ಕನ್ನಡಪ್ರಭ ವಾರ್ತೆ ಬೆಳಗಾವಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನದ ಯಶಸ್ವಿಗಾಗಿ ರಚಿಸಲಾದ ವಿವಿಧ ಸಮಿತಿಗಳು, ಉಪ ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಚಳಿಗಾಲ ಅಧಿವೇಶನ ಯಶಸ್ವಿಗೊಳಿಸಲು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನದ ಯಶಸ್ವಿಗಾಗಿ ರಚಿಸಲಾದ ವಿವಿಧ ಸಮಿತಿಗಳು, ಉಪ ಸಮಿತಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಚಳಿಗಾಲ ಅಧಿವೇಶನ ಯಶಸ್ವಿಗೊಳಿಸಲು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ಜರುಗಿದ ಚಳಿಗಾಲ ಅಧಿವೇಶನ-2026 ವಿವಿಧ ಸಮಿತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಸಕ್ತ ಸಾಲಿನ ಚಳಿಗಾಲ ಅಧಿವೇಶನಕ್ಕೆ ಆಗಮಿಸುವಂತಹ ಸಚಿವರು, ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳಿಗೆ ಸೂಕ್ತ ವಸತಿ, ಊಟೋಪಹಾರ ವ್ಯವಸ್ಥೆ ಕಲ್ಪಿಸಬೇಕು. ಈ ಕುರಿತು ನಗರ ವ್ಯಾಪ್ತಿಯ ಹೋಟೆಲ್‌ಗಳಲ್ಲಿ ಕೊಠಡಿ ಕಾಯ್ದಿರಿಸಲು ತಿಳಿಸಿದರು.
ಸುವರ್ಣ ವಿಧಾನ ಸೌಧದಲ್ಲಿನ ಸಚಿವರ, ಹಿರಿಯ ಅಧಿಕಾರಿಗಳ ಕೊಠಡಿಗಳಲ್ಲಿ ಗಣಕ ಯಂತ್ರಗಳನ್ನು ಮುಂಚಿತವಾಗಿ ಅಳವಡಿಸಿ ಗಣಕ ಯಂತ್ರಗಳು ಕಾರ್ಯ ನಿರ್ವಹಿಸುತ್ತಿರುವ ಕುರಿತು ಖಾತರಿ ಪಡಿಸಿಕೊಳ್ಳಬೇಕು. ಅಲ್ಲದೇ ಸುವರ್ಣ ವಿಧಾನ ಸೌಧದಲ್ಲಿ ಅಡತಡೆಗಳಿಲ್ಲದೆ ನಿರಂತರ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಸಂಸ್ಥೆಯವರ ಜತೆಗೆ ಈಗಿನಿಂದಲೇ ಸಮನ್ವಯ ಸಾಧಿಸಲು ಸೂಚಿಸಿದರು.
ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಸಿಬ್ಬಂದಿ ವಸತಿ ಪ್ರದೇಶಗಳಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು. ಒಟ್ಟಾರೆಯಾಗಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡಬಾರದು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಅರಿತು ಅಧಿವೇಶನ ಯಶಸ್ವಿಗೊಳಿಸುವಂತೆ ಪ್ರಭಾರಿ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೆರಿ, ಪ್ರಶಿಕ್ಷಣಾರ್ಥಿ ಐ.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್, ಕಾಡಾ ಆಡಳಿತಾಧಿಕಾರಿ ಎಸ್.ಎಸ್.ಬಿರಾದಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.