ಹೆಣ್ಣು ಮಕ್ಕಳು ಸಶಕ್ತರಾಗಲು ಸಮಾಜ ಅವಕಾಶ: ಗದ್ಯಾಳ

KannadaprabhaNewsNetwork |  
Published : Jan 29, 2026, 02:45 AM IST
28ಹೆಣ್ಣು | Kannada Prabha

ಸಾರಾಂಶ

ಜಿಲ್ಲಾಡಳಿತ ಹಾಗೂ ನ್ಯೂಸಿಟಿ ನರ್ಸಿಂಗ್ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ

ಉಡುಪಿ: ಜಿಲ್ಲಾಡಳಿತ ಹಾಗೂ ನ್ಯೂಸಿಟಿ ನರ್ಸಿಂಗ್ ವಿದ್ಯಾಲಯಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾದ ಜನಜಾಗೃತಿ ಜಾಥಾಗೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸಲು, ಹೆಣ್ಣು ಮಕ್ಕಳ ಶಿಕ್ಷಣದ ಅರಿವು, ಹಾಗೂ ಲಿಂಗತಾರತಮ್ಯ ಹೋಗಲಾಡಿಸುವ ಕುರಿತು ಜಾಗೃತಿ ಮೂಡಿಸಲು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಹೆಣ್ಣು ಮಕ್ಕಳ ಹಕ್ಕು ಮತ್ತು ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹೆಣ್ಣು ಮಕ್ಕಳು ಸಶಕ್ತರಾಗಲು ಸಮಾಜ ಅವಕಾಶ ಮಾಡಿಕೊಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶ್ರೀರಾಮ ರಾವ್, ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಕಾರ್ಯಕ್ರಮದ ಉದ್ದೇಶಗಳು, ಮಹತ್ವ, ಭ್ರೂಣಲಿಂಗ ಪತ್ತೆ ಮತ್ತು ತಡೆಗಟ್ಟುವ ಕಾನೂನುಗಳ ಕುರಿತಾಗಿ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕರು, ಸಮಾಲೋಚಕರು-ಕ್ವಾಲಿಟಿ ಆಶುರೆನ್ಸ್, ಮಣಿಪಾಲ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ, ಆರೋಗ್ಯ ಇಲಾಖಾ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿ, ವಂದಿಸಿದರು.

ಜಾಥಾ ಸಮಾಪನ

ಜಾಥಾ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಮುಖ್ಯ ರಸ್ತೆಯಲ್ಲಿ ಹಾದು ಮಣಿಪಾಲದಿಂದ ಕ್ವಾಯಿನ್ ಸರ್ಕಲ್ ವೃತ್ತಾಕಾರವಾಗಿ ಡಿಸಿ ಕಚೇರಿಯಲ್ಲಿ ಸಮಾಪನಗೊಂಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ