ಬಸ್ಸಿನಲ್ಲೇ ಪ್ರಜ್ಞೆ ತಪ್ಪಿದ ಮಹಿಳೆ: ಸಮಯಪ್ರಜ್ಞೆ ಮೆರೆದ ಕೆಎಸ್ಸಾರ್ಟಿಸಿ ಚಾಲಕ

KannadaprabhaNewsNetwork |  
Published : Oct 07, 2026, 03:00 AM IST
05ಕೆಪಿಎಸ್ಎನ್ಡಿ1:  | Kannada Prabha

ಸಾರಾಂಶ

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥತೆ ಉಂಟಾಗಿ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್‌ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯ ಪ್ರಜ್ಞೆ ಹಾಗೂ ಮಾನವೀಯತೆ ಮೆರೆದಿದ್ದಾರೆ.

ಬೆಳ್ತಂಗಡಿ : ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥತೆ ಉಂಟಾಗಿ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್‌ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯ ಪ್ರಜ್ಞೆ ಹಾಗೂ ಮಾನವೀಯತೆ ಮೆರೆದಿದ್ದಾರೆ.ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆ ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಮಂಗಳೂರಿಗೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ತಪ್ಪಿದ್ದು, ಮಾತನಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

ಇದನ್ನು ಗಮನಿಸಿದ ಬಸ್‌ ಚಾಲಕ ಕಿರಣ್ ಅವರು ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದರು. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡರು. ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್‌ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕನ ಸಮಯ ಪ್ರಜ್ಞೆ ಮತ್ತು ಸಹಪ್ರಯಾಣಿಕರ ಸಹಕಾರಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮುದ್ದೇಬಿಹಾಳ, ತಾಳಿಕೋಟೆ ಕೆರೆಗಳಿಗೆ ನೀರು
ಸಿಎಂ ಪರಿಹಾರ ನಿಧಿಗೆ ₹ 2,600 ನೀಡಿದ ರೈತ