ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ

KannadaprabhaNewsNetwork |  
Published : Oct 07, 2026, 01:45 AM IST
ವಿಜೆಪಿ ೦೬ವಿಜಯಪುರ ಹೋಬಳಿಯ ಮಂಡಿ ಬೆಲೆ ಗ್ರಾಮದ ಹಾಲಿನ ಡೇರಿಯಲ್ಲಿ, ಧನಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ವತಿಯಿಂದ ಆಯೋಜಿಸಿದ್ದ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಮಹಿಳಯರು. | Kannada Prabha

ಸಾರಾಂಶ

ವಿಜಯಪುರ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳೆಯರು ಸಬಲರಾಗಿ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಕಾಳಜಿ ಸೇರಿದಂತೆ ಕುಟುಂಬದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಯೋಜನಾಧಿಕಾರಿ ದಿನೇಶ್‌ಕುಮಾರ್ ಹೇಳಿದರು

ವಿಜಯಪುರ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳೆಯರು ಸಬಲರಾಗಿ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ. ಕುಟುಂಬದ ನಿರ್ವಹಣೆ, ಮಕ್ಕಳ ಶಿಕ್ಷಣ, ಆರೋಗ್ಯ ಕಾಳಜಿ ಸೇರಿದಂತೆ ಕುಟುಂಬದ ಸಮಗ್ರ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದುದು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕಿನ ಯೋಜನಾಧಿಕಾರಿ ದಿನೇಶ್‌ಕುಮಾರ್ ಹೇಳಿದರು.

ಹೋಬಳಿಯ ಮಂಡಿಬೆಲೆ ಡೇರಿಯಲ್ಲಿ ಧನಲಕ್ಷ್ಮಿ ಜ್ಞಾನವಿಕಾಸ ಕೇಂದ್ರ ಆಯೋಜಿಸಿದ್ದ ಐದನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಹಾಗೂ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಸ್ತ್ರೀ ಸ್ವಸಹಾಯ ಸಂಘಗಳ ಮೂಲಕ ಹಲವು ಸ್ವ ಉದ್ಯೋಗ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಹೈನುಗಾರಿಕೆ, ಟೈಲರಿಂಗ್, ಬ್ಯೂಟಿಷಿಯನ್‌ ಇತ್ಯಾದಿ ಸ್ವಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಮಹಿಳೆಯರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಧನಲಕ್ಷ್ಮಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಗೌರಮ್ಮ ಮಾತನಾಡಿ, ಹಿಂದೆ ಮಹಿಳೆಯರು ಮನೆಯ ಕೆಲಸಕ್ಕೆ ಮಾತ್ರ ಸೀಮಿತರಾಗಿದ್ದರು. ಆದರೆ ಸ್ವಸಹಾಯ ಸಂಘಗಳಿಗೆ ಸೇರಿದ ನಂತರ ನಾಲ್ಕು ಜನರೊಂದಿಗೆ ಬೆರೆಯುವುದು, ಆತ್ಮವಿಶ್ವಾಸದಿಂದ ಮಾತನಾಡುವುದು, ವಿವಿಧ ವೇದಿಕೆಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದು ಹಾಗೂ ಬ್ಯಾಂಕ್ ವ್ಯವಹಾರಗಳನ್ನು ಸ್ವತಂತ್ರವಾಗಿ ನಿರ್ವಹಿಸುವುದನ್ನು ಕಲಿತಿದ್ದೇವೆ ಎಂದರು.

ಸಮಾರಂಭದ ಅಂಗವಾಗಿ ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ದೀಪ, ಮೇಲ್ವಿಚಾರಕ ಉಮೇಶ್, ಕೇಂದ್ರದ ಸದಸ್ಯರು ಹಾಗೂ ಯೋಜನೆಯ ಸಿಬ್ಬಂದಿ ಉಪಸ್ಥಿತರಿದ್ದರು.

(ಫೋಟೊ ಕ್ಯಾಫ್ಞನ್‌)

ವಿಜಯಪುರ ಹೋಬಳಿಯ ಮಂಡಿಬೆಲೆ ಡೇರಿಯಲ್ಲಿ ಧನಲಕ್ಷ್ಮಿ ಜ್ಞಾನವಿಕಾಸ ಕೇಂದ್ರ ಆಯೋಜಿಸಿದ್ದ ಐದನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ಮಹಿಳೆಯರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಜಯಪುರ ಶಾಸಕ ಯತ್ನಾಳ್ ವಿರುದ್ಧ ದಾವಣಗೆರೆ ಕಾಂಗ್ರೆಸ್ ದೂರು
ಶಿಥಿಲ, ಹಳೇ ಪಶು ವೈದ್ಯಕೀಯ ಆಸ್ಪತ್ರೆಗಳ ಪಟ್ಟಿ ನೀಡಿ: ಶಾಂತನಗೌಡ