ಮಹಿಳೆಯರು ತರಬೇತಿ ಪಡೆದು ಆರ್ಥಿಕವಾಗಿ ಸದೃಡವಾಗಿರಬೇಕು - ಎನ್‌.ಎಲ್‌.ಮನೀಶ

KannadaprabhaNewsNetwork |  
Published : Oct 22, 2024, 12:07 AM IST
ನರಸಿಂಹರಾಜಪುರ ತಾಲೂಕು ಪಂಚಾಯಿತಿಯಲ್ಲಿ ನಡೆದ ಮಹಿಳಾ ಸದಸ್ಯರಿಗೆ ಉದ್ಯಮ ಶೀಲತಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎನ್‌.ಎಲ್‌.ಮನೀಶ್‌ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಸ್ತ್ರೀ ಶಕ್ತಿ ಸಂಘ, ಸ್ವ ಸಹಾಯ ಸಂಘದ ಮಹಿಳೆಯರು ಸಂಸ್ಥೆಗಳಿಂದ ನೀಡುವ ತರಬೇತಿಗಳನ್ನು ಪಡೆದು ಆರ್ಥಿಕವಾಗಿ ಸಧೃಢರಾಗಬೇಕು ಎಂದು ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.

ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಉದ್ಯಮ ಶೀಲತಾಭಿವೃದ್ದಿ ತರಬೇತಿ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಸ್ತ್ರೀ ಶಕ್ತಿ ಸಂಘ, ಸ್ವ ಸಹಾಯ ಸಂಘದ ಮಹಿಳೆಯರು ಸಂಸ್ಥೆಗಳಿಂದ ನೀಡುವ ತರಬೇತಿಗಳನ್ನು ಪಡೆದು ಆರ್ಥಿಕವಾಗಿ ಸಧೃಢರಾಗಬೇಕು ಎಂದು ತಾಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.

ಸೋಮವಾರ ತಾಪಂ ಸಾಮರ್ಥ್ಯಸೌಧದಲ್ಲಿ ಬೆಂಗಳೂರಿನ ಕೆ.ಎಸ್.ಆರ್.ಎಲ್.ಪಿ.ಎಸ್, ಧಾರವಾಡದ ಕರ್ನಾಟಕ ಉದ್ಯಮ ಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ತಾಪಂ ಹಾಗೂ ಎನ್.ಆರ್.ಎಲ್.ಎಂ ಯೋಜನೆಯಡಿ ನಡೆದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಅನೇಕ ಉತ್ಪನ್ನಗಳು ದೊರೆಯುತ್ತವೆ. ಆದರೆ ಅವು ಗ್ರಾಮೀಣ ಮಾರುಕಟ್ಟೆಯಲ್ಲಿ ದೊರಕದೆ, ನಗರ ಪ್ರದೇಶಗಳಲ್ಲಿ ಮಾರಾಟವಾಗುತ್ತಿವೆ. ಗ್ರಾಮೀಣ ಭಾಗದ ಉತ್ಪನ್ನಗಳನ್ನು ಹೇಗೆ ತಯಾರಿಸುವುದು ? ಅವುಗಳಿಗೆ ಹೇಗೆ ಮಾರುಕಟ್ಟೆಗೆ ಕೊಂಡೊಯ್ದು ಮಾರಾಟ ಮಾಡಬೇಕೆಂಬ ಬಗ್ಗೆ ಅರಿವಿರುವುದಿಲ್ಲ. ಆದ್ದರಿಂದಲೇ ಗ್ರಾಮೀಣ ಭಾಗದ ಮಹಿಳೆಯರಿಗೆ ಸ್ವ ಉದ್ಯೋಗದ ಬಗ್ಗೆ ತರಬೇತಿಗಳನ್ನು ಆಯೋಜಿಸಲಾಗುತ್ತದೆ. ಇಂತಹ ತರಬೇತಿ ಕಾರ್ಯಕ್ರಮಗಳ ಸದುಪಯೋಗವನ್ನು ಎಲ್ಲಾ ಮಹಿಳೆಯರೂ ಕೂಡ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಎನ್.ಆರ್.ಎಲ್.ಎಂ ಯೋಜನೆಯ ತಾಲೂಕು ವ್ಯವಸ್ಥಾಪಕ ಸುಬ್ರಮಣ್ಯ ಮಾತನಾಡಿ, ಹಲವಾರು ಎನ್ ಜಿ ಓ ಗಳ ಮೂಲಕ ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ. ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳು ಹಾಗೂ ಅವರ ಜೀವನೋಪಾಯಕ್ಕೆ ಬೇಕಾದ ಅವಶ್ಯಕ ತರಬೇತಿ ಯಾದ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಸಿಡಾಕ್ ಮೂಲಕ ನೀಡಲಾಗುತ್ತಿದೆ. ತರಬೇತಿಯಲ್ಲಿ ಉತ್ಪನ್ನಗಳ ತಯಾರಿಕೆ, ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಸಂಪೂರ್ಣ ತರಬೇತಿ ನೀಡಲಾಗುತ್ತದೆ. ಈ ತರಬೇತಿ ಒಟ್ಟು 6 ದಿನಗಳ ಕಾಲ ನಡೆಯಲಿದ್ದು ಒಂದು ದಿನ ಕ್ಷೇತ್ರ ಭೇಟಿ ಇರುತ್ತದೆ. ತರಬೇತಿಯಲ್ಲಿ ಮಹಿಳೆಯರು ಪರಸ್ಪರ ಚರ್ಚಿಸುವ ಮೂಲಕ ತಮ್ಮಲ್ಲಿ ಇರುವ ಅನುಮಾನ, ಸಂದೇಹಗಳನ್ನು ಬಗೆಹರಿಸಿಕೊಳ್ಳಬೇಕೆಂದರು.ಸಂಪನ್ಮೂಲ ವ್ಯಕ್ತಿಗಳಾದ ಧಾರವಾಡದ ಸಿಡಾಕ್ ಸಂಸ್ಥೆಯ ತರಬೇತಿ ಅಧಿಕಾರಿ ದಿಲೀಪ್ ಹಾಗೂ ಎನ್.ಆರ್.ಪುರದ ಸೋಷಿಯಲ್ ವೆಲ್‌ಫೇರ್ ಸೊಸೈಟಿ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ್ ಮಹಿಳಾ ಸದಸ್ಯರಿಗೆ ತರಬೇತಿ ನೀಡಿದರು.ಈ ಸಂದರ್ಭದಲ್ಲಿ ಮಹಿಳಾ ಸಾಂತ್ವನ ಸಹಾಯಕ ಕೇಂದ್ರದ ಶಶಿಕಲಾ, ಎನ್.ಆರ್.ಎಲ್.ಎಂ ಯೋಜನೆ ಕಿಶೋರ್,ಶ್ವೇತಾ ಉಪಸ್ಥಿತರಿದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...