ಶೋಷಣೆ ಮುಕ್ತ ಸಮಾಜದಿಂದಲೇ ಮಹಿಳಾ ವಿಮುಕ್ತಿ ಸಾಧ್ಯ

KannadaprabhaNewsNetwork |  
Published : Jul 29, 2026, 02:30 AM IST
ಕೊಪ್ಪಳದ ಎಐಎಂಎಸ್‌ಎಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಶಿಬಿರದಲ್ಲಿ ಎಐಎಂಎಸ್‌ಎಸ್ ರಾಜ್ಯ ಉಪಾಧ್ಯಕ್ಷೆ ಸೀಮಾ ಜಿ.ಎಸ್. ಮಾತನಾಡಿದರು. | Kannada Prabha

ಸಾರಾಂಶ

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ

ಕೊಪ್ಪಳ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ವತಿಯಿಂದ ನಗರದ ಎಐಎಂಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಮಹಿಳಾ ಶಿಬಿರ ನಡೆಯಿತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಎಐಎಂಎಸ್‌ಎಸ್ ರಾಜ್ಯ ಉಪಾಧ್ಯಕ್ಷೆ ಸೀಮಾ ಜಿ.ಎಸ್., ಮಹಿಳೆಯರ ಮೇಲಿನ ದೌರ್ಜನ್ಯ, ಲಿಂಗ ಅಸಮಾನತೆ ಹಾಗೂ ಶೋಷಣೆಯಂತಹ ಸಮಸ್ಯೆಗಳನ್ನು ನಿವಾರಿಸಲು ಶೋಷಣೆ ಮುಕ್ತ ಸಮಾಜ ನಿರ್ಮಾಣ ಅಗತ್ಯವಾಗಿದೆ ಎಂದು ಹೇಳಿದರು.

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಸಂಘಟಿಸುವ ಮೂಲಕ ಸಮಾನತೆ ಮತ್ತು ಗೌರವದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಶಾರದಾ ಗಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾಧ್ಯಕ್ಷೆ ಮಂಜುಳಾ ಮಜ್ಜಿಗಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸೆಕ್ರೆಟರಿಯೇಟ್ ಸದಸ್ಯೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಮಹಿಳೆಯರು, ವಿದ್ಯಾರ್ಥಿನಿಯರು ಭಾಗವಹಿಸಿದ್ದು, ಸಂವಾದ, ಕಿರುಚಿತ್ರ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೈನಿಕರನ್ನು ಗೌರವಿಸುವ ಕಾರ್ಯವಾಗಲಿ
ಶೆಟ್ಟಿಗೇರಿ: ಮಾಜಿ ಸೈನಿಕರ ಸಂಘದಿಂದ ಕಾರ್ಗಿಲ್ ವಿಜಯ ದಿನ ಆಚರಣೆ