ಮಹಿಳೆಯರು ದೇಶಕ್ಕೆ ಶಕ್ತಿ ಇದ್ದಂತೆ

KannadaprabhaNewsNetwork |  
Published : Jan 07, 2024, 01:30 AM ISTUpdated : Jan 07, 2024, 05:19 PM IST
ಫೋಟೋ : ೬ಎಚ್‌ಎನ್‌ಎಲ್೩ | Kannada Prabha

ಸಾರಾಂಶ

ನಾವು ಕಾನೂನುಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾದ ಮಾರ್ಗದಲ್ಲಿ ಅಭಿವೃದ್ಧಿ ಕೆಲಸ ಮಾಡುವಲ್ಲಿ ಮುಂದಾಗುತ್ತೇವೆ ಇಲ್ಲವಾದರೆ ಇನ್ನೊಬ್ಬರು ಹೇಳುವುದನ್ನು ಕೇಳಿಕೊಂಡು ಸುಮ್ಮನಿರಬೇಕಾಗುತ್ತದೆ

ಹಾನಗಲ್ಲ: ರೋಶನಿ ಸಮಾಜ ಸೇವಾ ಸಂಸ್ಥೆ ಹಾಗೂ ತಾಪಂ ಸಹಯೋಗದಲ್ಲಿ ಗ್ರಾಪಂ ಮತ್ತು ಪುರಸಭೆ ಚುನಾಯಿತ ಮಹಿಳಾ ಸದಸ್ಯರಿಗೆ ಹಾನಗಲ್ಲಿನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರ ಉಧ್ಘಾಟಿಸಿದ ತಾಪಂ ಸಹ ನಿರ್ದೇಶಕ ಚನ್ನಬಸಪ್ಪ ಹಾವಣಗಿ ಮಾತನಾಡಿ, ಮಹಿಳೆಯರು ದೇಶಕ್ಕೆ ಶಕ್ತಿ ಇದ್ದಂತೆ ಇವರ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಳವಣಿಗೆಗಳು ದೇಶದ ಅಭಿವೃದ್ಧಿಗೆ ಸಹಕಾರಿ ಆಗುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಾವು ಕಾನೂನುಗಳನ್ನು ಸರಿಯಾಗಿ ತಿಳಿದುಕೊಂಡರೆ ಸರಿಯಾದ ಮಾರ್ಗದಲ್ಲಿ ಅಭಿವೃದ್ಧಿ ಕೆಲಸ ಮಾಡುವಲ್ಲಿ ಮುಂದಾಗುತ್ತೇವೆ ಇಲ್ಲವಾದರೆ ಇನ್ನೊಬ್ಬರು ಹೇಳುವುದನ್ನು ಕೇಳಿಕೊಂಡು ಸುಮ್ಮನಿರಬೇಕಾಗುತ್ತದೆ ಆದ್ದರಿಂದ ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾಹಿತಿ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಮಾತನಾಡಿ, ಚುನಾಯಿತ ಸದಸ್ಯರು ಸಮುದಾಯದ ಜನರೊಂದಿಗೆ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಾದರೆ ಅನುದಾನಗಳ ಜತೆ ಅನುದಾನ ಇಲ್ಲದೆಯು ಕೆಲವು ಸಾಮಾಜಿಕ ಕೆಲಸಗಳನ್ನು ಮಾಡಬಹುದಾಗಿದೆ ಮತ್ತು ಅವುಗಳ ಕಡೆಗೆ ಹೆಚ್ಚಿನ ಗಮನ ಹರಿಸುವುದು ಸೂಕ್ತವಾಗಿದೆ ಎಂದು ಹೇಳಿದ ಅವರು, ಸದಸ್ಯರು ಚುನಾವಣೆಯ ಸಂದರ್ಭದಲ್ಲಿ ಮಾತ್ರ ಮನೆ ಮನೆಗೆ ಹೋಗದೆ ಇತರೆ ದಿನಗಳಲ್ಲೂ ವಿಶೇಷವಾಗಿ ಭೇಟಿ ನೀಡಿ ಜನರ ಆರೋಗ್ಯ, ಹಿರಿಯ ನಾಗರಿಕರ, ಗರ್ಭಿಣಿ ಬಾಣಂತಿ ಮತ್ತು ಮಕ್ಕಳ ಆರೋಗ್ಯ ವಿಚಾರಿಸಿ ಸೂಕ್ತ ಸಲಹೆ ನೀಡುವುದು, ಅಂಗನವಾಡಿ, ಶಾಲೆ ಭೇಟಿಯ ಮೂಲಕ ಅವಶ್ಯಕ ಮೂಲಭೂತ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಪೂರೈಸಲು ಮುಂದಾಗುವುದು, ಆರೋಗ್ಯ ಶಿಬಿರ, ನೀರು ನೈರ್ಮಲ್ಯ ಜಾಗೃತಿ ಅಭಿಯಾನಗಳಂತಹ ಅರಿವು ಕಾರ್ಯಕ್ರಮಗಳನ್ನು ಗ್ರಾಮದಲ್ಲಿ ಹಮ್ಮಿಕೊಳ್ಳುವುದರಿಂದ ಗ್ರಾಮದ ಮಕ್ಕಳಿಗೆ ಮಹಿಳೆಯರಿಗೆ ಅನುಕೂಲವಾಗುತ್ತದೆ ಎಂದು ಹೇಳಿ ಗ್ರಾಮ ಸಭೆ, ವಿಶೇಷ ಗ್ರಾಮ ಸಭೆ, ಮಹಿಳಾ ವಿಶೇಷ ಗ್ರಾಮ ಸಭೆ, ಸಾಮಾನ್ಯ ಸಭೆಯ ಮಹತ್ವ ಮತ್ತು ಸದಸ್ಯರ ಪಾತ್ರ, ಚುನಾಯಿತ ಸದಸ್ಯರ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ವಿವರವಾಗಿ ತರಬೇತಿ ನೀಡಿದರು.

ತರಬೇತಿ ಕಾರ್ಯಾಗಾರದಲ್ಲಿ ತಾಪಂ ಮ್ಯಾನೇಜರ ಶ್ವೇತಾ, ಜನವೇದಿಕೆ ಮುಖಂಡ ಕಲೀಮ್ ಮಾಸನಕಟ್ಟಿ, ಮಹಿಳಾ ಸಬಲೀಕರಣದ ಸಂಯೋಜಕ ಡಿಗ್ಗಪ್ಪ ಲಮಾಣಿ, ಸಿಬ್ಬಂದಿ ಶೀಲಾ ಮ್ಯಾಗಳಮನಿ, ರೂಪಾ ರಜಪೂತ, ಎಸ್.ವಿ. ಪಾಟೀಲ್ ಹಾಗೂ ಗ್ರಾಪಂ ಮತ್ತು ಪುರಸಭೆ ೪೦ ಸದಸ್ಯರು ಭಾಗವಹಿಸಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ