ವಾಮಾಚಾರ ಮಾಡಿಸುವುದಾಗಿಬೆದರಿಸಿ ಮಹಿಳೆ ಮೇಲೆ ರೇಪ್‌

KannadaprabhaNewsNetwork |  
Published : May 04, 2026, 04:00 AM IST
ತರಕಾರಿ | Kannada Prabha

ಸಾರಾಂಶ

ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮಹಿಳೆ ಮೇಲೆ ಜ್ಯೋತಿಷಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮಹಿಳೆ ಮೇಲೆ ಜ್ಯೋತಿಷಿಯೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ. ಮಹಿಳೆಯೊಬ್ಬರು ನೀಡಿದ ದೂರಿನನ್ವಯ ಕುಂಬಳಗೋಡು ನಿವಾಸಿಯಾದ ಜ್ಯೋತಿಷಿ ಮೋಹನ್ ಕುಮಾರ್ (35) ಎಂಬಾತನ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ. ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಇದೀಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಮೇಲೆಯೂ ದೂರು ದಾಖಲು:

ಮಹಿಳೆ ಮತ್ತು ಆರೋಪಿ ಮೋಹನ್‌ ಕುಮಾರ್‌ ನಡುವೆ ಹಣದ ವ್ಯವಹಾರವಿತ್ತು ಎನ್ನಲಾಗಿದೆ. ಮಹಿಳೆ ತನಗೆ ಹಣ ನೀಡದೇ ವಂಚಿಸಿದ್ದಾರೆ ಎಂದು ಆರೋಪಿಸಿ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಮಹಿಳೆಯ ವಿರುದ್ಧ ಮೋಹನ್‌ ಈ ಹಿಂದೆ ಪ್ರಕರಣ ದಾಖಲಿಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾರ್‌ಧಾಮ್‌ ಯಾತ್ರೆ ಹೆಸರಲ್ಲಿ26 ಮಂದಿಗೆ ₹15 ಲಕ್ಷ ಟೋಪಿ
ವಿದ್ಯುತ್‌, ವಾಣಿಜ್ಯ ಸಿಲಿಂಡರ್‌ಬೆನ್ನಲ್ಲೇ ತರಕಾರಿಯೂ ದುಬಾರಿ