ಕನ್ನಡಪ್ರಭ ವಾರ್ತೆ ದಾವಣಗೆರೆ
ಇಲ್ಲಿನ ಜಿಲ್ಲಾಡಳಿತ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಯೋಜಿಸಿಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಪಾಟಿಸಿ ಮಾತನಾಡಿ, ಪ್ರತಿಯೊಬ್ಬ ಮಹಿಳೆಯೂ ಈ ನಾಡಿನ ಶಕ್ತಿ ಮತ್ತು ಗೌರವದ ಸಂಕೇತವಾಗಿದ್ದಾರೆ, ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ದೇವತೆಯ ಸ್ಥಾನ ನೀಡಲಾಗಿದೆ. ಆದರೆ, ವಾಸ್ತವದಲ್ಲಿ ಮಹಿಳೆಯರಿಗೆ ಹಕ್ಕುಗಳು ಮತ್ತು ಗೌರವ ಸಿಗದಿದ್ದಲ್ಲಿ, ಅದನ್ನು ಧೈರ್ಯವಾಗಿ ಹೋರಾಡಿ ಪಡೆದುಕೊಳ್ಳುವ ಶಕ್ತಿಯನ್ನು ಹೆಣ್ಣುಮಕ್ಕಳು ಬೆಳೆಸಿಕೊಳ್ಳಬೇಕು ಎಂದರು.
ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಹಾಗೂ ಇತರ ಆಪ್‌ಗಳ ಮೂಲಕ ಅಪರಿಚಿತರ ಜೊತೆ ಸ್ನೇಹ ಬೆಳೆಸುವಾಗ ವಿದ್ಯಾರ್ಥಿನಿಯರು ಜಾಗರೂಕರಾಗಿರಬೇಕು. ಆನ್‌ಲೈನ್‌ನಲ್ಲಿ ಅಪರಿಚಿತರ ಪ್ರೇಮ ಬಲೆಗೆ ಬಿದ್ದು ವಂಚನೆ, ಮಾನವ ಕಳ್ಳಸಾಗಾಣಿಕೆ ಹಾಗೂ ಶೋಷಣೆಗೆ ಒಳಗಾದ ಅನೇಕ ನೈಜ ಘಟನೆಗಳನ್ನು ವಿದ್ಯಾರ್ಥಿನಿಯರ ಗಮನಕ್ಕೆ ತಂದರು.ಖಾಸಗಿ ವಿಡಿಯೋಗಳು ಮತ್ತು ಆನ್‌ಲೈನ್ ಬೆದರಿಕೆಗಳಿಗೆ ಹೆದರಿ ಯಾರೂ ಮೌನವಾಗಿ ಕಿರುಕುಳ ಸಹಿಸಬಾರದು ಮತ್ತು ಆತ್ಮಹತ್ಯೆ ಮಾಡಿಕೊಳ್ಳಬಾರದು ಇಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಪೋಲಿಸ್ ಇಲಾಖೆ ಅಥವಾ ಮಹಿಳಾ ಆಯೋಗಕ್ಕೆ ದೂರು ನೀಡಬೇಕು ಎಂದರು.
ಜೆ.ಎಚ್.ಪಟೇಲ್ ಬಡಾವಣೆಯ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕಾಲೇಜು ಸಮಯಕ್ಕೆ ಅನುಕೂಲವಾಗುವಂತೆ ಬೆಳಿಗ್ಗೆ 7.30 ಮತ್ತು 8.30 ಬಸ್ ಸೌಲಭ್ಯವಿದ್ದು, ಬಸ್ಸಿನಲ್ಲಿ ಓಡಾಡಲು ಆಗುವುದಿಲ್ಲ, ಎಲ್ಲಾ ವಿದ್ಯಾರ್ಥಿಗಳು ಅದೇ ಸಮಯಕ್ಕೆ ಕಾಲೇಜಿಗೆ ತೆರಳಬೇಕಾಗಿರುವುದರಿಂದ 8.00 ಮತ್ತು 8.30 ಗಂಟೆಗೆ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಂದ 16 ಹೊಸ ಹಾಸ್ಟೆಲ್‌ಗಳು ಮಂಜೂರಾಗಿದ್ದು, ಶೀಘ್ರದಲ್ಲೇ ನಿರ್ಮಾಣ ಕಾರ್ಯ ಆರಂಭವಾಗಲಿದೆ. ಜತೆಗೆ ಬಾಡಿಗೆ ಕಟ್ಟಡಗಳಲ್ಲಿರುವ ಹಾಸ್ಟೆಲ್‌ಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಸರಿಪಡಿಸುವ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.