ಸೋಲಿನ ನೋವುಪಟ್ಟುಕೊಳ್ಳದೇ ಒಗ್ಗಟ್ಟಿನಿಂದ ಪಕ್ಷ ಸಂಘಟಿಸುವ ಮೂಲಕ ಮುಂಬರುವ ಚುನಾವಣೆಗಳಲ್ಲಿ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ವಿಜಯನಗರ ಬಿಜೆಪಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಮಾತನಾಡಿ, ರಾಜ್ಯದ ಜನತೆಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದುವರೆಗೂ ಯಾವುದೇ ಜನಪರ ಯೋಜನೆಗಳನ್ನು ಜಾರಿ ಮಾಡದೇ ಬರೀ ಹಗರಣದಲ್ಲಿ ಮುಳಿಗಿದೆ ಎಂದು ಆರೋಪಿಸಿದರು.ಬಡವರಿಗಾಗಿ ಮೀಸಲಿಟ್ಟಿದ್ದ ಎಸ್ಟಿ ನಿಗಮದ ೧೮೭ ಕೋಟಿ ಹಣವನ್ನು ಕಾಂಗ್ರೆಸ್ ಲೂಟಿ ಹೊಡೆದು ಪರಿಶಿಷ್ಟ ಪಂಗಡದ ಜನಾಂಗಕ್ಕೆ ಅನ್ಯಾಯ ಎಸಗಿದಲ್ಲದೆ ಮೂಡಾದಲ್ಲೂ ಆಕ್ರಮವಾಗಿ ಸೈಟು ಪಡೆಯುವ ಮೂಲಕ ಸ್ವತ ಮುಖ್ಯಮಂತ್ರಿಗಳೇ ಸಿಲುಕಿ ಹಾಕಿಕೊಂಡಿದ್ದಾರೆ ಎಂದು ಆರೋಪಿಸಿದರು.
ಹರಪನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಬದಲಾಗುತ್ತಾರೆ ಎಂಬ ವದಂತಿಗಳಿಗೆ ಯಾರು ಕಿವಿಗೊಡಬೇಡಿ ಪಕ್ಷದ ಹೈಕಮಾಂಡ್ ಆದೇಶದ ಮೇರೆಗೆ ಈ ಆಯ್ಕೆ ನಡೆದಿದೆ ಒಂದು ವೇಳೆ ಬದಲಾವಣೆಯಾದರೆ ನಾನು ಜಿಲ್ಲಾಧ್ಯಕ್ಷ ಸ್ಥಾನ ಬಿಡುತ್ತೇನೆ ಎಂದು ವದಂತಿಗೆ ತೆರೆ ಎಳೆದರು.ಬಿಜೆಪಿ ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುವರ್ಣ ಆರುಂಡಿ, ಪುರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಎಚ್.ಎಂ. ಅಶೋಕ್, ಮುಖಂಡರಾದ ಆರುಂಡಿ ನಾಗರಾಜ್, ಎಂ.ಪಿ. ನಾಯ್ಕ್, ಬಾಲಹುಣಿಸಿ ರಾಮಣ್ಣ, ಬಾಗಳಿ ಕೊಟ್ರೇಶಪ್ಪ, ಕಣವಿಹಳ್ಳಿ ಮಂಜುನಾಥ, ಎಸ್.ಪಿ.ಲಿಂಬಾನಾಯ್ಕ, ಸತ್ತೂರು ಹಾಲೇಶ್, ಓಂಕಾರಗೌಡ, ಸಂಜೀವ ರೆಡ್ಡಿ, ಕಡ್ಲಿ ರಾಘವೇಂದ್ರ ಶೆಟ್ಟಿ, ಮುದಕವನವರ್ ಶಂಕರ್, ಕುಸುಮ ಜಗದೀಶ್ ಸೇರಿದಂತೆ ಇತರರು ಇದ್ದರು.