ಮಹಿಳೆಯರು ಪ್ರತಿ ಕ್ಷೇತ್ರದಲ್ಲೂ ಅಪ್ರತಿಮ ಸಾಧನೆ ಗೈದಿದ್ದಾರೆ-ಶಾಸಕ ಪಠಾಣ್‌

KannadaprabhaNewsNetwork |  
Published : Mar 17, 2026, 02:15 AM IST
ಶಿಗ್ಗಾಂವಿ ಪಟ್ಟಣದ ಪಾಟೀಲ ಕಂಫರ್ಟನಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮವನ್ನು ಶಾಸಕ ಪಠಾಣ ಉದ್ಘಾಟಿಸಿದರು. | Kannada Prabha

ಸಾರಾಂಶ

ಸಮಾಜದ ಪುರುಷ ಪ್ರಧಾನ ವ್ಯವಸ್ಥೆಯ ಸವಾಲುಗಳನ್ನು ಮೆಟ್ಟಿನಿಂತು ಇಂದು ಮಹಿಳೆಯರು ದೇಶದ ರಾಷ್ಟ್ರಪತಿ, ಪ್ರಧಾನಿ ಹುದ್ದೆಯಿಂದ ಹಿಡಿದು ಪ್ರತಿ ಕ್ಷೇತ್ರದಲ್ಲೂ ಅಪ್ರತಿಮ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ ಹೇಳಿದರು.

ಶಿಗ್ಗಾಂವಿ: ಸಮಾಜದ ಪುರುಷ ಪ್ರಧಾನ ವ್ಯವಸ್ಥೆಯ ಸವಾಲುಗಳನ್ನು ಮೆಟ್ಟಿನಿಂತು ಇಂದು ಮಹಿಳೆಯರು ದೇಶದ ರಾಷ್ಟ್ರಪತಿ, ಪ್ರಧಾನಿ ಹುದ್ದೆಯಿಂದ ಹಿಡಿದು ಪ್ರತಿ ಕ್ಷೇತ್ರದಲ್ಲೂ ಅಪ್ರತಿಮ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ ಹೇಳಿದರು. ಪಟ್ಟಣದ ಪಾಟೀಲ್ ಕಂಫರ್ಟ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

೧೮ನೇ ಶತಮಾನದಲ್ಲಿ ಶಿಕ್ಷಣ ಮತ್ತು ಸಮಾಜ ಸುಧಾರಣೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರು ಮಾಡಿದ ಸಾಧನೆ ಇಂದಿಗೂ ನಮಗೆ ಮಾದರಿ, ಸಾಧಿಸುವ ಛಲವಿದ್ದರೆ ಏನನ್ನಾದರೂ ಸಾಧಿಸಬಹುದು, ಮಹಿಳೆಯರು ಅಬಲೆಯರಲ್ಲ ಸಬಲೆಯರು ಎಂಬುದನ್ನು ನಿರೂಪಿಸಬೇಕು ಮಹಿಳಾ ಸಂಘಟನೆಗಳು ಒಟ್ಟಾಗಿ ಕಾರ್ಯಕ್ರಮ ರೂಪಿಸಬೇಕು, ತಾಲೂಕಿನಲ್ಲಿ ಮಹಿಳೆಯರ ಉನ್ನತ ಶಿಕ್ಷಣಕ್ಕಾಗಿ ಶೀಘ್ರದಲ್ಲೇ ಮಹಿಳಾ ಕಾಲೇಜನ್ನು ಆರಂಭಿಸಲಾಗುತ್ತಿದೆ, ಇದು ಈ ಭಾಗದ ಹೆಣ್ಣುಮಕ್ಕಳ ಶೈಕ್ಷಣಿಕ ಪ್ರಗತಿಗೆ ದೊಡ್ಡ ಕೊಡುಗೆಯಾಗಲಿದೆ ಎಂದರು.ನಿವೇದಿತಾ ಎಂ.ಜಿ. ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಸಾಧಕ ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್. ಎಫ್. ಮಣಕಟ್ಟಿ, ಗುಡ್ಡಪ್ಪ ಜಲದಿ, ಮಂಜುನಾಥ ತಿಮ್ಮಾಪುರ, ಸಾವಿತ್ರಿಬಾಯಿ ಫುಲೆ ಶಿಕ್ಷಕೀಯರ ಸಂಘದ ತಾಲೂಕು ಅಧ್ಯಕ್ಷೆ ಆರ್.ಆರ್. ಓಣಿಮನಿ, ರಾಜೇಶ್ವರಿ ಸಚ್ಚೇಶ್ವರ, ಗೀತಾ ಸುತ್ತಕೋಟಿ ಸೇರಿದಂತೆ ಶಿಕ್ಷಕೀಯರು, ಮಹಿಳೆಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಿಸ್‌ನಲ್ಲಿ ಅಮೆರಿಕ-ಇರಾನ್‌ ಸಂಧಾನ ಶುಭಾರಂಭ
ಸಿಎಂ ಡಿಕೆಶಿ ಯುವ ನಾಯಕನೋ ? ಮುತ್ಯನೋ ?