ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಪಟ್ಟಣದ ಶ್ರೀ ಆದಿಚುಂಚನಗಿರಿ ಪದವಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬದಲಾಗದ ಪರಿಸ್ಥಿತಿ: ಸ್ವಾತಂತ್ರ್ಯ ಪೂರ್ವದಲ್ಲಿ ಕೇವಲ ಶೇ.೯ರಷ್ಟಿದ್ದ ಮಹಿಳಾ ಸಾಕ್ಷರತೆ ಇಂದು ಶೇ.೭೦ಕ್ಕೆ ಏರಿದೆ. ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುತ್ತಿದ್ದರೂ ಲಕ್ಷಾಂತರ ಹೆಣ್ಣುಮಕ್ಕಳಿಗೆ ಇಂದಿಗೂ ಶಾಲೆಯ ಬಾಗಿಲು ತೆರೆದಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ, ಭ್ರೂಣ ಹತ್ಯೆ ಮತ್ತು ಅಪ್ರಾಪ್ತ ಹೆಣ್ಣುಮಕ್ಕಳ ಸಾಗಾಟದಂತಹ ಕೃತ್ಯಗಳು ಅವಿಶ್ರಾಂತವಾಗಿ ನಡೆಯುತ್ತಲೇ ಇವೆ. ಕೆಲಸ ಮಾಡುವ ಸ್ಥಳಗಳಲ್ಲಿ ತಾರತಮ್ಯ ಮತ್ತು ಅಭದ್ರತೆ ಮಹಿಳೆಯನ್ನು ಕಾಡುತ್ತಿದೆ. ಮಧ್ಯರಾತ್ರಿಯಲ್ಲಿ ಮಹಿಳೆ ನಿರ್ಭೀತಿಯಿಂದ ಓಡಾಡಬೇಕೆಂಬ ಗಾಂಧೀಜಿಯವರ ಕನಸು ಇಂದಿಗೂ ನನಸಾಗಿಲ್ಲ ಎಂದು ವಿಷಾದಿಸಿದರು.ಜಾಲತಾಣಗಳ ಅತಿಯಾದ ಬಳಕೆ:
ಸಾಧಕಿಯರು ಪ್ರೇರಣೆಯಾಗಲಿ:
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ.ಕೆ. ಮಂಜುನಾಥ್ ಮಾತನಾಡಿ, ಮಹಿಳಾ ಶಕ್ತಿಯೇ ಸಮಾಜದ ಶಕ್ತಿಯಾಗಿದೆ. ಸಾಲುಮರದ ತಿಮ್ಮಕ್ಕ, ಸುಧಾ ಮೂರ್ತಿಯವರಂತಹ ಸಾಧಕಿಯರನ್ನು ಮಾದರಿಯಾಗಿರಿಸಿಕೊಂಡು ವಿದ್ಯಾರ್ಥಿನಿಯರು ಸಿಗುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ವೇದಿಕೆಯಲ್ಲಿ ಸಹ ಪ್ರಾಧ್ಯಾಪಕರಾದ ಡಾ. ಪ್ರವೀಣ್ ಕುಮಾರ್, ಡಾ. ನಿರೂಪಮ, ಗ್ರಂಥಪಾಲಕಿ ಕವಿತಾ ಎಸ್.ಎಂ., ಪ್ರಜ್ವಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.