ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠ

KannadaprabhaNewsNetwork |  
Published : Mar 13, 2026, 03:00 AM IST
ತಾಲ್ಲೂಕು ಪಂಚಾಯಿತಿ ವತಿಯಿಂದ ತಾಲ್ಲೂಕಿನ ಹಳೇರೊಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬುದುವಾರ ಹಳಿರೋಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ‘ಪಂಚ ಗ್ಯಾರಂಟಿ ಯೋಜನೆಗಳ ಅರಿವು’ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷ ಸಂತೋಷ್ ಗಣಾಚಾರಿ ಅವರು ಮಾತನಾಡಿದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠವಾಗಿದೆ ಎಂದು ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೊಲ್ಹಾರ ತಾಲೂಕು ಅಧ್ಯಕ್ಷ ಸಂತೋಷ್ ಗಣಾಚಾರಿ ಹೇಳಿದರು.

ಕನ್ನಡಪ್ರಭ ವಾರ್ತೆ ಕೊಲ್ಹಾರ

ರಾಜ್ಯ ಸರ್ಕಾರದ ಮಹತ್ವದ ಪಂಚ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ ಬಲಿಷ್ಠವಾಗಿದೆ ಎಂದು ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕೊಲ್ಹಾರ ತಾಲೂಕು ಅಧ್ಯಕ್ಷ ಸಂತೋಷ್ ಗಣಾಚಾರಿ ಹೇಳಿದರು.

ತಾಲೂಕು ಪಂಚಾಯತಿ ವತಿಯಿಂದ ತಾಲೂಕಿನ ಹಳೇರೊಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಬುಧವಾರ ಹಳಿರೋಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅರಿವು ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮಹಿಳೆಯರ ಸಬಲೀಕರಣಕ್ಕೋಸ್ಕರ ಯೋಜನೆಗಳನ್ನು ಕೊಟ್ಟು ಮಹಿಳೆಯರಿಗೆ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದೆ ಬರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಬಹಳ ಮಹತ್ವವಾಗಿವೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದೆ. ಬಡವರು ಹಾಗೂ ಮಹಿಳೆಯರ ಏಳಿಗೆಗೆ ಇವು ಸಹಕಾರಿಯಾಗಿವೆ. ಕುಟುಂಬದ ನಿರ್ವಹಣೆಯ ಜೊತೆಗೆ ಅನೇಕ ಮಹಿಳೆಯರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದರು.ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಭಾರತಿ ಹಡಪದ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ದೊರೆತ ಹಣದಲ್ಲಿ ಹಸು ಖರೀದಿಸಿದ್ದಾರೆ . ಇದರಿಂದ ಅವರ ಕುಟುಂಬ ನಿರ್ವಹಣೆ ಸುಧಾರಿಸಿದ್ದಾರೆ ಕೆಲವೊಂದು ಕುಟುಂಬಗಳು ಭೂರಹಿತರಾದ ಜನರಿದ್ದಾರೆ ಅನ್ನಭಾಗ್ಯ ಯೋಜನೆಯಿಂದ ಹೊಟ್ಟೆತುಂಬಾ ಊಟ ಮಾಡುವಂತಾಗಿದೆ. ಶಕ್ತಿ ಯೋಜನೆಯಿಂದ ಪ್ರಯಾಣದ ಹಣ ಉಳಿತಾಯ ಮಾಡಿದ್ದಾರೆ . ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲ ಆಗಿದೆ ಎಂದು ತಿಳಿಸಿದರು.ಪಂಚ ಗ್ಯಾರಂಟಿ ಯೋಜನೆಗಳ ಅರಿವು ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ಹೆಣ್ಣು ಮಕ್ಕಳಿಗೆ ನೋಟು ಬುಕ್, ಪೆನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಉಪತಹಸೀಲ್ದಾರ್ ಎನ್.ಕೆ.ನದಾಫ್, ತಾಲೂಕು ಪಂಚಾಯತಿ ಅಧಿಕಾರಿ ಸುನಿಲ್ ಮುದ್ದಿನ್, ರಾಮನಗೌಡ ಪಾಟೀಲ(ತಾಲೂಕು ಪಂಚಾಯತಿ ಅಕೌಂಟೆಂಟ್), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಧಿಕಾರಿಗಳಾದ ಪಾರ್ವತಿ ಹಳ್ಳದ, ಜ್ಯೋತಿ ಆಳಗಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಆನಂದ ಕೋಟ್ಯಾಳ, ಈರಣ್ಣ ನಾಗರಾಳ, ಲಕ್ಷ್ಮಣ ಸುನಗದ, ದುಂಡಪ್ಪ ರೊಳ್ಳಿ, ತಾಲೂಕು ಗ್ಯಾರಂಟಿ ಸದಸ್ಯ ಮೋತಿಲಾಲ್ ಲಮಾಣಿ, ಜಯಶ್ರೀ ಲಮಾಣಿ, ಕೃಷ್ಣ ರಾ.ಲಮಾಣಿ ಹಾಗೂ ಬಸು ಚಲವಾದಿ ಹಾಗೂ ಗ್ಯಾರಂಟಿ ಯೋಜನೆಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.-------

ಪಂಚ ಗ್ಯಾರಂಟಿ ಯೋಜನೆಗಳಿಂದ ಯಾರಾದರೂ ವಂಚಿತರಾಗಿದ್ದಲ್ಲಿ ಸೂಕ್ತ ದಾಖಲೆ ಸಲ್ಲಿಸಿದರೇ ಸಮಸ್ಯೆಗೆ ಸ್ಪಂದಿಸಲಾಗುವುದು. ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಆರ್ಥಿಕ ಪ್ರಗತಿ ಏರಿಕೆಯಾಗಿದೆ. ಪ್ರತಿಯೊಬ್ಬರ ತಲಾ ಆದಾಯ 2 ಲಕ್ಷದವರೆಗೆ ಆಗಿದೆ. ಬೇರೆ ರಾಜ್ಯ ಹೋಲಿಸಿದರೇ ನಮ್ಮ ಕರ್ನಾಟಕ ಸಾಲದಲ್ಲಿಲ್ಲ. ಅಭಿವೃದ್ಧಿಯಲ್ಲಿ ಸಾಗುತ್ತಿದೆ.

-ಸಂತೋಷ್ ಗಣಾಚಾರಿ,

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷುಲ್ಲಕ ಕಾರಣಕ್ಕೆ ಥಳಿಸಿ ದಲಿತ ಯುವಕನ ಹತ್ಯೆ
ಶ್ರದ್ಧೆ, ನಂಬಿಕೆ ಭಕ್ತಿಯ ಮೂಲ: ಶ್ರೀ ರಾಜಶೇಖರಾನಂದ ಸ್ವಾಮೀಜಿ