ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಬೆಳಗ್ಗೆ ೯.೩೦ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟನೆ ಮಾಡಲಿದ್ದಾರೆ. ನಗರಸಭೆ ಹಾಗೂ ನಗರ ದಸರಾ ಸಮಿತಿ ಅಧ್ಯಕ್ಷೆ ಪಿ.ಕಲಾವತಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಹಿಳೆಯರ ಸ್ಪರ್ಧೆಯನ್ನು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಉದ್ಘಾಟಿಸುವರು.
ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೂಡಿಗೆ ಕ್ರೀಡಾ ಶಾಲೆ ನಿವೃತ್ತ ಪ್ರಾಂಶುಪಾಲೆ ಕುಮತಿ ಬೋಪಯ್ಯ, ನಗರ ದಸರಾ ಸಮಿತಿ ಖಜಾಂಚಿ ಸಬಿತಾ ವಿಜಯ್, ದಸರಾ ಸಾಂಸ್ಕೃತಿಕ ಸಮಿತಿ ಉಸ್ತುವಾರಿ ಅನಿತಾ ಪೂವಯ್ಯ, ಸಾಧನಾ ಮಹಿಳಾ ಸಹಕಾರ ಸಂಘದ ನಿರ್ದೇಶಕಿ ಪುಷ್ಪಾವತಿ, ಮಡಿಕೇರಿ ನಗರ ಪೊಲೀಸ್ ಠಾಣಾ ಆರಕ್ಷಕ ನಿರೀಕ್ಷಕಿ ಎಸ್. ಅನ್ನಪೂರ್ಣ, ಮಡಿಕೇರಿ ನಗರಾಭಿವೃದ್ಧಿ ಸದಸ್ಯೆ ಮಿನಾಝ್ ಪ್ರವೀಣ್, ಒಡಿಪಿ ಸಂಸ್ಥೆ ಜಿಲ್ಲಾ ಸಂಯೋಜಕಿ ಜಾಯ್ಸ್ ಮಿನೇಜಸ್, ನಗರ ಸಭಾ ಸದಸ್ಯರಾದ ಸವಿತಾ ರಾಕೇಶ್, ಚಿತ್ರಾವತಿ, ಮೇರಿ ವೇಗಸ್, ನೀಮಾ ಅರ್ಷದ್, ಸಿ.ಕೆ.ಮಂಜುಳಾ, ಕೆ.ಉಷಾ, ವೈ.ಡಿ.ಶ್ವೇತಾ, ಎಚ್.ಎನ್. ಶಾರದಾ, ನಾಮ ನಿರ್ದೇಶಿತ ಸದಸ್ಯೆ ಜುಲೇಕಾಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಪಿ. ಸಬಿತಾ ಉಪಸ್ಥಿತರಿರಲಿದ್ದಾರೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ.ಮನರಂಜನಾ ಸ್ಪರ್ಧೆಗಳು:
ಸಾಧಕರಿಗೆ ಸನ್ಮಾನ:
ಮಹಿಳಾ ದಸರಾ ಸಂಭ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಪೌರಸೇವಾ ನೌಕರರನ್ನು ಸನ್ಮಾನಿಲಾಗುವುದು.ಸಾಂಸ್ಕೃತಿಕ ವೈಭವ:
ಸಂಜೆ ೬ ಗಂಟೆಯಿಂದ ಕಲಾ ಸಂಭ್ರಮ ವೇದಿಕೆಯಲ್ಲಿ ಮಹಿಳೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿವೆ ಎಂದು ಸಂತೋಷ್ ತಿಳಿಸಿದ್ದಾರೆ.