ಕನ್ನಡಪ್ರಭ ವಾರ್ತೆ ನಿಡಗುಂದಿ
ಘಟನೆ ವಿವರ: ಗುರುವಾರ ಬೆಳಗಿನ ಜಾವ 3.30ರ ಸುಮಾರಿಗೆ ಮನೆಯ ಚಾವಣಿ ಮಳೆಯಿಂದ ನೆನೆದು ಹೋಗಿತ್ತು. ರಾತ್ರಿ ಕುಟುಂಬಸ್ಥರು ನಿದ್ರೆಯಲ್ಲಿದ್ದಾಗ ಭಾರಿ ಶಬ್ದದೊಂದಿಗೆ ದೊಡ್ಡ ಗಾತ್ರದ ಚಾವಣಿ ಕುಸಿದು ಬಿದ್ದಿದೆ. ಈ ವೇಳೆ ಕೋಣೆಯಲ್ಲಿ ಮಲಗಿದ್ದ ಮಹಾದೇವಿ ಅವರ ಮೇಲೆ ಮಣ್ಣು ಹಾಗೂ ಮರದ ದಿಮ್ಮಿಗಳು ಬಿದ್ದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಮಹಾದೇವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಳ ಪತಿ ಶಿವಾನಂದ ವಾರದ ಅವರು ಮನೆಯ ಹೊರಭಾಗದಲ್ಲಿ ಮಲಗಿದ್ದರು. ಭಾರೀ ಶಬ್ದಕ್ಕೆ ಬೆಚ್ಚಿಬಿದ್ದು ಒಳಗೆ ಬಂದು ನೋಡಿದಾಗ ಈ ಅವಘಡ ನಡೆದಿತ್ತು. ಕೂಡಲೇ ಕುಟುಂಬಸ್ಥರು ಮತ್ತು ಸ್ಥಳೀಯರ ಸಹಾಯದಿಂದ ಮಹಾದೇವಿ ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ಫಲಕಾರಿಯಾಗಲಿಲ್ಲ. ಬೆಳಕು ಹರಿಯುತ್ತಿದ್ದಂತೆ ಮಣ್ಣಿನ ರಾಶಿ ಹಾಗೂ ಅವಶೇಷಗಳ ಮಧ್ಯೆ ಸಿಲುಕಿದ್ದ ಮಹಾದೇವಿ ಅವರನ್ನು ಹೊರತೆಗೆದಲು ಸ್ಥಳೀಯರು ಹರಸಾಹಸಪಟ್ಟರು. ಆದರೆ, ಅಷ್ಟರಲ್ಲಾಗಲೇ ಅವರು ಜೀವ ಕಳೆದುಕೊಂಡಿದ್ದರು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.ಅಂದಾಜು ನೂರು ವರ್ಷದ ಹಳೆಯ ಮನೆ ಇದಾಗಿದ್ದು, ಮನೆ ದುರ್ಬಲವಾಗಿದೆ ಎನ್ನುವುದು ಗೊತ್ತಿರಲಿಲ್ಲ ಎಂದು ಸ್ಥಳೀಯರು ದುಃಖ ವ್ಯಕ್ತಪಡಿಸಿದರು.
ಅಧಿಕಾರಿಗಳು ಮೃತಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ದೊರೆಯುವ ಪರಿಹಾರ ಹಾಗೂ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದರು.