ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಸ್ತ್ರೀ ಶಕ್ತಿಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಶಾಲಾ ಮಕ್ಕಳಿಗಾಗಿ ‘ವೀರೆ- ಸ್ತ್ರೀಶಕ್ತಿ ಸಂವರ್ಧನಾ ತರಬೇತಿ’ ಕಾರ್ಯಕ್ರಮ ಕಲ್ಲಬೆಟ್ಟು ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯಲ್ಲಿ ಜರಗಿದ್ದು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣುಮಕ್ಕಳ ಸುರಕ್ಷತೆಯ ಅವಶ್ಯಕತೆ, ಅವರ ಆತ್ಮವಿಶ್ವಾಸ ಹೆಚ್ಚಿಸಲು ತರಬೇತಿಗಳ ಮಹತ್ವ, ಅವರ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಾಚಾರ್ಯ ಎಸ್. ಜಿ. ಹಿರೇಮಠ್ ಅವರು ಮಕ್ಕಳಲ್ಲಿ ಸ್ವಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ತರಬೇತಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.
ಸಭಾ ಕಾರ್ಯಕ್ರಮದ ನಂತರ ಇಂಚರ ಫೌಂಡೇಷನ್ ಸಂಸ್ಥೆಯ ಸಿಬ್ಬಂದಿ ತರಬೇತಿ ನೀಡಿದರು.
ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆಯ ಪ್ರಭಾರ ನಿಲಯ ಪಾಲಕಿ ಆಶಾಲತಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ಚೈತ್ರಾ ಪಾಟೀಲ್ ಉಪಸ್ಥಿತರಿದ್ದರು. ಉಪನ್ಯಾಸಕ ತೇಜಸ್ವೀ ಭಟ್ ನಿರೂಪಿಸಿದರು.