ಮಹಡಿ ಮೇಲಿಂದ ಬಿದ್ದು ಮಹಿಳೆ ಸಾವು

KannadaprabhaNewsNetwork | Published : Oct 7, 2023 2:16 AM

ಸಾರಾಂಶ

ಬಾಗಿಲಿಗೆ ನೀರು ಹಾಕುವಾಗ ಮೊದಲನೆ ಮಹಡಿಯಿಂದ ಆಯತಪ್ಪಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಹಳೇಪಾಳ್ಯದಲ್ಲಿ ಶುಕ್ರವಾರ ನಡೆದಿದೆ.
ತಿಪಟೂರು: ಬಾಗಿಲಿಗೆ ನೀರು ಹಾಕುವಾಗ ಮೊದಲನೆ ಮಹಡಿಯಿಂದ ಆಯತಪ್ಪಿ ಬಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಹಳೇಪಾಳ್ಯದಲ್ಲಿ ಶುಕ್ರವಾರ ನಡೆದಿದೆ. ಹಳೇಪಾಳ್ಯದ ದಯಾನಂದ್ ಎಂಬುವರ ಪತ್ನಿ ಹೇಮಾವತಿ (೪೨) ಮೃತಪಟ್ಟ ದುರ್ದೈವಿ. ಬೆಳಗ್ಗೆ ಬಾಗಿಲಿಗೆ ನೀರು ಹಾಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ. ಅವರಿಗೆ ಇಬ್ಬರು ಪುತ್ರಿಯರು ಹಾಗೂ ಪುತ್ರ ಇದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article