ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ
ಗ್ರಾಮದ ಪುರಾಣ ಪ್ರಸಿದ್ಧ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಮುಂಭಾಗದ ಹಳೆ ಗ್ರಂಥಾಲಯದಲ್ಲಿ ನಡೆದ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗೇಹಳ್ಳಿ ಟೌನ್ ಮತ್ತು ಹೊನ್ನ ಮಾರನಹಳ್ಳಿ, ವೀರುಪಾಕ್ಷಪುರ, ಹೂವಿನಹಳ್ಳಿ ಗ್ರಾಮಗಳ ವ್ಯಾಪ್ತಿಗಳಲ್ಲಿ ಹಾಗೂ ಇನ್ನಿತರ ಗ್ರಾಮಗಳು ಒಳಗೊಂಡಂತೆ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಬ್ಸಿಡಿ ಸಾಲ ಮತ್ತು ಗ್ರಾಮ ಪಂಚಾಯಿತಿ ಮೂಲಕವೂ ಇನ್ನಿತರ ಸೌಲಭ್ಯಗಳನ್ನು ಶ್ರೀ ಶಕ್ತಿ ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ. ಈ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳುವಂತೆ ತಿಳಿಸಿದರು.ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಹಾಗೂ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟದ ಕಾರ್ಯದರ್ಶಿ ಮಹದೇವಮ್ಮ ಶಂಕರ್ ಮಾತನಾಡಿ, ಕಳೆದ ಅನೇಕ ವರ್ಷಗಳಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟವು ಮಹಿಳೆಯರಿಗೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಹಾಗೂ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ ಕಲ್ಪಿಸುವುದರ ಜೊತೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೂ ಹೆಚ್ಚಿನ ಆದ್ಯತೆ ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರು ಆರ್ಥಿಕವಾಗಿ ಹೆಚ್ಚು ಅಭಿವೃದ್ಧಿ ಹೊಂದುವ ಸಲುವಾಗಿ ಈ ಮಹಿಳಾ ಒಕ್ಕೂಟ ಸರ್ಕಾರ ಮತ್ತು ಗ್ರಾಮ ಪಂಚಾಯಿತಿ ನಡುವೆ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.