ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಸ್ಟೇಡಿಯಂ ರಸ್ತೆಯ ಜಿ.ಜಿ.ಸಮುದಾಯ ಭವನದಲ್ಲಿ ಸೋಮವಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭೋತ್ಸವ ಸಮಾರಂಭ’ ದಲ್ಲಿ ಅವರು ಮಾತನಾಡಿದರು.
ನಮ್ಮಿಂದ ಹಾಗೂ ನಮ್ಮ ಕುಟುಂಬದಿಂದಲೇ ಸಮಾನತೆ ಶುರುವಾಗಬೇಕು. ಪೋಷಕರು ಗಂಡು, ಹೆಣ್ಣು ಇಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಮೂಲಕ ಬದಲಾವಣೆ ಪ್ರಾರಂಭವಾಗಬೇಕು ಎಂದು ಹೇಳಿದರು.ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಏಚ್.ಗುಡ್ಡದೇಶ್ವರಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಕುಟುಂಬಕ್ಕೆ ಉತ್ತಮ ಹೆಸರು ತರುವ ಮೂಲಕ ಸ್ವಾವಲಂಬಿಗಳಾಗಿ, ಆರ್ಥಿಕ ಸ್ವಾತಂತ್ರ್ಯದಲ್ಲಿ ಯಶಸ್ವಿಗಳಾಗಬೇಕು. ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕಂಡ ಮಹಿಳೆಯರು ನೀವಾಗಬೇಕು ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ‘ಮಹಿಳಾ ಸಿರಿ’ ವಾರ್ಷಿಕ ಸಂಚಿಕೆ ಬಿಡುಗಡೆ ಹಾಗೂ ಬಿಕಾಂ ಪದವಿಯಲ್ಲಿ ಉನ್ನತ ಶ್ರೇಣಿ ಪಡೆದ ಎಂ.ಜೆ.ಸಿಂಧು ಹಾಗೂ ಬಿಎ ಪದವಿಯಲ್ಲಿ ಉನ್ನತ ಶ್ರೇಣಿ ಪಡೆದ ಎಂ.ಎಸ್.ದೀಪಾ ಅವರಿಗೆ ತಲಾ ಮೂರು ಸಾವಿರ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. 40 ಜನ ಉನ್ನತ ಶ್ರೇಣಿ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ 1 ಸಾವಿರ ರು. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ 180 ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.