ಬೈಕ್‌ನ ಗಾಲಿಗೆ ಬುರ್ಕಾ ಸಿಲುಕಿ ಮಹಿಳೆ ಸಾವು

KannadaprabhaNewsNetwork |  
Published : Jul 18, 2026, 12:15 AM IST
ಮೃತ ಫಾತಿಮಾ (35)  | Kannada Prabha

ಸಾರಾಂಶ

ಚಿಕ್ಕನಾಯಕನಹಳ್ಳಿ: ಕಚೇರಿಗೆ ತೆರಳುತ್ತಿದ್ದ ವೇಳೆ ಬೈಕ್‌ನ ಗಾಲಿಗೆ ಬುರ್ಕಾ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ನಡೆದಿದೆ.

ಚಿಕ್ಕನಾಯಕನಹಳ್ಳಿ: ಕಚೇರಿಗೆ ತೆರಳುತ್ತಿದ್ದ ವೇಳೆ ಬೈಕ್‌ನ ಗಾಲಿಗೆ ಬುರ್ಕಾ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಚೇರಿ ಎದುರು ಶುಕ್ರವಾರ ನಡೆದಿದೆ. ಮೃತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿಯಲ್ಲಿ ಕಂಪ್ಯೂಟರ್‌ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಫಾತಿಮಾ (35) ಎಂದು ಗುರುತಿಸಲಾಗಿದೆ. ಮೃತ ಫಾತಿಮಾ ತಂದೆಯೊಂದಿಗೆ ಹೋಗುತ್ತಿರುವಾಗ ಅವರು ಧರಿಸಿದ್ದ ಬುರ್ಕಾ ಬೈಕ್‌ನ ಗಾಲಿಗೆ ಸಿಲುಕಿ ಅವರು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಈ ಕುರಿತು ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರ ನಿರ್ವಹಣೆಗೆ ರೈತರಿಗೆ ಸಲಹೆ
ಡಿಸೆಂಬರಲ್ಲಿ ನಗರೋತ್ತಾನ ವೈಯ್ಯಕ್ತಿಕ ಫಲಾನುಭವಿಗಳ ಅನುದಾನ ಮಂಜೂರು: ಜುಬೇದ