ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಿರಿ: ವೈದ್ಯಾಧಿಕಾರಿಗಳ ಸಂಘ ಆಗ್ರಹ

KannadaprabhaNewsNetwork |  
Published : Sep 20, 2026, 02:30 AM IST
ಚಿತ್ರ 19ಬಿಡಿಆರ್60 | Kannada Prabha

ಸಾರಾಂಶ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಹಾಗೂ ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು ಆದೇಶಗಳನ್ನು ಕೂಡಲೇ ಹಿಂಪಡೆದು, ಅವರನ್ನು ಕರ್ತವ್ಯಕ್ಕೆ ಮರು ನಿಯೋಜಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆಗ್ರಹಿಸಿದೆ.

ಕನ್ನಡಪ್ರಭ ವಾರ್ತೆ ಬೀದರ್ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧ್ಯಾನೇಶ್ವರ ನಿರಗುಡೆ ಹಾಗೂ ಬಸವಕಲ್ಯಾಣ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಶೋಕ ಮೈಲಾರೆ ಅವರ ಅಮಾನತು ಆದೇಶಗಳನ್ನು ಕೂಡಲೇ ಹಿಂಪಡೆದು, ಅವರನ್ನು ಕರ್ತವ್ಯಕ್ಕೆ ಮರು ನಿಯೋಜಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಆಗ್ರಹಿಸಿದೆ.ಈ ಕುರಿತು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಿಗೆ ಬರೆದ ಮನವಿ ಜಿಲ್ಲಾಧಿ ಕಾರಿ ಹಾಗೂ ಜಿ.ಪಂ ಸಿಇಒ ಮೂಲಕ ಸಲ್ಲಿಸಿ ಡಾ.ಧ್ಯಾನೇಶ್ವರ ನಿರಗುಡೆ ಅವರು ಪ್ರಾಮಾಣಿಕ, ದಕ್ಷ ಹಾಗೂ ಕರ್ತವ್ಯನಿಷ್ಠ ಅಧಿಕಾರಿಯಾಗಿದ್ದು, ಜಿಲ್ಲೆಯ ಆರೋಗ್ಯ ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯವೈಖರಿ ಹಾಗೂ ಇಲಾಖೆಗೆ ಸಲ್ಲಿಸುತ್ತಿರುವ ಸೇವೆಯನ್ನು ಜಿಲ್ಲೆಯ ಅಧಿಕಾರಿ–ನೌಕರರು ಗೌರವಿಸುತ್ತಾರೆ ಎಂದು ಸಂಘ ತಿಳಿಸಿದೆ.ಸೆ.16ರಂದು ಬಸವಕಲ್ಯಾಣ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮದ ಬ್ಯಾನರ್‌ನಲ್ಲಿ ಗಣ್ಯರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದ ವಿಷಯದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂಬುದು ಪತ್ರಿಕಾ ವರದಿಗಳಿಂದ ತಿಳಿದು ಬಂದಿದೆ. ಬ್ಯಾನರ್‌ಗೆ ಸಂಬಂಧಿಸಿದ ಲೋಪದ ಹಿನ್ನೆಲೆಯಲ್ಲಿ ಪ್ರಾಮಾ ಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಅಮಾನತಿನಂತಹ ಕಠಿಣ ಕ್ರಮ ಕೈಗೊಂಡಿರುವುದು ಅಧಿಕಾರಿ–ನೌಕರರಲ್ಲಿ ಆತಂಕ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಸಂಘ ಹೇಳಿದೆ.ಪ್ರಕರಣದ ವಾಸ್ತವಾಂಶಗಳನ್ನು ನಿಷ್ಪಕ್ಷಪಾತವಾಗಿ ಪರಿಶೀಲಿಸಿ, ಅಮಾನತು ಆದೇಶಗಳನ್ನು ಹಿಂಪಡೆದು ಅಧಿಕಾರಿಗಳನ್ನು ಕರ್ತವ್ಯಕ್ಕೆ ಮರು ನಿಯೋಜಿಸಲು ಸಕ್ಷಮ ಪ್ರಾಧಿಕಾರ ಹಾಗೂ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸೋಮಶೇಖರ ಚಿದ್ರಿ, ಕಾರ್ಯದರ್ಶಿ ಪ್ರಭು ತುಗಾವೆ, ರಾಜ್ಯ ಪರಿಷತ ಸದಸ್ಯ ರಾಜಕುಮಾರ ಮಾಳಗೆ,ಸುನೀಲ ಕಸ್ತೂರೆ, ಸತ್ತಾರ ಪಟೇಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ .ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಶಂಕ್ರೆಪ್ಪಾ ಬೊಮ್ಮಾ, ಕಾರ್ಯದರ್ಶಿ ಡಾ. ಸಂದೀಪ ಘೊಡೆ, ಖಜಾಂಚಿ ಡಾ.ಶಾಂತಲಿಂಗ ಪಾಟೀಲ್, ಡಾ. ಕೀರಣ ಪಾಟೀಲ್, ಡಾ. ದೀಪಾ ಖಂಡ್ರೆ, ಡಾ.ಅನೀಲ ಏಕ್ಲೂರೆ, ಡಾ. ಸೋಹಿಲ್, ಡಾ. ರಾಜಶೇಖರ್ ಪಾಟೀಲ್, ಡಾ.ಸಂಗಾರೆಡ್ಡಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2 ದಶಕಗಳ ನಂತರ ಸಕಲೇಶಪುರಕ್ಕಿಂದು ಮುಖ್ಯಮಂತ್ರಿ ಆಗಮನ
ಬಿಜೆಪಿ ರೈತ ಮೋರ್ಚಾ ವತಿಯಿಂದ ಸ್ವಚ್ಚತಾ ಅಭಿಯಾನ