ದೊಡ್ಡಬಳ್ಳಾಪುರ: ಇಲ್ಲಿನ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಹಿಳಾ ಘಟಕದ ವತಿಯಿಂದ ಭಾನುವಾರ ಮಹಿಳಾ ದಿನಾಚರಣೆ ಕಾರ್ಯಕ್ರಮ ಜೆ.ಪಿ ವೈಭವ ಸಭಾಂಗಣದಲ್ಲಿ ನಡೆಯಿತು.
ಅವರು ಮಾತನಾಡಿ, ಮಹಿಳೆಯರು ಇಂದು ಎಲ್ಲ ವಲಯಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಸಾಮಾಜಿಕ ವ್ಯವಸ್ಥೆಯಲ್ಲಿ ಸಮಾನತೆಯ ಸಂಕಲ್ಪವನ್ನು ಸಾಕಾರಗೊಳಿಸಲು ಮಹಿಳಾ ಸಬಲೀಕರಣ ಅತ್ಯಗತ್ಯವಾಗಿದೆ. ಮಹಿಳೆಯರು ತಮ್ಮ ಸಾಮಾಜಿಕ ಹೊಣೆಯನ್ನು ಅರಿತು ಕಾರ್ಯನಿರ್ವಹಣೆಯಲ್ಲಿ ತೊಡಗುವುದು ಅತ್ಯಗತ್ಯ. ಆಧುನಿಕ ಯುಗದಲ್ಲಿ ಮಹಿಳೆಯರ ಬೆಳವಣಿಗೆ ಪ್ರಜ್ಞಾಪೂರ್ವಕವಾಗಿರಬೇಕು ಎಂದರು.
ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಉಪಾಧ್ಯಕ್ಷೆ ಲತಾ ಆರಾಧ್ಯ ಮಾತನಾಡಿ, ಹೆಣ್ಣು ಸಂಸಾರದ ಕಣ್ಣು ಮಾತ್ರವಲ್ಲದೆ ಸಮಾಜದ ಕಣ್ಣೂ ಆಗಿರುತ್ತಾಳೆ. ಆಕೆಯ ಸಾಮಾಜಿಕ ಕಾಳಜಿ ಅನನ್ಯವಾದದ್ದು ಎಂದು ತಿಳಿಸಿದರು.ಜಿಲ್ಲಾ ನಿರ್ದೇಶಕಿ ರೇಣಿಕಾ, ವಚನ ಗಾಯನ ಕಾರ್ಯಕ್ರಮ ನೀಡಿದರು. ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನಾಗರಾಜು, ಪ್ರೇಮ, ತಾಲೂಕು ಘಟಕದ ಅಧ್ಯಕ್ಷ ಸುಜಯ್, ತಾಲೂಕು ಪದಾಧಿಕಾರಿಗಳಾದ ರಾಜೇಶ್ವರಿ, ವೇದ, ಶೋಭಾ, ಸುಮ, ಸರ್ವಮಂಗಳ, ಸೌಮ್ಯ ಮತ್ತು ಅನೇಕ ಮಹಿಳೆಯರು ಭಾಗವಹಿಸಿದ್ದರು. ಮಹಿಳೆಯರು ಮತ್ತು ಮಕ್ಕಳಿಗಾಗಿ ಹಲವು ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.
ಫೋಟೋ-23ಕೆಡಿಬಿಪಿ1- ದೊಡ್ಡಬಳ್ಳಾಪುರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಹಿಳಾ ಘಟಕದ ವತಿಯಿಂದ ಭಾನುವಾರ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.