ದೇಶದ ಅಭಿವೃದ್ಧಿಗೆ ಮಹಿಳೆಯರ ಪ್ರಗತಿ ಮುಖ್ಯ: ಬಲ್ಕೀಶ್ ಬಾನು

KannadaprabhaNewsNetwork |  
Published : Mar 09, 2026, 01:30 AM IST
ಪೋಟೋ: 08ಎಸ್‌ಎಂಜಿಕೆಪಿ03ಶಿವಮೊಗ್ಗದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ  ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಅಂಗನವಾಡಿ‌ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.  | Kannada Prabha

ಸಾರಾಂಶ

ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪ್ರಗತಿಯಾಗಬೇಕು‌. ಮಹಿಳೆ ಪ್ರಗತಿ ಹೊಂದಲು ಶಿಕ್ಷಣ ಮತ್ತು ಕುಟುಂಬದ ಬೆಂಬಲ ಅತಿ ಅವಶ್ಯ ಎಂದು‌ ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು.

ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯಡಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭೂಮಿಯಿಂದ ಆಕಾಶದವರೆಗೆ ಇಂದು ಎಲ್ಲ ಕ್ಷೇತ್ರದಲ್ಲಿ ಹೆಣ್ಣು ಮುಂದೆ ಬರುತ್ತದ್ದಾಳೆ. ಇದಕ್ಕೆ ಮುಖ್ಯ ಕಾರಣ ಶಿಕ್ಷಣ. ಹಿಂದೆ ಹೆಣ್ಣುಮಕ್ಕಳಿಗೆ ಹೆಚ್ಚಿನದಾಗಿ ಮೌಲ್ಯಾಧಾರಿತ ಉಪಚಾರ ಹೇಳಲಾಗುತ್ತಿತ್ತು. ಆಕೆಯ ಪ್ರಗತಿ‌ಗೆ ಅವಕಾಶ ಇರಲಿಲ್ಲ. ತ್ಯಾಗ, ಸಹನೆ ಜನ್ಮತಃ ಹೊಂದಿರುವ ಹೆಣ್ಣು ಮನೆಯಲ್ಲಿ ಹೋಂ‌ಮಿನಿಸ್ಟರ್ ಆದಿಯಾಗಿ ಎಲ್ಲ ಜವಾಬ್ದಾರಿ ನಿರ್ವಹಣೆ ಮಾಡುತ್ತಾಳೆ.‌ ಕೃಷಿ, ಕೈಗಾರಿಕೆಯಿಂದ ಹಿಡಿದು ದೊಡ್ಡ ದೊಡ್ಡ ಹುದ್ದೆಯನ್ನು ಅತ್ಯಂತ ಸಮರ್ಥವಾಗಿ ನಿರ್ವಹಿಸುತ್ತಿದ್ದಾರೆ ಎಂದರು.

ಮಹಿಳಾ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿದೆ. ಮಹಿಳೆಯರ ಯುಗ ರಾಜ್ಯದಲ್ಲಿದೆ. ಗ್ಯಾರಂಟಿ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿ, ಹೆಣ್ಣು ಸಬಲಳು. ನೋವನ್ನು ಸಹಿಸಿ ಆಕೆ ನಗುತ್ತಾಳೆ. ದೇವರು ಆಕೆಗೆ ವಿಶೇಷ ಶಕ್ತಿ ನೀಡಿದ್ದಾರೆ. ಸಹನೆ, ಪ್ರೀತಿಯನ್ನು ಹೆಚ್ಚಿಸುವ ಶಕ್ತಿಯನ್ನು ಸೃಷ್ಟಿ ಆಕೆಗೆ ನೀಡಿದೆ ಎಂದರು.

ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೂಡಾ ಅಧ್ಯಕ್ಷ ಸುಂದರೇಶ್, ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷೆ ಪ್ರೊ.ಕಿರಣ್ ಆರ್. ದೇಸಾಯಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ನಿರೂಪಣಾಧಿಕಾರಿ ಡಾ.ಸಂತೋಷ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖಾ, ತಾಜುದ್ದೀನ್ ಖಾನ್, ರೇಖಾ, ಪ್ರಭಾವತಿ, ಅಕ್ಕ ಪಡೆ ಎಎಸ್ ಐ ಹೇಮಾ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೀವನದ ಪ್ರತಿ ಹೆಜ್ಜೆಯಲ್ಲೂ ಮಹಿಳೆಯೇ ಶಕ್ತಿ
ತಮಿಳು ಕಾಲೋನಿ ಮಕ್ಕಳಿಗೆ ಕನ್ನಡ ಪಾಠ...!