ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ವರ್ಗಾವಣೆಗೊಂಡು ಹಲವು ತಿಂಗಳು ಕಳೆದರೂ ಹೊಸದಾಗಿ ಅಧಿಕಾರಿಗಳನ್ನು ನೇಮಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಅಧಿಕಾರಿಗಳೇ ಶಾಸಕರಿಗೆ ಹೆದರಿ ಯಾರು ಕೂಡ ಇಲ್ಲಿಗೆ ಕೆಲಸಕ್ಕೆ ಬರಲು ಮನಸ್ಸು ಮಾಡುತ್ತಿಲ್ಲ ಎಂದು ಟೀಕಿಸಿದರು.
ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲೆಲ್ಲೊಯೂ ಕಳ್ಳತನ, ಗಾಂಜಾ ಮಾರಾಟ, ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದೆ ಎಂದು ವ್ಯಂಗ್ಯವಾಡಿದರು.ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಶಿಶು ಮರಣ ಹೊಂದಿರುವುದು ನಾಗರೀಕ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಹಿಂದಿನ ಅಧಿಕಾರದ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಏನೋ ನಡೆದಿದೆ ಎಂದು ಹಾಲಿ ಶಾಸಕ ನರೇಂದ್ರಸ್ವಾಮಿ ಅವರು ಆರೋಪಿಸುತ್ತಾರೆ. ಆಸ್ಪತ್ರೆಯಲ್ಲಿ ಈಗಿನ ಅವ್ಯವಸ್ಥೆ ಬಗ್ಗೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದ ಅನ್ನದಾನಿ, ನನ್ನ ಅಧಿಕಾರದ ಅವಧಿಯಲ್ಲಿ ಆಸ್ಪತ್ರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗಿತ್ತು ಎಂದರು.
ಶಾಸಕರ ಕೈಯಲ್ಲಿ ಕಾಂಪೌಂಡ್ ನಿರ್ಮಾಣ ಮಾಡಲು ಸಾಧ್ಯವಾಗದಿದ್ದರೇ ಸಂಸದರ ನಿಧಿ ಹಾಗೂ ಎಂಎಲ್‌ಸಿ ನಿಧಿಯಲ್ಲಿ ಕಾಂಪೌಂಡ್ ನಿರ್ಮಾಣ ಮಾಡಲಾಗುವುದು ಎಂದರು.
ಬೆಂಗಳೂರು ಜಲ ಮಂಡಳಿಯಲ್ಲಿ ನೀಡುವ ಉದ್ಯೋಗವನ್ನು ಜೆಡಿಎಸ್ ಕಾರ್ಯಕರ್ತರಿಗೂ ನೀಡಬೇಕು. ನೀಡದಿದ್ದರೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.