ಕನ್ನಡಪ್ರಭವಾರ್ತೆ ರಾಯಚೂರು
ನಗರದ ಆಶಾಪೂರು ರಸ್ತೆಯಲ್ಲಿರುವ ಗ್ರಾಮೀಣ ಸ್ವ–ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸವಂರ್ಧನ ಸಂಸ್ಥೆ, ಜಿಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಹಿಳೆಯರಿಗೆ ಘನತ್ಯಾಜ್ಯ ಕಸ ವಿಲೇವಾರಿ ವಾಹನ ಚಾಲನೆ ಮಾಡುವ ತರಬೇತಿ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಸ್ವ ಸಹಾಯ ಗುಂಪಿನ ಮಹಿಳೆಯರಿಗೆ ಆರ್ಥಿಕವಾಗಿ ಸಬಲರಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಾಹನ ಚಾಲನಾ ತರಬೇತಿಗೆ ಆಯ್ಕೆಯಾದ ಮಹಿಳೆಯರು ಎದೆಗುಂದದೇ ಯಾವುದರಲ್ಲಿಯೂ ಕಮ್ಮಿಯಿಲ್ಲ ಎಂಬಂತೆ ಗ್ರಾಮೀಣ ಪ್ರದೇಶದಲ್ಲಿ ಸಮರ್ಪಕವಾಗಿ ವಾಹನ ಚಲಾಯಿಸಬೇಕು ಎಂದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ ಕಾಟೋಕರ ಹಾಗೂ ಎನ್.ಆರ್.ಎಲ್.ಎಮ್ ಜಿಲ್ಲಾ ವ್ಯವಸ್ಥಾಪಕ ವಿಜಯ ಕುಮಾರ ಮಾತನಾಡಿದರು.ಇದೇ ವೇಳೆ ಸ್ವಚ್ಛತಾ ಸಖಿಯರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಎಸ್.ಬಿ.ಐ ಲೀಡ್ ಬ್ಯಾಂಕ್ ಮ್ಯಾನೇಜರ್ ರವಿ ಉಪ್ಪಾರ, ಆರ್.ಸೆ.ಟಿ ನಿರ್ದೇಶಕ ವಿಜಯ ಕುಮಾರ್ ಬಡಿಗೇರ, ತರಬೇತುದಾರರಾದ ಅಶ್ವಿನಿ, ತಾರನಾಥ ಹಾಗೂ 30 ಮಹಿಳೆಯರು ಉಪಸ್ಥಿತರಿದ್ದರು.