ಸರಗಳ್ಳತನ ಮಾಡುತ್ತಿದ್ದ ಮಹಿಳೆ ಬಂಧನ

KannadaprabhaNewsNetwork |  
Published : Jun 06, 2025, 12:45 AM IST

ಸಾರಾಂಶ

ಕಳೆದ ಫೆ. 11ರಂದು ಸಾವನದುರ್ಗದ ಶ್ರೀ ವೀರಭದ್ರಸ್ವಾಮಿ ಜಾತ್ರೆಯ ರಥೋತ್ಸವ ಸಮಯದಲ್ಲಿ ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನವಾಗಿತ್ತು.

ಮಾಗಡಿ:

ಸರಗಳ್ಳತನ ಮಾಡುತ್ತಿದ್ದ ಓರ್ವ ಮಹಿಳೆಯನ್ನು ಬಂಧಿಸಿರುವ ಮಾಗಡಿ ಪೊಲೀಸರು 5 ಲಕ್ಷ 40 ಸಾವಿರ ರು. ಮೌಲ್ಯದ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.

ಕಳೆದ ಫೆ. 11ರಂದು ಸಾವನದುರ್ಗದ ಶ್ರೀ ವೀರಭದ್ರಸ್ವಾಮಿ ಜಾತ್ರೆಯ ರಥೋತ್ಸವ ಸಮಯದಲ್ಲಿ ಮಹಿಳೆ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳ್ಳತನವಾಗಿತ್ತು. ಈ ಬಗ್ಗೆ ದಾಖಲಾದ ದೂರಿನ ಮೇರೆಗೆ ಮಾಗಡಿ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಓರ್ವ ಮಹಿಳೆಯನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿ 5 ಲಕ್ಷ 40 ಸಾವಿರ ಮೌಲ್ಯದ 61 ಗ್ರಾಂ ತೂಕದ 2 ಚಿನ್ನದ ಸರ ವಶ ಪಡಿಸಿಕೊಂಡಿದ್ದಾರಲ್ಲದೆ, ಎರಡು ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ