ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಹಿಂಪಡೆಯಿರಿ

KannadaprabhaNewsNetwork |  
Published : Aug 20, 2024, 12:59 AM IST
ಒಳಮೀಸಲಾತಿ ಕುರಿತು ಡಿಎಸ್ಎಸ್ ಸಭೆ | Kannada Prabha

ಸಾರಾಂಶ

ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಹಿಂಪಡೆಯಿರಿ: ದಲಿತ ಸಂಘರ್ಷ ಸಮಿತಿ

ಕನ್ನಡಪ್ರಭ ವಾರ್ತೆ ತುಮಕೂರುನಗರದ ಅಂಬೇಡ್ಕರ್ ಭವನದಲ್ಲಿ ಒಳಮೀಸಲಾತಿ ಜಾರಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದಕ್ಕೆ ಚರ್ಚೆ ನಡೆಸುವ ಸಲುವಾಗಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ನೇತೃತ್ವದಲ್ಲಿ ಮುಖಂಡರ ಸಭೆ ಸೋಮವಾರ ನಡೆಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮುಡಾ ಹಗರಣದಲ್ಲಿ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿರುವುದು ಖಂಡನೀಯ. ಮುಖ್ಯಮಂತ್ರಿಗಳ ಪತ್ನಿ ಹೆಸರಿನಲ್ಲಿ ಇರುವ ನಿವೇಶನಕ್ಕೆ ಬದಲಿ ನಿವೇಶನ ನೀಡಿರುವ ವಿಚಾರದಲ್ಲಿ ಅವರ ತಪ್ಪಿಲ್ಲದಿದ್ದರೂ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ದಸಂಸ ಖಂಡಿಸಿದೆ.

ಮುಖ್ಯಮಂತ್ರಿಗಳೇ ಹಗರಣದ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇಮಕ ಮಾಡಿದ್ದು, ತನಿಖೆ ಪೂರ್ಣಗೊಳ್ಳುವ ಮುನ್ನವೇ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ್ದಾರೆ. ಇದನ್ನು ಹಿಂಪಡೆಯಬೇಕೆನ್ನುವ ಒತ್ತಾಯವನ್ನು ದಸಂಸ ಮಾಡುತ್ತದೆ ಎಂಬ ನಿರ್ಣಯ ಕೈಗೊಳ್ಳಲಾಯಿತು.

ಒಳ ಮೀಸಲಾತಿ ದಲಿತ ಸಮುದಾಯಗಳ ಬಹಳ ವರ್ಷಗಳ ಹೋರಾಟದ ಫಲವಾಗಿ ಸುಪ್ರೀಂಕೋರ್ಟು ಒಳ ಮೀಸಲಾತಿ ಜಾರಿಯ ಸಂಪೂರ್ಣ ಜವಾಬ್ದಾರಿಯನ್ನು ಅಯಾಯ ರಾಜ್ಯ ಸರ್ಕಾರಗಳಿಗೆ ನೀಡಿದೆ. ಅಲ್ಲದೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಅಯೋಗ ಮತ್ತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿದ ವರದಿಯಂತೆ ಒಳಮೀಸಲಾತಿ ಜಾರಿ ಮಾಡಲು ಮುಂದಾಗಬೇಕು. ಕೆನೆಪದರ ಎಂಬ ಅನಗತ್ತ ವಿಷಯದ ಬಗ್ಗೆ ತಲೆ ಕೆಡಿಸಿಕೊಳ್ಳದೆ ಸರ್ಕಾರ ಕೂಡಲೇ ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು ಎಂಬ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಡಿವಿಎಸ್ ನ ಹಬ್ಬತ್ತನಹಳ್ಳಿ ಶ್ರೀನಿವಾಸ್, ಮಾದಿಗ ದಂಡೋರದ ಆಟೋ ಶಿವರಾಜು, ನಾಗೇಶ್.ಎ. ಟಿ.ಡಿ.ಮೂರ್ತಿ, ಎ.ರಂಜನ್, ಪರುಶುರಾಮ್,ಲಕ್ಷ್ಮಮ್ಮ, ಲಕ್ಷ್ಮಿಶ್.ಸಲ್ಮಾ,ಯೂಸೂಫ್, ಜಗದೀಶ್.ಚಂದ್ರಯ್ಯ,ಹನುಮಂತರಾಜು, ಪೂಜಾಹುನುಮಯ್ಯ, ಈರಣ್ಣ, ಗೌರಮ್ಮ, ನರಸಿಂಹಮೂರ್ತಿ, ಸುನೀಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ