ಧಗ್ರಾ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ ಸದೃಢ: ಜೆ. ಚಂದ್ರಶೇಖರ

KannadaprabhaNewsNetwork |  
Published : Oct 30, 2024, 12:51 AM IST
೨೯ಎಚ್‌ಬಿಎಚ್೨ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಡೆದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶದಲ್ಲಿ ವಿವಿಧ ಒಕ್ಕೂಟಗಳಿಗೆ ಲಾಭಾಂಶದ ಆದೇಶ ಮತ್ತು ಚೆಕ್ ವಿತರಿಸಿದರು.  | Kannada Prabha

ಸಾರಾಂಶ

ಧರ್ಮಸ್ಥಳ ಯೋಜನೆಯಿಂದ ರಾಜ್ಯದ ಅನೇಕ ಬಡ ಕುಟುಂಬಗಳು ಆರ್ಥಿಕ ಪ್ರಗತಿ ಕಂಡು ತಮ್ಮ ಕುಟುಂಬಗಳನ್ನು ಸುಖಿ ಕುಟುಂಬಗಳನ್ನಾಗಿ ಪರಿವರ್ತಿಸಿದ್ದಾರೆ ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಹೇಳಿದರು.

ಹಗರಿಬೊಮ್ಮನಹಳ್ಳಿ: ಗ್ರಾಮೀಣ ಬಡಜನತೆಯನ್ನು ಸ್ವಸಹಾಯ ಗುಂಪುಗಳ ಮೂಲಕ ಸಂಘಟಿಸಿ, ಆರ್ಥಿಕ ಸಧೃಡರನ್ನಾಗಿ ಮಾಡುವ ಕಾರ್ಯವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ ಎಂದು ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಹೇಳಿದರು.ಪಟ್ಟಣದ ಕನ್ನಿಕಾ ಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಯೋಜನೆಯಡಿ ರೈತ ಕುಟುಂಬಗಳಿಗೆ ವಿಶೇಷ ಆದ್ಯತೆ ನೀಡಿ, ರೈತರ ಬದುಕನ್ನು ಹಸನಗೊಳಿಸಲಾಗಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮಹಿಳೆಯರನ್ನು ಸಮಾಜದಲ್ಲಿ ಸದೃಢಗೊಳಿಸಲು ಪಣತೊಟ್ಟು ನಿಂತಿದ್ದಾರೆ. ಯಾವುದೇ ನಿಂದನೆಗಳಿಗೆ ಜಗ್ಗದೆ ನಿರಂತರವಾಗಿ ಸಮಾಜಮುಖಿ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಅಂತರ್ಜಲ ಹೆಚ್ಚಿಸಲು ಕೆರೆಗಳ ಹೂಳೆತ್ತುವ ಕಾರ್ಯಕ್ರಮ ಜೊತೆಗೆ ಸಮಾಜದಲ್ಲಿ ಧಾರ್ಮಿಕತೆ, ಸಂಸ್ಕೃತಿ ಉಳಿಸಲು ದೇವಸ್ಥಾನಗಳ ಜೀರ್ಣೋದ್ಧಾರ ಮಾಡಿದ್ದಾರೆ. ಶಿಕ್ಷಣಕ್ಕೆ ಅಪಾರ ನೆರವು ನೀಡಿ ಜ್ಞಾನವನ್ನು ಭಿತ್ತಿದ್ದಾರೆ. ಧರ್ಮಸ್ಥಳ ಯೋಜನೆಯಿಂದ ರಾಜ್ಯದ ಅನೇಕ ಬಡ ಕುಟುಂಬಗಳು ಆರ್ಥಿಕ ಪ್ರಗತಿ ಕಂಡು ತಮ್ಮ ಕುಟುಂಬಗಳನ್ನು ಸುಖಿ ಕುಟುಂಬಗಳನ್ನಾಗಿ ಪರಿವರ್ತಿಸಿದ್ದಾರೆ ಎಂದರು.

ವಿಜಯನಗರ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿ, ಧರ್ಮಸ್ಥಳ ಯೋಜನೆ ಭರವಸೆಯ ಬೆಳಕಾಗಿ ಕಾರ್ಯಪ್ರವೃತ್ತವಾಗಿದೆ. ಲಕ್ಷಾಂತರ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಂಡು, ಕುಟುಂಬದ ಆರ್ಥಿಕತೆಗೆ ಹೆಗಲೊಡ್ಡಿದ್ದಾರೆ. ವಿಜಯನಗರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಯೋಜನೆಯ ಮೂಲಕ ಸಮಾಜಮುಖಿ ಕೆಲಸಗಳನ್ನು ಮಾಡಿ ಗುರುತಿಸಿಕೊಳ್ಳಲಾಗಿದೆ ಎಂದರು.

ಇದೇವೇಳೆ ಅಡವಿ ಆನಂದದೇವನಹಳ್ಳಿ ಹಾಲಿನ ಡೈರಿಯ ಕಟ್ಟಡ ನಿರ್ಮಾಣಕ್ಕೆ ₹೧ಲಕ್ಷ ಸಹಾಯಧನದ ಮಂಜೂರಾತಿ ಪತ್ರ ನೀಡಿದರು. ಸಂಘಗಳ ವ್ಯವಹಾರಕ್ಕೆ ಅನುಗುಣವಾಗಿ ಮಂಜೂರಾದ ಲಾಭಾಂಶದ ಚೆಕ್‌ಗಳನ್ನು ಸಾಂಕೇತಿಕವಾಗಿ ಒಕ್ಕೂಟಗಳಿಗೆ ವಿತರಿಸಿದರು. ತಾಲೂಕು ಯೋಜನಾಧಿಕಾರಿಗಳಾದ ಟಿ.ಆರ್. ಮಂಜುಳಾ, ಎಂ.ವಾಣಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶಿಲ್ಪಕಲಾ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಬದಾಮಿ ನಟರಾಜ್, ಸದಸ್ಯರಾದ ಎಚ್. ದಿವಾಕರ, ಯು.ಕೆ. ಕೊಟ್ರೇಶ, ಬ್ರಹ್ಮಾನಂದ ಗುತ್ತಲ್, ಹೊನ್ನೂರಪ್ಪ, ಯೋಜನೆಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು ಇದ್ದರು.

PREV

Recommended Stories

ಗ್ರಾಮೀಣ ಭಜನಾ ಮಂಡಳಿಗಳಲ್ಲಿ ತತ್ವಪದಗಳು ಜೀವಂತ
ರಾಮದುರ್ಗ ಧನಲಕ್ಷ್ಮೀ ಶುಗರ್ ಚುನಾವಣೆ: ಸತತ 4ನೇ ಬಾರಿಗೆ ಯಾದವಾಡರ ನೇತೃತ್ವಕ್ಕೆ ಜಯ