ಹುಬ್ಬಳ್ಳಿ:
ಇಲ್ಲಿಯ ಚಾಲುಕ್ಯ ನಗರದಲ್ಲಿರುವ ಸುಜಾತಾ ಹಂಡಿ ನಿವಾಸಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸುಜಾತಾ ಹಾಗೂ ಅವರ ಕುಟುಂಬದವರಿಗೆ ಆಗಿರುವ ಅನ್ಯಾಯದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕೇಶ್ವಾಪುರ ಇನಸ್ಪೆಕ್ಟರ್ ಕೆ.ಎಸ್. ಹಟ್ಟಿ ಪೊಲೀಸ್ ಬ್ಯಾಡ್ಜ್ ಹಾಕಿಕೊಂಡು ರೌಡಿಗಳಂತೆ ದೌರ್ಜನ್ಯ ಎಸಗಿದ್ದಾರೆ. ಅವರನ್ನು ಬರಿ ಅಮಾನತು ಮಾಡದೇ ತಕ್ಷಣ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.ರಾಜ್ಯ ಮಹಿಳೆಯರಿಗೆ ಸುರಕ್ಷತೆ ನೀಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಮಹಿಳೆ ತಾನಾಗಿಯೇ ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಮಹಿಳೆಯರಿಗೆ ಕೊಡುವ ಸುರಕ್ಷತೆ ಇದೇನಾ? ಇಂತಹ ಪುಂಡರ ಕೈಯಲ್ಲಿ ಕಾನೂನು ಸುವ್ಯವಸ್ಥೆ ನೀಡಿದ ಭಂಡ ಸರ್ಕಾರವಿದು ಎಂದು ಕಿಡಿಕಾರಿದರು.
ಸುಜಾತಾ ಹಂಡಿ ಮಹಿಳಾ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರೆ ಕಾನೂನು ಪ್ರಕಾರ ಕ್ರಮವಾಗಲಿ. ಪೊಲೀಸ್ ಇಲಾಖೆಯಿಂದ ಐದು ವಿಡಿಯೋಗಳಿವೆ. ಬಿಜೆಪಿ ರಾಜ್ಯಾಧ್ಯಕ್ಷರಿಗೆ ಘಟನೆ ಬಗ್ಗೆ ವರದಿ ನೀಡಲಾಗುವುದು. ಬಿಜೆಪಿ ಈ ಕುಟುಂಬದ ಜತೆ ಇರಲಿದ್ದು, ಸೂಕ್ತ ತನಿಖೆಯಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಮಾಜಿ ಶಾಸಕಿ ಸೀಮಾ ಮಸೂತಿ, ಮೇಯರ್ ಜ್ಯೋತಿ ಪಾಟೀಲ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಡಾ. ಶೋಭಾ ನಿಸ್ಸೀಮಗೌಡರ ಸೇರಿದಂತೆ ಹಲವರಿದ್ದರು.