ಆಟೋದಲ್ಲಿ ಮಹಿಳೆಯ ಚಿನ್ನಸುಲಿಗೆ ಮಾಡಿದ್ದ ಚಾಲಕ ಸೆರೆ

KannadaprabhaNewsNetwork |  
Published : Nov 04, 2026, 03:00 AM IST
advocate Protest | Kannada Prabha

ಸಾರಾಂಶ

ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಚಿನ್ನದ ಬಳೆಗಳನ್ನು ಸುಲಿಗೆ ಮಾಡಿದ್ದ ಆಟೋ ಚಾಲಕನನ್ನು ಕೊಡುಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿ 2 ಲಕ್ಷ ರು. ಮೌಲ್ಯದ 15 ಗ್ರಾಂ ಚಿನ್ನದ ಬಳೆಗಳು ಹಾಗೂ ಆಟೋವನ್ನು ಜಪ್ತಿ ಮಾಡಿದ್ದಾರೆ. ಹೆಬ್ಬಾಳ ನಿವಾಸಿ ಅಲ್ಲಾ ಬಕಾಶ್‌ ಬಂಧಿತ.

ಕನ್ನಡಪ್ರಭವಾರ್ತೆ ಬೆಂಗಳೂರು

ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಚಿನ್ನದ ಬಳೆಗಳನ್ನು ಸುಲಿಗೆ ಮಾಡಿದ್ದ ಆಟೋ ಚಾಲಕನನ್ನು ಕೊಡುಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿ 2 ಲಕ್ಷ ರು. ಮೌಲ್ಯದ 15 ಗ್ರಾಂ ಚಿನ್ನದ ಬಳೆಗಳು ಹಾಗೂ ಆಟೋವನ್ನು ಜಪ್ತಿ ಮಾಡಿದ್ದಾರೆ. ಹೆಬ್ಬಾಳ ನಿವಾಸಿ ಅಲ್ಲಾ ಬಕಾಶ್‌ (47) ಬಂಧಿತ.

ವಿದ್ಯಾರಣ್ಯಪುರದ ನಿವಾಸಿಯಾದ ದೂರುದಾರರು ಅ.15 ರಂದು ವಿಧಾನಸೌಧ ಆಟೋ ನಿಲ್ದಾಣದಿಂದ ಮನೆಗೆ ಹೋಗಲು ಆಟೋರಿಕ್ಷಾ ಹತ್ತಿದ್ದಾರೆ. ಮಳೆ ಬರುತ್ತಿದ್ದ ಕಾರಣ ಈ ಆಟೋವನ್ನು ಸಂಜೆ 6 ಗಂಟೆಯ ಸುಮಾರಿಗೆ ಹೆಬ್ಬಾಳದ ಭದ್ರಪ್ಪ ಲೇಔಟ್ ಫ್ಲೈ ಓವರ್‌ ಬಳಿ ಬರುತ್ತಿದ್ದಂತೆ ಚಾಲಕ ಇಂಜಿನ್ ಚೆಕ್ ಮಾಡುವ ನೆಪದಲ್ಲಿ ಆಟೋ ನಿಲ್ಲಿಸಿದ್ದಾನೆ. ನಂತರ ಆಟೋದಲ್ಲಿದ್ದ ಮಹಿಳೆ ಬಳಿ ಹೋಗಿ ಅವರ ಬಾಯಿ ಮುಚ್ಚಿ ಚಾಕು ತೋರಿಸಿ ಹೆದರಿಸಿ ಚಿನ್ನದ ಬಳೆಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಘಟನಾ ಸ್ಥಳದ ರಸ್ತೆಯಲ್ಲಿರುವ ಸಿಸಿ ಕ್ಯಾಮೆರಾ ಪರಿಶೀಲಿಸಿ ಆಟೋ ನಂಬ‌ರ್ ಪತ್ತೆ ಹಚ್ಚಿ ನಂತರ ಚಾಲಕನನ್ನು ಬಂಧಿಸಿದ್ದಾರೆ. ವಿಚಾರಣೆಗೆ ಒಳಪಡಿಸಿದಾಗ ಸುಲಿಗೆ ಮಾಡಿದ ಬಳೆಗಳನ್ನು ಶಿವಾಜಿನಗರದ ಜ್ಯುವೆಲ್ಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ಅದರಂತೆ 15 ಗ್ರಾಂ ಚಿನ್ನದ ಬಳೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌