ಕನ್ನಡಪ್ರಭ ವಾರ್ತೆ ಮೈಸೂರು
ಸಮಾಲೋಚನೆ ನಡೆಸಲಾಯಿತು.
ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ಮಾತನಾಡಿ, ಮಹಿಳಾ ಮೋರ್ಚಾದ ಪದಾಧಿಕಾರಿಗಳು ತಮ್ಮ ತಮ್ಮ ಬೂತ್ ಗಳಲ್ಲಿ ಬೂತ್ ಅಧ್ಯಕ್ಷರುಗಳ ಜೊತೆಗೂಡಿ ಅತೀ ಹೆಚ್ಚು ಮಹಿಳಾ ಸದಸ್ಯತ್ವ ಮಾಡಿಸುವ ಮೂಲಕ ಬಿಜೆಪಿಗೆ ಹೆಚ್ಚಿನ ಮಹಿಳಾ ಬಲ ದೊರೆಯುವಂತೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತದ ಗುರಿಯಲ್ಲಿ ಮಹಿಳೆಯರಿಗೆ ಸ್ವಾವಲಂಬಿಗಳಾಗಿ ದುಡಿಯಲು ಅನೇಕ ಯೋಜನೆ ಜಾರಿಗೆ ತಂದಿದ್ದು ಅದನ್ನೆಲ್ಲ ಮಹಿಳೆಯರು ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ನಾರಿಶಕ್ತಿಯರು ಮುಂದೆ ಬರಬೇಕು ಎಂದರು.ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿವಾಗಿ ಮಹಿಳೆಯರ ಪಾತ್ರ ಅಪಾರವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಮೋರ್ಚಾ ಹೆಣ್ಣು ಮಕ್ಕಳು ತಮ್ಮ ತಮ್ಮ ವಾರ್ಡ್ ಗಳು ಹಾಗೂ ಬೂತ್ ಗಳಲ್ಲಿ ಸದಸ್ಯತ್ವ ಅಭಿಯಾನದ ಅಂಗವಾಗಿ ಮೊ. 88800 02024 ಈ ಟೋಲ್ ಫ್ರೀ ನಂಬರಿಗೆ ಮಿಸ್ ಕಾಲ್ ಕೊಡಿಸುವ ಮೂಲಕ ಅತೀ ಹೆಚ್ಚು ಮಹಿಳೆಯರನ್ನು ಸದಸ್ಯತ್ವ ಹೊಂದುವಂತೆ ಮಾಡುವ ನಿಟ್ಟಿನಲ್ಲಿ ಪಕ್ಷ ಬಲಗೊಳಿಸಬೇಕು. ಪ್ರತೀ ಚುನಾವಣೆಗಳಲ್ಲಿಯೂ ಮಹಿಳಾ ಪಾತ್ರ ಹೆಚ್ಚಿನದ್ದಾಗಿರಬೇಕು. ಇಡೀ ರಾಷ್ಟ್ರದಲ್ಲಿ ಮಹಿಳಾ ಸದಸ್ಯತ್ವ ಹೆಚ್ಚಿರುವ ಪಕ್ಷ ನಮ್ಮಬಿಜೆಪಿ ಯದ್ದಾಗಿರಬೇಕು ಎಂದರು.
ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ಎಂಡಿಎ ಹಗರಣದಲ್ಲಿ ಸಿಎಂ ಭಾಗಿಯಾಗಿದ್ದು ರಾಜ್ಯದ ಜನತೆಗೆ ಇವರಿಂದ ಯಾವ ರೀತಿಯಾದ ಆಡಳಿತ ಕೊಡಲು ಸಾಧ್ಯ? ಬಿಟ್ಟಿ ಭಾಗ್ಯಗಳನ್ನು ಪೂರೈಸಲಾಗದ ಕಾಂಗ್ರೆಸ್ ಸರ್ಕಾರ ವಿವಿಧ ಅನುದಾನಗಳನ್ನು ತಮಗೆ ಬೇಕಾದ ಹಾಗೆ ಬಳಸಿಕೊಳ್ಳುತ್ತಿದೆ. ಇದರಿಂದ ಇಡೀ ರಾಜ್ಯದ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತಿದೆ. ಅಭಿವೃದ್ಧಿ ಇಲ್ಲದೇ ನಮ್ಮರಾಜ್ಯ ಸುಮಾರು 30 ವರ್ಷಗಳ ಹಿಂದೆ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ನ ಭ್ರಷ್ಟಾಚಾರದ ಬಗ್ಗೆ ವಿವರಿಸಿದರು.
ಬಳಿಕ ಮಾತನಾಡಿದ ರಾಜ್ಯ ಕಾರ್ಯದರ್ಶಿ ಲೋಕೇಶ್ ಅಂಬೆಗಲ್, ನಮ್ಮ ಬಿಜೆಪಿ ಮಹಿಳಾ ಮೋರ್ಚಾದವರು ರಾಜ್ಯದೆಲ್ಲೆಡೆ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ಮಹಿಳಾ ಸದಸ್ಯತ್ವವು ಮೈಲಿಗಲ್ಲು ಪಡೆಯಬೇಕು ಎಂದು ಅಭಿಪ್ರಾಯಪಟ್ಟರು.
ಸದಸ್ಯತ್ವ ಅಭಿಯಾನದಲ್ಲಿ ಇಡೀ ರಾಷ್ಟ್ರದಲ್ಲಿ ಹೆಣ್ಣುಮಕ್ಕಳದೇ ಮೇಲುಗೈ ಆಗಿರಬೇಕು ಎಂದು ಮಹಿಳಾ ಮೋರ್ಚಾ ಕುರಿತು ಶ್ಲಾಘಿಸಿದರು.