ಮಹಿಳೆಗೆ ರಕ್ಷಣೆಯ ಕಾನೂನು ಅರಿವು ಅಗತ್ಯ: ಬಲ್ಕೀಶ್ ಬಾನು

KannadaprabhaNewsNetwork |  
Published : Mar 09, 2026, 01:30 AM IST
ಪೋಟೋ: 08ಎಸ್‌ಎಂಜಿಕೆಪಿ04 ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ಇವರ ಸಹಯೋಗದಲ್ಲಿ ಏರ್ಪಡಿಸಿದ್ದ  ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ಕಾನೂನು ಎಲ್ಲ ರೀತಿಯ ರಕ್ಷಣೆ ನೀಡುತ್ತಿದ್ದು ಕಾನೂನುಗಳನ್ನು ಅರಿತು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ಕಾನೂನು ಎಲ್ಲ ರೀತಿಯ ರಕ್ಷಣೆ ನೀಡುತ್ತಿದ್ದು ಕಾನೂನುಗಳನ್ನು ಅರಿತು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು.

ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್ ಸಹಯೋಗದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇವತ್ತು ಅಮ್ಮನ ದಿನ. ಹೆಣ್ಣು ಗಂಡು ಎಂಬ ತಾರತಮ್ಯ ಇಲ್ಲ. ಹೆಣ್ಣುಮಕ್ಕಳಿಗೆ ದೇವರು ಎಲ್ಲ ಗುಣಗಳನ್ನು ನೀಡಿದ್ದು ತಾಯಿಯಾಗಿ, ಮಗಳಾಗಿ, ಸಹೋದರಿಯಾಗಿ, ಪತ್ನಿಯಾಗಿ ಎಲ್ಲ ರೀತಿಯ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಳೆ. ಹೆಣ್ಣುಮಕ್ಕಳು ಈ ಸಮಾಜದಲ್ಲಿ ಏನನ್ನಾದರೂ ಸಾಧಿಸಬಹುದು ಎಂಬ ನಂಬಿಕೆಯನ್ನು ಹೊಂದಿರಬೇಕು. ಹೆಣ್ಣುಮಕ್ಕಳ ಶಿಕ್ಷಣ, ಕ್ರೀಡೆಗೆ ಪ್ರೋತ್ಸಾಹ ಮಾಡುವುದು ತುಂಬಾ ಮುಖ್ಯವಾಗಿದೆ. ವಿವಿಧ ಸಂಘ ಸಂಸ್ಥೆಗಳು ಇಂತಹ ಕಾರ್ಯಗಳಲ್ಲಿ ಭಾಗವಹಿಸುವುದರ ಮೂಲಕ ಉತ್ತಮವಾಗಿ ಈ ದಿನವನ್ನು ಆಚರಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್‌.ಸಂತೋಷ ಮಾತನಾಡಿ, ತಾಯಿ ಜೀವನದಲ್ಲಿ ಕೊನೆಯವರೆಗೂ ಪ್ರೀತಿ, ವಾತ್ಸಲ್ಯ ನೀಡಿ ಮಾರ್ಗದರ್ಶನ ನೀಡುತ್ತಾಳೆ. ಯಾವುದೇ ಒಂದು ಕುಟುಂಬ ಹಾಗೂ ದೇಶದ ಏಳಿಗೆಗೆ ಮಹಿಳೆಯರ ಪಾತ್ರ ತುಂಬಾ ಮುಖ್ಯ. ಪ್ರೀತಿ, ಅಕ್ಕರೆ, ಜೀವನದ ಮುಖ್ಯ ಅಂಶಗಳನ್ನು ನೀಡುವವರೇ ತಾಯಿ, ಅಕ್ಕ, ತಂಗಿಯರಾಗಿದ್ದಾರೆ. ಕುಟುಂಬದ ಸೇತುವೆಯಾಗಿ ಮಹಿಳೆಯರು ಕಾರ್ಯ ನಿರ್ವಹಿಸುತ್ತಾರೆ ಎಂದರು.

ಕಾನೂನಾತ್ಮಕವಾಗಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಅಥವಾ ಸಲಹೆಗಳು ಬೇಕಾದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಡಿಯಲ್ಲಿ ಉಚಿತ ಕಾನೂನು ಅರಿವು, ನೆರವು, ಸಲಹೆಗಳನ್ನು ನೀಡಲಾಗುತ್ತದೆ. ಹಾಗೂ ಸಹಾಯವಾಣಿ 15100 ಸಂಖ್ಯೆಗೆ ಕರೆ ಮಾಡಿ ಸಲಹೆ ಮತ್ತು ನೆರವನ್ನು ಪಡೆಯಬಹುದು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಡಾ.ಹಸೀನಾ ಮಾತನಾಡಿ, ಹೆಣ್ಣು ಒಂದು ದೊಡ್ಡ ಶಕ್ತಿ. ತಾಯಿಯಾಗಿ, ಮಡದಿಯಾಗಿ, ಗೃಹಿಣಿಯಾಗಿ, ಗೆಳತಿಯಾಗಿ, ಸಹೋದರಿಯಾಗಿ ತಮ್ಮ ಬದುಕನ್ನೇ ಕುಟುಂಬಕ್ಕಾಗಿ ಮೀಸಲಿಟ್ಟು ಕಾಪಾಡುತ್ತಾಳೆ. ಮಹಿಳೆ ಧಾರ್ಮಿಕವಾಗಿ,ರಾಜಿಕೀಯವಾಗಿ, ಸಾಮಾಜಿಕವಾಗಿ ಪ್ರತಿಯೊಂದರಲ್ಲೂ ಸಬಲೀಕರಣಗೊಂಡಿದ್ದಾಳೆ. ಭಾರತದ ಮೊದಲ ಅಕ್ಷರದ ಅವ್ವ ಸಾವಿತ್ರಿ ಬಾಯಿ ಫುಲೆ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹಾಗೂ ಹಲವಾರು ಧೀಮಂತ ಮಹಿಳೆಯರು ಸ್ವಾತಂತ್ರ್ಯಹೋರಾಟಕ್ಕೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದು ಅವರ ಚರಿತ್ರೆಯನ್ನು ಇಂದಿನ ಹೆಣ್ಣುಮಕ್ಕಳು ಮನದಲ್ಲಿ ಇಟ್ಟುಕೊಂಡು ಮುಂದಕ್ಕೆ ಸಾಗಬೇಕು ಎಂದು ಹೇಳಿದರು. ಪ್ರಾಚೀನ ಕಾಲದಿಂದ ಇಂದಿನ ಕಾಲದವರೆಗೂ ನಾರಿಶಕ್ತಿಯ ಮುಂದೆ ಬೇರೆ ಯಾವ ಶಕ್ತಿಯು ಇಲ್ಲ, ನಾಡಿನ ಸಂಸ್ಕೃತಿಯನ್ನು, ಪರಂಪರೆಯನ್ನು ಉಳಿಸಿಕೊಂಡು ಹೋಗುವುದರಲ್ಲಿ ಮಹಿಳೆಯರು ತುಂಬಾ ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾ ನಾಯ್ಕ್, ಸ್ನೇಹಲತಾ, ಅರವಿಂದ್, ವಿದ್ಯಾರ್ಥಿಗಳು ಹಾಜರಿದ್ದರು. ಮಹಿಳೆಯರು ಮಹಿಳಾ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅತಿ ಉತ್ಸಾಹದಿಂದ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನದ ಪ್ರತಿ ಹೆಜ್ಜೆಯಲ್ಲೂ ಮಹಿಳೆಯೇ ಶಕ್ತಿ
ತಮಿಳು ಕಾಲೋನಿ ಮಕ್ಕಳಿಗೆ ಕನ್ನಡ ಪಾಠ...!