ಮೋದಿ ಆಡಳಿತದಿಂದ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ-ಶಾಸಕ ಬೈರತಿ

KannadaprabhaNewsNetwork |  
Published : Apr 28, 2024, 01:15 AM IST
ಫೋಟೊ ಶೀರ್ಷಿಕೆ: 27ಆರ್‌ಎನ್‌ಆರ್3ರಾಣಿಬೆನ್ನೂರು ನಗರದ ಕುರುಬಗೇರಿ ಸೊಪ್ಪಿನಪೇಟೆ ಪ್ರದೇಶದಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಏರ್ಪಡಿಸಿದ್ದ ಪ್ರಚಾರ ಸಭೆಯನ್ನು ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಉದ್ಘಾಟಿಸಿದರು.  | Kannada Prabha

ಸಾರಾಂಶ

ಕೋವಿಡ್ ಸಂದರ್ಭದಲ್ಲಿ ದೇಶದ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಪ್ರಧಾನಿ ಮೋದಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತವಾಗಿ ನೀಡಿದರು. ಮೋದಿಯವರ ದಕ್ಷ ಆಡಳಿತದಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಹೇಳಿದರು.

ರಾಣಿಬೆನ್ನೂರು: ಕೋವಿಡ್ ಸಂದರ್ಭದಲ್ಲಿ ದೇಶದ ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಪ್ರಧಾನಿ ಮೋದಿ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತವಾಗಿ ನೀಡಿದರು. ಮೋದಿಯವರ ದಕ್ಷ ಆಡಳಿತದಿಂದಾಗಿ ಇಂದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ ಹೇಳಿದರು.

ನಗರದ ಕುರುಬಗೇರಿ ಸೊಪ್ಪಿನಪೇಟೆ ಪ್ರದೇಶ ಹಾಗೂ ತಾಲೂಕಿನ ಮೆಡ್ಲೇರಿ ಗ್ರಾಮದಲ್ಲಿ ಶನಿವಾರ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಏರ್ಪಡಿಸಿದ್ದ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಹಾಲುಮತ ಸಮಾಜವನ್ನು ಎಸ್‌ಟಿಗೆ ಸೇರಿಸಲು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಅವರನ್ನು ಗೆಲ್ಲಿಸುವ ಮೂಲಕ ನಮ್ಮ ಸಮಾಜದ ಮತ್ತಷ್ಟು ಕೆಲಸಗಳಾಗುವಂತೆ ಮಾಡಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ, ಪಕ್ಷದ ರಾಷ್ಟ್ರೀಯ ಪರಿಷತ್ ಸದಸ್ಯ ಮಂಜುನಾಥ ಓಲೇಕಾರ, ರಾಜ್ಯ ಸಂಚಾಲಕ ಚಂದ್ರಶೇಖರ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಮಾತನಾಡಿ, ಶಹರ ಘಟಕದ ಅಧ್ಯಕ್ಷ ರಮೇಶ ಗುತ್ತಲ, ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ, ಮಾಳಪ್ಪ ಪೂಜಾರ, ದುಂಡೆಪ್ಪ ಕೊಪ್ಪದ, ಪ್ರಕಾಶ ಬುರಡಿಕಟ್ಟಿ, ಭಾರತಿ ಜಂಬಗಿ, ಗದಿಗೆಪ್ಪ ಹೊಟ್ಟಿಗೌಡ್ರ, ಭಾರತಿ ಜಂಬಗಿ, ಜಟ್ಟೆಪ್ಪ ಕರೇಗೌಡ್ರ, ರಮೇಶ , ಪ್ರಕಾಶ ಪೂಜಾರ, ಮಲ್ಲಿಕಾರ್ಜುನ ಅಂಗಡಿ, ಕರಬಸಪ್ಪ ಮಾಕನೂರ, ಚೋಳಪ್ಪ ಕಸವಾಳ, ಬೈರತಿ ಗಿರೀಶ್, ಕುಬೇರ ಕೊಂಡಜ್ಜಿ, ಪಕ್ಷದ ನಗರಸಭಾ ಸದಸ್ಯರುಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!